AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊನಾಲ್ಡ್ ಟ್ರಂಪ್ ಮತ್ತು ಬೆಂಜಮಿನ್ ನೆತನ್ಯಾಹು ಹತ್ಯೆಗೆ ಸುಪಾರಿ ಕೊಟ್ಟಿತೇ ಇರಾನ್?

ಮಧ್ಯಪ್ರಾಚ್ಯದಲ್ಲಿ ಜಾಗತಿಕ ರಾಜತಾಂತ್ರಿಕ ಬಿಕ್ಕಟ್ಟು ಮತ್ತೊಂದು ಅತ್ಯಂತ ಉಗ್ರ ಹಾಗೂ ಅಪಾಯಕಾರಿ ಹಂತಕ್ಕೆ ತಲುಪಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹತ್ಯೆ ಮಾಡುವವರಿಗೆ ಬರೋಬ್ಬರಿ 58 ಮಿಲಿಯನ್ ಡಾಲರ್ ಬಂಪರ್ ಬಹುಮಾನ ನೀಡುವುದಾಗಿ ಇರಾನ್ ಸಂಸತ್ತು ಮಸೂದೆಯೊಂದನ್ನು ಸಿದ್ಧಪಡಿಸುತ್ತಿದೆ. ಇಡೀ ಜಾಗತಿಕ ರಾಜಕೀಯವನ್ನೇ ಬೆಚ್ಚಿಬೀಳಿಸಿರುವ ಈ ಇರಾನ್ ರಣತಂತ್ರದ ಸಂಪೂರ್ಣ ವಿವರ ಇಲ್ಲಿದೆ.

ಡೊನಾಲ್ಡ್ ಟ್ರಂಪ್ ಮತ್ತು ಬೆಂಜಮಿನ್ ನೆತನ್ಯಾಹು ಹತ್ಯೆಗೆ  ಸುಪಾರಿ ಕೊಟ್ಟಿತೇ ಇರಾನ್?
ಡೊನಾಲ್ಡ್​ ಟ್ರಂಪ್-ನೆತನ್ಯಾಹು Image Credit source: LA Times
ನಯನಾ ರಾಜೀವ್
|

Updated on: May 19, 2026 | 11:56 AM

Share

ಟೆಹ್ರಾನ್, ಮೇ 19: ಅಮೆರಿಕ, ಇಸ್ರೇಲ್ ಮತ್ತು ಇರಾನ್(Iran) ನಡುವಿನ ಶೀತಲ ಸಮರ ಈಗ ನೇರ ಕೊಲೆ ಬೆದರಿಕೆಯಾಗಿ ಮಾರ್ಪಟ್ಟಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಇರಾನ್ ಸರ್ಕಾರ ಮುಂದಾಗಿದ್ದು, ಈಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹತ್ಯೆಗೆ ಮುಂದಾಗಿದೆ. ಇವರಿಬ್ಬರನ್ನು ಕೊಲ್ಲುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗೆ 50 ಮಿಲಿಯನ್ ಯುರೋ ($58.23 ಮಿಲಿಯನ್) ಬಹುಮಾನ ನೀಡುವ ಅಧಿಕೃತ ಮಸೂದೆಯೊಂದನ್ನು ಇರಾನ್ ಸಂಸತ್ತು ಸಿದ್ಧಪಡಿಸುತ್ತಿದೆ ಎಂದು ‘ದಿ ಟೆಲಿಗ್ರಾಫ್ ಯುಕೆ’ ಮತ್ತು ‘ಇರಾನ್ ವೈರ್’ ವರದಿ ಮಾಡಿವೆ.

ಕಳೆದ ಫೆಬ್ರವರಿ 28 ರಂದು ಟೆಹ್ರಾನ್ ಮೇಲೆ ನಡೆದ ಭೀಕರ ದಾಳಿಯಲ್ಲಿ ಇರಾನ್‌ನ ಅಂದಿನ ಸರ್ವೋಚ್ಚ ನಾಯಕ ಅಲಿ ಖಮೇನಿ ಸಾವನ್ನಪ್ಪಿದ್ದರು. ಈ ಹತ್ಯೆಯ ಹಿಂದೆ ಡೊನಾಲ್ಡ್ ಟ್ರಂಪ್, ಬೆಂಜಮಿನ್ ನೆತನ್ಯಾಹು ಮತ್ತು ಯುನೈಟೆಡ್ ಸ್ಟೇಟ್ಸ್ ಸೆಂಟ್ರಲ್ ಕಮಾಂಡ್ (CENTCOM) ಮುಖ್ಯಸ್ಥ ಅಡ್ಮಿರಲ್ ಬ್ರಾಡ್ ಕೂಪರ್ ಅವರ ನೇರ ಪಾತ್ರವಿದೆ ಎಂದು ಇರಾನ್ ಗಂಭೀರವಾಗಿ ಆರೋಪಿಸಿದೆ.

ಇರಾನ್ ಸಂಸತ್ತು ಈ ಕಾನೂನು ತರುವ ಮೊದಲೇ, ಸರ್ಕಾರದ ಪರ ಮಾಧ್ಯಮ ಸಂಸ್ಥೆ ‘ಮಸಾಫ್’ ಇಸ್ಲಾಮಿಕ್ ಆಡಳಿತವು ಕಿಲ್ ಟ್ರಂಪ್ ಅಭಿಯಾನಕ್ಕಾಗಿ ಈಗಾಗಲೇ 50 ಮಿಲಿಯನ್ ಡಾಲರ್ ಆರ್ಥಿಕ ಸಂಪನ್ಮೂಲಗಳನ್ನು ಕ್ರೋಢೀಕರಿಸಿದೆ ಎಂದು ಹೇಳಿಕೊಂಡಿತ್ತು. ಇದರ ಬೆನ್ನಲ್ಲೇ ಇರಾನ್ ಪ್ರಾಯೋಜಿತ ಸೈಬರ್ ಗ್ರೂಪ್ ಹಂಡಾಲಾ ಕೂಡ ಹೇಳಿಕೆ ಬಿಡುಗಡೆ ಮಾಡಿ, ದಬ್ಬಾಳಿಕೆ ಮತ್ತು ಭ್ರಷ್ಟಾಚಾರದ ಸೃಷ್ಟಿಕರ್ತರಾದ ಟ್ರಂಪ್ ಮತ್ತು ನೆತನ್ಯಾಹು ಅವರನ್ನು ನಿರ್ಮೂಲನೆ ಮಾಡಲು ಕೋಟ್ಯಂತರ ರೂಪಾಯಿ ಮೀಸಲಿಟ್ಟಿರುವುದಾಗಿ ತಿಳಿಸಿದೆ.

ಮತ್ತಷ್ಟು ಓದಿ: ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ ಸೌದಿ ಅರೇಬಿಯಾಕ್ಕೆ 16 ಜೆಟ್, 8,000 ಸೈನಿಕರನ್ನು ಕಳುಹಿಸಿದ ಪಾಕಿಸ್ತಾನ

ಶಾಂತಿ ಮಾತುಕತೆ ವಿಫಲ? ಅಚ್ಚರಿಯ ವಿಷಯವೆಂದರೆ, ಒಂದು ಕಡೆ ಈ ಹತ್ಯೆಯ ಬೆದರಿಕೆಗಳು ಬರುತ್ತಿರುವಾಗಲೇ, ಮತ್ತೊಂದು ಕಡೆ ಇರಾನ್ ಅಮೆರಿಕಕ್ಕೆ ಹೊಸ ಶಾಂತಿ ಪ್ರಸ್ತಾವನೆಯೊಂದನ್ನು ಕಳುಹಿಸಿದೆ. ಆದರೆ, ಈ ಪ್ರಸ್ತಾವನೆಯಲ್ಲಿ ಯಾವುದೇ ಗಂಭೀರತೆ ಇಲ್ಲ ಎಂದು ಅಮೆರಿಕ ತಳ್ಳಿಹಾಕಿದೆ. ನಾವು ಮಾತುಕತೆಯಲ್ಲಿ ಯಾವುದೇ ಪ್ರಗತಿ ಕಾಣುತ್ತಿಲ್ಲ. ನಾವು ಇಂದು ಅತ್ಯಂತ ಗಂಭೀರ ಹಾಗೂ ಆತಂಕಕಾರಿ ಪರಿಸ್ಥಿತಿಯಲ್ಲಿದ್ದೇವೆ ಎಂದು ಅಮೆರಿಕದ ಹಿರಿಯ ಅಧಿಕಾರಿಯೊಬ್ಬರು ‘ಆಕ್ಸಿಯಾಸ್’ ಮಾಧ್ಯಮಕ್ಕೆ ತಿಳಿಸಿದ್ದಾರೆ. ಒಟ್ಟಾರೆಯಾಗಿ, ಇರಾನ್ ಸಂಸತ್ತಿನ ಈ ಸುಪಾರಿ ಕಾನೂನು ಇಡೀ ಜಗತ್ತನ್ನು ಮತ್ತೊಂದು ಮಹಾ ಯುದ್ಧದ ಜ್ವಾಲೆಗೆ ತಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು