AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

North Korea: ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ಅಪ್ರಾಪ್ತರಿಗೆ ಮರಣದಂಡನೆ

ಪೊಂಗ್ಯಾಂಗ್: ಉತ್ತರ ಕೊರಿಯಾದಲ್ಲಿ ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.

North Korea: ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ಅಪ್ರಾಪ್ತರಿಗೆ ಮರಣದಂಡನೆ
Kim Jong Un
Follow us
TV9 Web
| Updated By: ನಯನಾ ರಾಜೀವ್

Updated on: Dec 07, 2022 | 9:10 AM

ಪೊಂಗ್ಯಾಂಗ್: ಉತ್ತರ ಕೊರಿಯಾದಲ್ಲಿ ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳು ದಕ್ಷಿಣ ಕೊರಿಯಾದ ಡ್ರಾಮಾವನ್ನು (South Korean Drama) ವೀಕ್ಷಿಸಿದ ಹಿನ್ನೆಲೆಯಲ್ಲಿ ಆ ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಿದ ಘಟನೆ ಉತ್ತರ ಕೊರಿಯಾದಲ್ಲಿ (North Korea) ನಡೆದಿದೆ.

ದಕ್ಷಿಣ ಕೊರಿಯಾ ಸಿನಿಮಾ ವೀಕ್ಷಿಸುವುದನ್ನು ಉತ್ತರ ಕೊರಿಯಾ ನಿಷೇಧಿಸಿದೆ. 16-17 ವರ್ಷದ ಇಬ್ಬರು ವಿದ್ಯಾರ್ಥಿಗಳು ಶಾಲೆಯ ಕೋಣೆಯೊಂದರಲ್ಲಿ ಕೆ ಡ್ರಾಮಾ ವೀಕ್ಷಿಸಿದ್ದರಿಂದ ಅವರನ್ನು ಬಂಧಿಸಿ ವಾಯುನೆಲೆಯ ಮೈದಾನದಲ್ಲಿ ಸ್ಥಳೀಯರ ಎದುರು ಗಲ್ಲಿಗೇರಿಸಲಾಗಿದೆ ಎನ್ನುವ ಕುರಿತು ಮಾಹಿತಿ ಲಭ್ಯವಾಗಿದೆ.

ಉತ್ತರ ಕೊರಿಯಾದ ರಿಯಾಂಗ್‍ಗಾಂಗ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ. ಈ ಭಾಗವು ಚೀನಾದ ಗಡಿ ಭಾಗದ ಸಮೀಪವಿದೆ. ಈ ಹಿನ್ನೆಲೆಯಲ್ಲಿ ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಸುಲಭವಾಗಿ ದಕ್ಷಿಣ ಕೊರಿಯಾ ಹಾಗೂ ಅಮೆರಿಕದ ಸಿನಿಮಾಗಳು ಸುಲಭವಾಗಿ ಸಿಗುತ್ತವೆ. ಈ ಹಿನ್ನೆಲೆಯಲ್ಲಿ ಈ ಇಬ್ಬರು ವಿದ್ಯಾರ್ಥಿಗಳಿಗೂ ಕೆ- ಡ್ರಾಮಾ ದೊರೆತಿದಿದ್ದು, ವೀಕ್ಷಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಅಕ್ಟೋಬರ್ ತಿಂಗಳಿನಲ್ಲಿ ಬಾಲಕರನ್ನು ಗಲ್ಲಿಗೇರಿಸಲಾಗಿತ್ತು, ಈ ಸುದ್ದಿ ಕಳೆದ ವಾರ ಬೆಳಕಿಗೆ ಬಂದಿದೆ. ಬಾಲಕರು ದುಷ್ಕೃತ್ಯವೆಸಗಿದ್ದಾರೆ ಹೀಗಾಗಿ ಅವರನ್ನು ಗಲ್ಲಿಗೇರಿಸಲಾಗಿದೆ ಎಂದು ಉತ್ತರ ಕೊರಿಯಾ ನಿಲುವನ್ನು ಸಮರ್ಥಿಸಿಕೊಂಡಿದೆ.

ತಾವು ವೀಕ್ಷಿಸಿದ ದಕ್ಷಿಣ ಕೊರಿಯಾದ ಕೆ-ಡ್ರಾಮಾವನ್ನು ಈ ಇಬ್ಬರು ವಿದ್ಯಾರ್ಥಿಗಳು ತಮ್ಮ ಸ್ನೇಹಿತರಿಗೂ ನೀಡಿದ್ದಾರೆ. ಆದರೆ ಉತ್ತರ ಕೋರಿಯಾದಲ್ಲಿ ದಕ್ಷಿಣ ಕೋರಿಯಾದ ಸಿನಿಮಾ, ಡ್ರಾಮಾವನ್ನು ವೀಕ್ಷಿಸುವುದು ಕಾನೂನು ಬಾಹಿರವಾಗಿದೆ. ಈ ಹಿನ್ನೆಲೆಯಲ್ಲಿ ಕಿಮ್ ಜಾಂಗ್ ಉನ್ ಸರ್ಕಾರವು ಆ ಇಬ್ಬರು ವಿದ್ಯಾರ್ಥಿಗಳನ್ನು ಗಲ್ಲಿಗೇರಿಸಿದ್ದಾರೆ .

ಕೊರಿಯನ್ ಡ್ರಾಮಾ ವೀಕ್ಷಿಸಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಸಾರ್ವಜನಿಕರ ಮುಂದೆ ದಕ್ಷಿಣ ಕೊರಿಯಾದ ಪೊಲೀಸರು ಕರೆತಂದಿದ್ದಾರೆ. ಅದಾದ ಬಳಿಕ ಅವರಿಗೆ ಮರಣದಂಡನೆ ವಿಧಿಸಿದ್ದಾರೆ. ಅದಾದ ಬಳಿಕ ಏರ್‌ಫೀಲ್ಡ್‌ನಲ್ಲಿ ಅಧಿಕಾರಿಗಳು ಈ ವಿದ್ಯಾರ್ಥಿಗಳನ್ನು ಗಲ್ಲಿಗೇರಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ