ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದವನ್ನು ತೀರ್ಮಾನಿಸಲು ಸಿದ್ಧ: ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್

ಶನಿವಾರದಂದು ಹೊಸದಾಗಿ ಚುನಾಯಿತರಾದ ಯುಕೆ ಪ್ರಧಾನ ಮಂತ್ರಿಯವರ ಇಂಡೋ-ಪೆಸಿಫಿಕ್ ಸಂಬಂಧಿತ ಅಂತಾರಾಷ್ಟ್ರೀಯ ಕರೆಗಳಲ್ಲಿ ಮೋದಿ ಅವರು ಮೊದಲು ಕರೆ ಮಾಡಿದ್ದು ನಂತರ ಜಪಾನ್ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಕರೆ ಮಾಡಿದ್ದಾರೆ ಎಂದು ಡೌನಿಂಗ್ ಸ್ಟ್ರೀಟ್ ಪ್ರಕಟಣೆ ತಿಳಿಸಿದೆ. ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಮಹತ್ವವನ್ನು ಒತ್ತಿ ಹೇಳಿದರು ಎಂದು ಪ್ರಧಾನಿ ಮೋದಿಯವರ ಕಚೇರಿ ಹೇಳಿದೆ.

ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದವನ್ನು ತೀರ್ಮಾನಿಸಲು ಸಿದ್ಧ: ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್
ಕೀರ್ ಸ್ಟಾರ್ಮರ್
Follow us
ರಶ್ಮಿ ಕಲ್ಲಕಟ್ಟ
|

Updated on:Jul 06, 2024 | 8:04 PM

ಲಂಡನ್ ಜುಲೈ 06: ಬ್ರಿಟನ್‌ನ ನೂತನ ಪ್ರಧಾನಿ ಕೀರ್ ಸ್ಟಾರ್ಮರ್ (Keir Starmer) ಅವರು ಶನಿವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೊಂದಿಗೆ ಮಾತನಾಡಿದ್ದು ಎರಡೂ ದೇಶಗಳಿಗೆ  ಉಪಯುಕ್ತವಾಗುವ ಮುಕ್ತ ವ್ಯಾಪಾರ ಒಪ್ಪಂದವನ್ನು ತೀರ್ಮಾನಿಸಲು ತಾನು ಸಿದ್ಧ ಎಂದು ಹೇಳಿರುವುದಾಗಿ ಡೌನಿಂಗ್ ಸ್ಟ್ರೀಟ್ ಹೇಳಿದೆ. ಭಾರತ ಮತ್ತು ಯುಕೆ ಎರಡು ವರ್ಷಗಳಿಂದ ಕನ್ಸರ್ವೇಟಿವ್ ಪಕ್ಷದ ನೇತೃತ್ವದ ಸರ್ಕಾರದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ (ಎಫ್‌ಟಿಎ) ಮಾತುಕತೆ ನಡೆಸುತ್ತಿವೆ. ಆದರೆ ಎರಡೂ ದೇಶಗಳಲ್ಲಿನ ಸಾರ್ವತ್ರಿಕ ಚುನಾವಣೆಗ ನಡುವೆ ಮಾತುಕತೆಗಳು 14 ನೇ ಸುತ್ತಿನಲ್ಲಿ ಸ್ಥಗಿತಗೊಂಡವು.

ಈ ವಾರ ಬಹುಮತದಿಂದ ಅಧಿಕಾರಕ್ಕೇರಿದ ಹೊಸ ಸ್ಟಾರ್ಮರ್ ನೇತೃತ್ವದ ಲೇಬರ್ ಸರ್ಕಾರವು ಅದನ್ನು ಈಗ ಕೈಗೆತ್ತಿಕೊಳ್ಳುವ ನಿರೀಕ್ಷೆಯಿದೆ.

ಶನಿವಾರದಂದು ಹೊಸದಾಗಿ ಚುನಾಯಿತರಾದ ಯುಕೆ ಪ್ರಧಾನ ಮಂತ್ರಿಯವರ ಇಂಡೋ-ಪೆಸಿಫಿಕ್ ಸಂಬಂಧಿತ ಅಂತಾರಾಷ್ಟ್ರೀಯ ಕರೆಗಳಲ್ಲಿ ಮೋದಿ ಅವರು ಮೊದಲು ಕರೆ ಮಾಡಿದ್ದು ನಂತರ ಜಪಾನ್ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಕರೆ ಮಾಡಿದ್ದಾರೆ ಎಂದು ಡೌನಿಂಗ್ ಸ್ಟ್ರೀಟ್ ಪ್ರಕಟಣೆ ತಿಳಿಸಿದೆ.

ನಾಯಕರು ತಮ್ಮ ಚುನಾವಣಾ ಗೆಲುವಿಗಾಗಿ ಅಭಿನಂದನೆಗಳನ್ನು ವಿನಿಮಯ ಮಾಡಿಕೊಂಡಿದ್ದು ಯುಕೆ ಮತ್ತು ಭಾರತದ ನಡುವಿನ ಸಂಬಂಧದ ಬಲವನ್ನು ಪ್ರತಿಬಿಂಬಿಸಿದರು” ಎಂದು ಡೌನಿಂಗ್ ಸ್ಟ್ರೀಟ್ ವಕ್ತಾರರು ತಿಳಿಸಿದ್ದಾರೆ. “ಮುಕ್ತ ವ್ಯಾಪಾರ ಒಪ್ಪಂದವನ್ನು ಚರ್ಚಿಸುತ್ತಾ, ಪ್ರಧಾನ ಮಂತ್ರಿ ಅವರು ಮುಕ್ತ ವ್ಯಾಪಾರ ಒಪ್ಪಂದವನ್ನು ತೀರ್ಮಾನಿಸಲು ಸಿದ್ಧರಾಗಿದ್ದಾರೆ ಎಂದು ಹೇಳಿದರು. ನಾಯಕರು ಸಾಧ್ಯವಾದಷ್ಟು ಬೇಗ ಭೇಟಿಯಾಗಲು ಆಶಿಸಿದರು, ”ಎಂದು ವಕ್ತಾರರು ಹೇಳಿದರು.

ಇದನ್ನೂ ಓದಿ: ಬ್ರಿಟನ್‌ನ ನೂತನ ಪ್ರಧಾನಿ ಕೀರ್ ಸ್ಟಾರ್ಮರ್​​​ಗೆ ಕರೆ ಮಾಡಿ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ ಮೋದಿ

ಬೋರಿಸ್ ಜಾನ್ಸನ್ ಬ್ರಿಟಿಷ್ ಪ್ರಧಾನಿಯಾಗಿದ್ದಾಗ ಜನವರಿ 2022 ರಿಂದ GBP 38.1 ಶತಕೋಟಿ ದ್ವಿಪಕ್ಷೀಯ ವ್ಯಾಪಾರ ಪಾಲುದಾರಿಕೆಯನ್ನು ಹೆಚ್ಚಿಸಲು ಎರಡೂ ಕಡೆಯವರು ಒಪ್ಪಂದವನ್ನು ಮಾಡಿಕೊಳ್ಳಲು ಕೆಲಸ ಮಾಡುತ್ತಿದ್ದಾರೆ.

ಬ್ರಿಟನ್ ಪ್ರಧಾನಿಗೆ ಮೋದಿ ಕರೆ

ಪಿಎಂ ನರೇಂದ್ರ ಮೋದಿ ಮತ್ತು ಯುಕೆ ಪಿಎಂ ಕೀರ್ ಸ್ಟಾರ್ಮರ್ ಅವರು ಭಾರತ ಮತ್ತು ಯುಕೆ ನಡುವಿನ ಐತಿಹಾಸಿಕ ಬಾಂಧವ್ಯವನ್ನು ನೆನಪಿಸಿಕೊಂಡಿದ್ದು ಉಭಯ ರಾಷ್ಟ್ರಗಳ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ ಎಂದು ಪ್ರಧಾನಿ ಕಚೇರಿಯ ಹೇಳಿಕೆ ತಿಳಿಸಿದೆ.

ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಮಹತ್ವವನ್ನು ಒತ್ತಿ ಹೇಳಿದರು.  ಬ್ರಿಟನ್ ನ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಯಲ್ಲಿ ಭಾರತೀಯ ಸಮುದಾಯದ ಸಕಾರಾತ್ಮಕ ಕೊಡುಗೆಗಳನ್ನು ಶ್ಲಾಘಿಸಿದ ಅವರು, ಜನರು-ಜನರ ನಡುವಿನ ನಿಕಟ ಸಂಬಂಧಗಳನ್ನು ಉತ್ತೇಜಿಸಲು ಅವರು ಒಪ್ಪಿಕೊಂಡರು ಎಂದು ಪಿಎಂಒ ಕಚೇರಿಯ ಹೇಳಿಕೆ ತಿಳಿಸಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:01 pm, Sat, 6 July 24

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ