AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ಚುನಾವಣೆಯಲ್ಲಿ ಅಕ್ರಮ: ರಾವಲ್ಪಿಂಡಿ ಕಮಿಷನರ್ ಲಿಯಾಖತ್ ಅಲಿ ಚಟ್ಟಾ ರಾಜೀನಾಮೆ

ಪಾಕಿಸ್ತಾನ ಚುನಾವಣಾ ಫಲಿತಾಂಶದಲ್ಲಿ “ನಾವು ಸೋತವರನ್ನು 50,000 ಮತಗಳ ಅಂತರದಿಂದ ವಿಜೇತರನ್ನಾಗಿ ಪರಿವರ್ತಿಸುತ್ತೇವೆ. ನಾನು ರಾವಲ್ಪಿಂಡಿ ವಿಭಾಗದ ಜನರಿಗೆ ಅನ್ಯಾಯ ಮಾಡಿದ್ದೇನೆ. ನನ್ನ ವಿಭಾಗದ ಚುನಾವಣಾಧಿಕಾರಿಗಳಲ್ಲಿ ಕ್ಷಮೆಯಾಚಿಸುತ್ತೇನೆ. ಈ ಎಲ್ಲಾ ರಾಜಕಾರಣಿಗಳಿಗೆ ಯಾವುದೇ ತಪ್ಪು ಮಾಡಬಾರದು ಎಂದು ಇಡೀ ಅಧಿಕಾರಿಗಳಲ್ಲಿ ನನ್ನ ವಿನಂತಿಯಾಗಿಎಂದು ರಾವಲ್ಪಿಂಡಿ ಕಮಿಷನರ್ ಲಿಯಾಖತ್ ಅಲಿ ಚಟ್ಟಾ ಪೊಲೀಸರಿಗೆ ಶರಣಾಗಿದ್ದಾರೆ.

ಪಾಕಿಸ್ತಾನ ಚುನಾವಣೆಯಲ್ಲಿ ಅಕ್ರಮ: ರಾವಲ್ಪಿಂಡಿ ಕಮಿಷನರ್ ಲಿಯಾಖತ್ ಅಲಿ ಚಟ್ಟಾ ರಾಜೀನಾಮೆ
ಲಿಯಾಖತ್ ಅಲಿ ಚಟ್ಟಾ
ರಶ್ಮಿ ಕಲ್ಲಕಟ್ಟ
|

Updated on: Feb 17, 2024 | 4:57 PM

Share

ಲಾಹೋರ್ ಫೆಬ್ರುವರಿ 17: ಪಾಕಿಸ್ತಾನದ ಚುನಾವಣೆಯಲ್ಲಿ (Pakistan Election) ಅಕ್ರಮ ನಡೆದಿದೆ ಎಂಬ ಆರೋಪದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಕರೆ ನೀಡಿದರ ನಡುವೆಯೇ ಫೆಬ್ರವರಿ 8 ರ ಚುನಾವಣೆಯ ಫಲಿತಾಂಶಗಳನ್ನು ತಿರುಚಲಾಗಿದೆ ಎಂದು ಆರೋಪಿಸಿ ರಾವಲ್ಪಿಂಡಿ ಕಮಿಷನರ್ ಲಿಯಾಖತ್ ಅಲಿ ಚಟ್ಟಾ (Liaquat Ali Chattha)ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. “ನಾವು ಸೋತವರನ್ನು 50,000 ಮತಗಳ ಅಂತರದಿಂದ ವಿಜೇತರನ್ನಾಗಿ ಪರಿವರ್ತಿಸುತ್ತೇವೆ. ನಾನು ರಾವಲ್ಪಿಂಡಿ ವಿಭಾಗದ ಜನರಿಗೆ ಅನ್ಯಾಯ ಮಾಡಿದ್ದೇನೆ ಎಂದು ಚಟ್ಟಾ ಪೊಲೀಸರಿಗೆ ಶರಣಾಗಿದ್ದಾರೆ. “ಆತ್ಮಹತ್ಯೆ” ಎಂದು ಪರಿಗಣಿಸುವ ಮಟ್ಟಿಗೆ ತಮ್ಮ ಶಕ್ತಿಯನ್ನು ಬಳಸಿಕೊಳ್ಳಲು “ಒತ್ತಡ” ಕ್ಕೆ ಒಳಗಾಗಬೇಕಾಗಿ ಬಂತು ಎಂದು ರಾವಲ್ಪಿಂಡಿ ಕಮಿಷನರ್ ಹೇಳಿದ್ದಾರೆ.

ನನ್ನ ವಿಭಾಗದ ಚುನಾವಣಾಧಿಕಾರಿಗಳಲ್ಲಿ ಕ್ಷಮೆಯಾಚಿಸುತ್ತೇನೆ. ಈ ಎಲ್ಲಾ ರಾಜಕಾರಣಿಗಳಿಗೆ ಯಾವುದೇ ತಪ್ಪು ಮಾಡಬಾರದು ಎಂದು ಇಡೀ ಅಧಿಕಾರಿಗಳಲ್ಲಿ ನನ್ನ ವಿನಂತಿಯಾಗಿದೆ ”ಎಂದು ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಾತನಾಡಿದ ಚಟ್ಟಾ ಹೇಳಿದ್ದಾರೆ. ಚಟ್ಟಾ ಅವರ ಘೋಷಣೆಗೆ ಪ್ರತಿಕ್ರಿಯಿಸಿದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) “ರಾವಲ್ಪಿಂಡಿ ಆಯುಕ್ತರ ಈ ಹೇಳಿಕೆಯ ನಂತರ ಮುಖ್ಯ ಚುನಾವಣಾ ಆಯುಕ್ತರು ತಕ್ಷಣವೇ ರಾಜೀನಾಮೆ ನೀಡಬೇಕು” ಎಂದು ಹೇಳಿದೆ.

ಏತನ್ಮಧ್ಯೆ, ಮುಂದಿನ ಸರ್ಕಾರವನ್ನು ರಚಿಸುವ ಪ್ರಯತ್ನಗಳು ವಿಫಲವಾದ ನಂತರ ಚುನಾವಣೆಯಲ್ಲಿ ಆಪಾದಿತ ಅಕ್ರಮ ವಿರುದ್ಧ ದೇಶಾದ್ಯಂತ ಪ್ರತಿಭಟನೆಯನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಖಾನ್ ಅವರ ಪಿಟಿಐ ಸಂಸತ್ತಿನಲ್ಲಿ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ನಿರ್ಧರಿಸಿದೆ. ಫೆಬ್ರವರಿ 8 ರ ಚುನಾವಣೆಗಳು ವಿಭಜನೆಯ ತೀರ್ಪು ನೀಡಿದ ನಂತರ ಪಾಕಿಸ್ತಾನದ ಪ್ರಮುಖ ರಾಜಕೀಯ ಪಕ್ಷಗಳು ಫೆಡರಲ್ ಸರ್ಕಾರವನ್ನು ರಚಿಸಲು ಪ್ರಯತ್ನಗಳನ್ನು ಹೆಚ್ಚಿಸಿವೆ.

ಇದನ್ನೂ ಓದಿ: Omar Ayub: ಒಮರ್ ಅಯೂಬ್ ಪಾಕ್ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದ ಇಮ್ರಾನ್ ಖಾನ್ ನೇತೃತ್ವದ ಪಿಟಿಐ

ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷ ಬೆಂಬಲಿತ ಸ್ವತಂತ್ರ ಅಭ್ಯರ್ಥಿಗಳು ಚುನಾವಣಾ ಫಲಿತಾಂಶಗಳಲ್ಲಿ ಪ್ರಾಬಲ್ಯ ಸಾಧಿಸಿದರೆ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಕೆಲವು ಸ್ವತಂತ್ರರು ನವಾಜ್ ಷರೀಫ್ ನೇತೃತ್ವದ ಪಕ್ಷಕ್ಕೆ ಸೇರಿದ್ದರಿಂದ ಸರ್ಕಾರ ರಚಿಸಲು ಸಾಕಷ್ಟು ಸಂಖ್ಯೆಯಿದೆ ಎಂದು ಹೇಳಿಕೊಂಡಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು