ಪಂಜಾಬ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ (Punjab) ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು (Rape Cases) ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲು ಅಲ್ಲಿನ ಅಧಿಕಾರಿಗಳು ನಿರ್ಧರಿಸಿದ್ದಾರೆ. ಅತ್ಯಾಚಾರ ಪ್ರಕರಣಗಳನ್ನು ಎದುರಿಸಲು ತುರ್ತು ಪರಿಸ್ಥಿತಿಯನ್ನು (Emergency) ಘೋಷಿಸಲು ಆಡಳಿತವನ್ನು ಒತ್ತಾಯಿಸಲಾಗಿದೆ ಎಂದು ಪಾಕಿಸ್ತಾನದ ಪಂಜಾಬ್ ಗೃಹ ಸಚಿವ ಅಟ್ಟ ತರಾರ್ ಹೇಳಿದ್ದಾರೆ.
ಪಂಜಾಬ್ ಪ್ರಾಂತ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಸಮಾಜ ಮತ್ತು ಸರ್ಕಾರಿ ಅಧಿಕಾರಿಗಳಿಗೆ ಗಂಭೀರ ಸಮಸ್ಯೆಯಾಗಿದೆ ಎಂದು ಸಚಿವ ಅಟ್ಟ ತರಾರ್ ಹೇಳಿದ್ದಾರೆ. ಪಂಜಾಬ್‌ನಲ್ಲಿ ಪ್ರತಿದಿನ ನಾಲ್ಕೈದು ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿವೆ. ಇದರಿಂದಾಗಿ ಲೈಂಗಿಕ ಕಿರುಕುಳ, ನಿಂದನೆ ಮತ್ತು ಬಲವಂತದ ಪ್ರಕರಣಗಳನ್ನು ಎದುರಿಸಲು ಸರ್ಕಾರ ವಿಶೇಷ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ ಎಂದು ಪಂಜಾಬ್ ಪ್ರಾಂತೀಯ ಸಚಿವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: Rape: 75 ವರ್ಷದ ಉದ್ಯಮಿಯಿಂದ ಮಹಿಳೆ ಮೇಲೆ ಅತ್ಯಾಚಾರ; ಯಾರಿಗೂ ಹೇಳದಂತೆ ದಾವೂದ್ ಇಬ್ರಾಹಿಂ ಹೆಸರಲ್ಲಿ ಬೆದರಿಕೆ!
ಪಂಜಾಬ್‌ನಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯದ ಎಲ್ಲಾ ಪ್ರಕರಣಗಳನ್ನು ಅತ್ಯಾಚಾರ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಕ್ಯಾಬಿನೆಟ್ ಸಮಿತಿಯು ಪರಿಶೀಲಿಸುತ್ತದೆ. ಅಂತಹ ಘಟನೆಗಳ ಮೇಲೆ ನಿಗಾ ಇರಿಸಿ ನಾಗರಿಕ ಸಮಾಜ, ಮಹಿಳಾ ಹಕ್ಕುಗಳ ಸಂಘಟನೆಗಳು, ಶಿಕ್ಷಕರು ಮತ್ತು ವಕೀಲರನ್ನು ಸಹ ಸಮಾಲೋಚಿಸಲಾಗುವುದು ಎನ್ನಲಾಗಿದೆ.
ಪೋಷಕರು ತಮ್ಮ ಮಕ್ಕಳಿಗೆ ಸುರಕ್ಷತೆಯ ಮಹತ್ವದ ಬಗ್ಗೆ ಕಲಿಸಬೇಕೆಂದು ಸಚಿವ ತರಾರ್ ಒತ್ತಾಯಿಸಿದ್ದಾರೆ. ಈಗಾಗಲೇ ಹಲವಾರು ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಸರ್ಕಾರವು ಅತ್ಯಾಚಾರ ವಿರೋಧಿ ಅಭಿಯಾನವನ್ನು ಪ್ರಾರಂಭಿಸಿದೆ. ಶಾಲೆಗಳಲ್ಲಿ ಲೈಂಗಿಕ ಕಿರುಕುಳದ ಬಗ್ಗೆ ವಿದ್ಯಾರ್ಥಿಗಳನ್ನು ಸಂವೇದನಾಶೀಲಗೊಳಿಸಲಾಗುವುದು ಎಂದು ಸಚಿವ ತರಾರ್ ಹೇಳಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:02 pm, Tue, 21 June 22