Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishi Sunak ಭಾರತ ಮೂಲದ ರಿಷಿ ಸುನಕ್ ಬ್ರಿಟನ್​​ ನೂತನ ಪ್ರಧಾನಿ

ಲಿಜ್ ಟ್ರಸ್ ಹೊರ ನಡೆದ ನಂತರ ನೂತನ ಪ್ರಧಾನಿ ಆಯ್ಕೆಗೆ ಸಿದ್ಧತೆ ನಡೆದಿದ್ದು, ರಿಷಿ ಸುನಕ್ ಮತ್ತೊಮ್ಮೆ ಚುನಾವಣಾ ಕಣಕ್ಕಿಳಿದು ಗೆಲುವು ಸಾಧಿಸಿದ್ದಾರೆ.

Rishi Sunak ಭಾರತ ಮೂಲದ ರಿಷಿ ಸುನಕ್ ಬ್ರಿಟನ್​​ ನೂತನ ಪ್ರಧಾನಿ
ರಿಷಿ ಸುನಕ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 24, 2022 | 7:11 PM

ಯುಕೆಯ ನೂತನ ಪ್ರಧಾನಿಯಾಗಿ ಭಾರತ ಮೂಲದ ರಿಷಿ ಸುನಕ್ (Rishi Sunak) ಆಯ್ಕೆಯಾಗಿದ್ದಾರೆ. ಕೊನೆ ಗಳಿಗೆಯಲ್ಲಿ ಪೆನ್ನಿ ಮೊರ್ಡಾಂಟ್  ರೇಸ್​​ನಿಂದ ಹಿಂದೆ  ಸರಿದಿದ್ದು, ಯಾವುದೇ ಪ್ರತಿಸ್ಪರ್ಧಿಗಳಿಲ್ಲದೆ ರಿಷಿ ಆಯ್ಕೆ  ಆಗಿದ್ದಾರೆ. ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ (Boris Johnson) ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹಿಂದೆ ಸರಿದಾಗಲೇ ರಿಷಿ ಪ್ರಧಾನಿ ಪಟ್ಟಕ್ಕೇರುವುದು ಬಹುತೇಕ ಖಚಿತವಾಗಿತ್ತು. ತಿಂಗಳುಗಳ ಹಿಂದೆಯಷ್ಟೇ ನಡೆದ ಬ್ರಿಟನ್ ಪ್ರಧಾನಿ ಚುನಾವಣೆಯಲ್ಲಿ ರಿಷಿ ಸುನಕ್,  ಲಿಜ್ ಟ್ರಸ್ (Liz Truss) ವಿರುದ್ಧ ಪರಾಭವಗೊಂಡಿದ್ದರು. ಲಿಜ್ ಟ್ರಸ್ ಪ್ರಧಾನಿ ಹುದ್ದೆಗೇರಿದರೂ ಆರ್ಥಿಕ ಬಿಕ್ಕಟ್ಟು ಮತ್ತು ಸರ್ಕಾರದ ನೀತಿಯಿಂದಾಗಿ ಹಿನ್ನಡೆ ಅನುಭವಿಸಿ  ಅಧಿಕಾರಕ್ಕೇರಿದ 45ದಿನಗಳಲ್ಲಿ ರಾಜೀನಾಮೆ ಕೊಟ್ಟು ಹೊರನಡೆದಿದ್ದರು .ಲಿಜ್ ಟ್ರಸ್ ಹೊರ ನಡೆದ ನಂತರ ನೂತನ ಪ್ರಧಾನಿ ಆಯ್ಕೆಗೆ ಸಿದ್ಧತೆ ನಡೆದಿದ್ದು, ರಿಷಿ ಮತ್ತೊಮ್ಮೆ ಚುನಾವಣಾ ಕಣಕ್ಕಿಳಿಯುವುಗಾಗಿ ಘೋಷಿಸಿದ್ದರು. ಇತ್ತ ಪೆನ್ನಿ ಮೊರ್ಡಾಂಟ್ ಒಬ್ಬರೇ ಸುನಕ್ ಅವರ ಪ್ರತಿಸ್ಪರ್ಧಿಯಾಗಿದ್ದರು.

178 ಟೋರಿ ಸಂಸದರು ಸಾರ್ವಜನಿಕ ಬೆಂಬಲ ವ್ಯಕ್ತಪಡಿಸಿದ್ದರಿಂದ ಕನ್ಸರ್ವೇಟಿವ್ ಸಂಸದರಲ್ಲಿ ಅರ್ಧಕ್ಕಿಂತ ಹೆಚ್ಚು ಮಂದಿ ರಿಷಿ ಸುನಕ್ ಅವರನ್ನು ಬೆಂಬಲಿಸುತ್ತಿದ್ದಾರೆ ಎಂದು ಸ್ಕೈ ನ್ಯೂಸ್ ವರದಿ ಮಾಡಿದೆ. ಹಲವಾರು ಪ್ರಮುಖ ಕನ್ಸರ್ವೇಟಿವ್ ಸಂಸದರು ರಿಷಿ ಸುನಕ್ ಅವರ ಪ್ರಚಾರ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದಾರೆ. ಇಂಟರ್ನ್ಯಾಷನಲ್ ಟ್ರೇಡ್ ಸೆಕ್ರೆಟರಿ ಕೆಮಿ ಬಡೆನೋಚ್ ಮತ್ತು ಮಾಜಿ ಶಿಕ್ಷಣ ಕಾರ್ಯದರ್ಶಿ ಗೇವಿನ್ ವಿಲಿಯಮ್ಸನ್ ಇಬ್ಬರೂ ರಿಷಿ ಸುನಕ್ ಅವರ ಕಚೇರಿಗೆ ಭೇಟಿ ನೀಡಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಬ್ರಿಟನ್‌ನಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸುವ ಮೊದಲ ಭಾರತೀಯ ಮೂಲದ ನಾಯಕರಾಗಿದ್ದಾರೆ ರಿಷಿ ಸುನಕ್. 42ರ ಹರೆಯದ ಸುನಕ್  ಭಾರತ ಮತ್ತು ಪೂರ್ವ ಆಫ್ರಿಕಾದಿಂದ ವಲಸೆ ಬಂದ ಶ್ರೀಮಂತ ಹಿಂದೂ ವಂಶಸ್ಥರು. ರಿಷಿ ಅವರು ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿಯವರ ಪುತ್ರಿ ಅಕ್ಷತಾ ಮೂರ್ತಿ ಅವರನ್ನು ವಿವಾಹವಾಗಿದ್ದಾರೆ. ಸುನಕ್ ಅವರ ತಂದೆ ಯಶವೀರ್ ಸುನಕ್ ಅವರು ರಾಷ್ಟ್ರೀಯ ಆರೋಗ್ಯ ಸೇವೆಯ ಸಾಮಾನ್ಯ ವೈದ್ಯರು ಮತ್ತು ತಾಯಿ ಉಷಾ ಸುನಕ್ ಅವರು ಕೆಮಿಸ್ಟ್  ಅಂಗಡಿಯನ್ನು ನಡೆಸುತ್ತಿದ್ದರು.

“ನನ್ನ ಪೋಷಕರು ನಮ್ಮ ಸ್ಥಳೀಯ ಸಮುದಾಯಕ್ಕೆ ಸಮರ್ಪಣೆಯೊಂದಿಗೆ ಸೇವೆ ಸಲ್ಲಿಸುವುದನ್ನು ನೋಡುತ್ತಾ ನಾನು ಬೆಳೆದಿದ್ದೇನೆ” ಎಂದು  ಸುನಕ್ ಹೇಳಿದ್ದಾರೆ.  ಸುನಕ್  ವಿಂಚೆಸ್ಟರ್ ಕಾಲೇಜು, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮತ್ತು ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪೂರೈಸಿದ್ದಾರೆ.

ನಾನು ಅಂತರರಾಷ್ಟ್ರೀಯ ಮಟ್ಟದಲ್ಲಿ ವಾಸಿಸಲು, ಅಧ್ಯಯನ ಮಾಡಲು ಮತ್ತು ಕೆಲಸ ಮಾಡಲು ಅದೃಷ್ಟಶಾಲಿಯಾಗಿದ್ದೇನೆ. ನಾನು ಕ್ಯಾಲಿಫೋರ್ನಿಯಾದಲ್ಲಿ ನನ್ನ ಹೆಂಡತಿ ಅಕ್ಷತಾ ಅವರನ್ನು ಭೇಟಿಯಾದೆ, ಅಲ್ಲಿ ನಾವು  ಹಲವಾರು ವರ್ಷಗಳ ಕಾಲ ವಾಸಿಸುತ್ತಿದ್ದೆವು. ನಮಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ, ಕೃಷ್ಣ ಮತ್ತು ಅನೌಷ್ಕಾ, ಅವರು ನಮ್ಮನ್ನು ಬ್ಯುಸಿ ಮತ್ತು ಖುಷಿಯಾಗಿರಿಸುತ್ತಾರೆ ಸುನಕ್ ತಮ್ಮ ವೆಬ್‌ಸೈಟ್‌ನಲ್ಲಿ ಹೇಳಿದ್ದಾರೆ.

ಬಿಡುವಿನ ವೇಳೆಯಲ್ಲಿ ಸುನಕ್ ಅವರು  ಕ್ರಿಕೆಟ್, ಫುಟ್‌ಬಾಲ್ ಆಡುತ್ತಾರೆ, ಚಲನಚಿತ್ರಗಳನ್ನು ವೀಕ್ಷಿಸುತ್ತಾರೆ.

ಸುನಕ್ ಅವರು 2015 ರಲ್ಲಿ ರಿಚ್ಮಂಡ್ (ಯಾರ್ಕ್ಸ್) ಕ್ಷೇತ್ರದಿಂದ ಮೊದಲು ಸಂಸದರಾಗಿ ಆಯ್ಕೆಯಾಗಿದ್ದು ನಂತರ 2017 ಮತ್ತು 2019 ರಲ್ಲಿ ಮರು ಆಯ್ಕೆಯಾದರು. ಜುಲೈ 2019 ರಲ್ಲಿ,  ಸುನಕ್ ಅವರನ್ನು ಖಜಾನೆಗೆ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಯಿತು, ಜನವರಿ 2018 ರಲ್ಲಿ ಸ್ಥಳೀಯ ಸರ್ಕಾರದ ಸಚಿವರಾಗಿ ಸರ್ಕಾರಿ ಸೇವೆಗೆ ಪ್ರವೇಶಿಸಿದರು. ಫೆಬ್ರವರಿ 2020 ರಲ್ಲಿ, ಅವರು  ವಿತ್ತ ಸಚಿವರಾಗಿದ್ದು ಈ ವರ್ಷದ ಜುಲೈವರೆಗೆ  ಅಧಿಕಾರದಲ್ಲಿದ್ದರು.

Published On - 6:36 pm, Mon, 24 October 22

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್