Sheikh Hasina Gets Death Sentence: ಬಾಂಗ್ಲಾದೇಶದಲ್ಲಿ ನಿರಾಯುಧ ಪ್ರತಿಭಟನಾಕಾರರ ಕೊಲೆ, ಶೇಖ್ ಹಸೀನಾಗೆ ಮರಣದಂಡನೆ

ನಿರಾಯುಧ ಪ್ರತಿಭಟನಾಕಾರರನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ICT-BD) ಮಾಜಿ ಪ್ರಧಾನಿ ಶೇಖ್ ಹಸೀನಾ(Sheikh Hasina) ವಿರುದ್ಧ ತೀರ್ಪು ನೀಡಿದೆ. ಅವರನ್ನು ದೋಷಿ ಎಂದು ನ್ಯಾಯಾಲಯ ಕರೆದಿದೆ.  ತಪ್ಪಿತಸ್ಥರಿಗೆ ಮರಣದಂಡನೆ ವಿಧಿಸಬೇಕೆಂದು ಪ್ರಾಸಿಕ್ಯೂಟರ್‌ಗಳು ಕೋರಿದ್ದಾರೆ. 78 ವರ್ಷದ ಹಸೀನಾ ಅವರು ಆಗಸ್ಟ್ 2024 ರಲ್ಲಿ ಅಧಿಕಾರದಿಂದ ಕೆಳಗಿಳಿಯಲು ಕಾರಣವಾದ ವ್ಯಾಪಕ ದಂಗೆಗೆ ಸಂಬಂಧಿಸಿದಂತೆ ಹಲವಾರು ಆರೋಪಗಳನ್ನು ಎದುರಿಸುತ್ತಿದ್ದಾರೆ.

Sheikh Hasina Gets Death Sentence: ಬಾಂಗ್ಲಾದೇಶದಲ್ಲಿ ನಿರಾಯುಧ ಪ್ರತಿಭಟನಾಕಾರರ ಕೊಲೆ, ಶೇಖ್ ಹಸೀನಾಗೆ ಮರಣದಂಡನೆ
ಶೇಖ್ ಹಸೀನಾ

Updated on: Nov 17, 2025 | 2:38 PM

ಢಾಕಾ, ನವೆಂಬರ್ 17: ನಿರಾಯುಧ ಪ್ರತಿಭಟನಾಕಾರರನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ICT-BD) ಮಾಜಿ ಪ್ರಧಾನಿ ಶೇಖ್ ಹಸೀನಾ(Sheikh Hasina) ವಿರುದ್ಧ ತೀರ್ಪು ನೀಡಿದೆ. ಮರಣದಂಡನೆ ಶಿಕ್ಷೆ ವಿಧಿಸಿದೆ. ನ್ಯಾಯಾಲಯ ಕರೆದಿದೆ.  ತಪ್ಪಿತಸ್ಥರಿಗೆ ಮರಣದಂಡನೆ ವಿಧಿಸಬೇಕೆಂದು ಪ್ರಾಸಿಕ್ಯೂಟರ್‌ಗಳು ಕೋರಿದ್ದಾರೆ. 78 ವರ್ಷದ ಹಸೀನಾ ಅವರು ಆಗಸ್ಟ್ 2024 ರಲ್ಲಿ ಅಧಿಕಾರದಿಂದ ಕೆಳಗಿಳಿಯಲು ಕಾರಣವಾದ ವ್ಯಾಪಕ ದಂಗೆಗೆ ಸಂಬಂಧಿಸಿದಂತೆ ಹಲವಾರು ಆರೋಪಗಳನ್ನು ಎದುರಿಸುತ್ತಿದ್ದಾರೆ.

ಕಳೆದ ವರ್ಷ ನಡೆದ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆಯ ಸಮಯದಲ್ಲಿ ನಡೆದ ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದಂತೆ ಶೇಖ್ ಹಸೀನಾ ವಿರುದ್ಧ ಗೈರುಹಾಜರಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಇದು ಶೇಖ್ ಹಸೀನಾ ಅವರ ಸರ್ಕಾರದ ಪತನಕ್ಕೆ ಕಾರಣವಾಯಿತು ಮತ್ತು ಅವರು ದೇಶವನ್ನು ಬಿಟ್ಟು ಪಲಾಯನ ಮಾಡಬೇಕಾಯಿತು. ಆರ್ಥಿಕ ಸಂಕಷ್ಟ, ಭ್ರಷ್ಟಾಚಾರ ಮತ್ತು ಉದ್ಯೋಗ ಕೊರತೆಯಿಂದ ಉಂಟಾದ ವಿದ್ಯಾರ್ಥಿಗಳ ನೇತೃತ್ವದ ದಂಗೆಯಿಂದಾಗಿ ಶೇಖ್ ಹಸೀನಾ ಅವರ ಸರ್ಕಾರ ಜುಲೈ 2024 ರಲ್ಲಿ ಪತನಗೊಂಡಿತು.

ಆಗಸ್ಟ್ 5 ರಂದು ಅವರು ಭಾರತಕ್ಕೆ ಪಲಾಯನ ಮಾಡಿದರು ಮತ್ತು ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಬಾಂಗ್ಲಾದೇಶದಲ್ಲಿ ಅಧಿಕಾರ ವಹಿಸಿಕೊಂಡಿತು. ನಂತರ ಯುಎನ್ ವರದಿಯ ಪ್ರಕಾರ ಪ್ರತಿಭಟನೆಗಳ ಸಮಯದಲ್ಲಿ ಸುಮಾರು 1,400 ಜನರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದೆ.
ಅಧಿಕಾರವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಹಸೀನಾ ಮತ್ತು ಅವರ ಸರ್ಕಾರ ಪ್ರತಿಭಟನಾಕಾರರ ವಿರುದ್ಧ ವ್ಯವಸ್ಥಿತವಾಗಿ ಮಾರಕ ಬಲಪ್ರಯೋಗ ಮಾಡಿ ಸುಮಾರು 1,400 ಜನರನ್ನು ಕೊಂದಿದೆ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ತನಿಖಾಧಿಕಾರಿಗಳು ಹೇಳಿದ್ದಾರೆ.

ಮತ್ತಷ್ಟು ಓದಿ: ನಾನು ಜೀವಂತವಾಗಿದ್ದೇನೆ, ಮುಂದೆಯೂ ಇರುತ್ತೇನೆ, ತೀರ್ಪಿಗೂ ಮುನ್ನ ಯೂನಸ್​ಗೆ ಶೇಖ್ ಹಸೀನಾ ಸಂದೇಶ

ವಿಚಾರಣೆಗೆ ಹಾಜರಾಗಲು ಶೇಖ್ ಹಸೀನಾ ಭಾರತದಿಂದ ಹಿಂತಿರುಗಲು ನಿರಾಕರಿಸಿದ್ದಾರೆ. ಪಲಾಯನ ಮಾಡುವ ಕೆಲವು ವಾರಗಳಲ್ಲಿ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಲು ಭದ್ರತಾ ಪಡೆಗಳಿಗೆ ಆದೇಶಿಸಿದ್ದಾರೆ ಎಂಬ ಆರೋಪಗಳನ್ನು ಸಹ ಅವರು ನಿರಾಕರಿಸಿದ್ದಾರೆ.

ಅಲ್ಲಾ ನನಗೆ ಜೀವ ನೀಡಿದ್ದಾನೆ, ಮತ್ತು ಒಂದು ದಿನ ನಾನು ಆತನೇ ನನ್ನ ಜೀವವನ್ನು ತೆಗೆಯುತ್ತಾನೆ. ಆದರೆ ನಾನು ನನ್ನ ದೇಶದ ಜನರಿಗಾಗಿ ಕೆಲಸ ಮಾಡುತ್ತಿದ್ದೇನೆ ಮತ್ತು ಅದನ್ನು ಮುಂದುವರೆಸುತ್ತೇನೆ ಎಂದು ಹಸೀನಾ ಹೇಳಿದ್ದರು.

ನಮ್ಮ ಸಂವಿಧಾನದ 7(ಬಿ) ವಿಧಿಯು ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ ಬಲವಂತವಾಗಿ ತೆಗೆದುಹಾಕುವ ಯಾರಿಗಾದರೂ ಶಿಕ್ಷೆಯಾಗುತ್ತದೆ ಎಂದು ಸ್ಪಷ್ಟವಾಗಿ ಹೇಳುತ್ತದೆ. ಯೂನಸ್ ಮಾಡಿದ್ದು ಇದನ್ನೇ (ಬಲವಂತವಾಗಿ ನನ್ನನ್ನು ಅಧಿಕಾರದಿಂದ ತೆಗೆದುಹಾಕುವುದು). ಯಾರಾದರೂ ನ್ಯಾಯಾಲಯದಲ್ಲಿ ಸುಳ್ಳು ದೂರು ದಾಖಲಿಸಿದರೆ, ಅವರ ಮೇಲೆ ಕಾನೂನಿನಡಿಯಲ್ಲಿ ಮೊಕದ್ದಮೆ ಹೂಡಲಾಗುತ್ತದೆ. ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಶಿಕ್ಷೆಯ ಬಗ್ಗೆ ಚಿಂತಿಸಬೇಡಿ ಎಂದು ಅವರು ಒತ್ತಾಯಿಸಿದ್ದರು.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 2:26 pm, Mon, 17 November 25