ಬ್ರಿಟನ್ ಸಚಿವೆ ಸುಯೆಲ್ಲಾ ಬ್ರೆವರ್‌ಮನ್​​ನ್ನು ವಜಾಗೊಳಿಸಿದ ರಿಷಿ ಸುನಕ್

ಬ್ರಿಟನ್​​ ಪ್ರಧಾನಿ ರಿಷಿ ಸುನಕ್ ಅವರು ತಮ್ಮ ಹಿರಿಯ ಸಚಿವರಲ್ಲಿ ಒಬ್ಬರಾದ ಬ್ರಿಟನ್​​​ ಆಂತರಿಕ ಸಚಿವೆ ಸುಯೆಲ್ಲಾ ಬ್ರಾವರ್‌ಮನ್ ಅವರನ್ನು ತಮ್ಮ ಸಂಪುಟದಿಂದ ವಜಾಗೊಳಿಸಿದ್ದಾರೆ ಎಂದು ಸರ್ಕಾರದ ಮೂಲಗಳು ಇಂದು (ನ.13) ತಿಳಿಸಿದೆ. ಪ್ಯಾಲೇಸ್ಟಿನಿಯನ್ ಪರ ಮೆರವಣಿಗೆ ಮಾಡಿದ ಸಮಯದಲ್ಲಿ ಪೊಲೀಸರು ನಡೆದುಕೊಂಡ ರೀತಿಯನ್ನು ಸುಯೆಲ್ಲಾ ಬ್ರಾವರ್‌ಮನ್ ಟೀಕಿಸಿದ್ದಾರೆ. ಜತೆಗೆ ರಿಷಿ ಸುನಕ್ ವಿರುದ್ಧ ಹೇಳಿಕೆಯನ್ನು ಕೂಡ ನೀಡಿದರು.

ಬ್ರಿಟನ್ ಸಚಿವೆ ಸುಯೆಲ್ಲಾ ಬ್ರೆವರ್‌ಮನ್​​ನ್ನು ವಜಾಗೊಳಿಸಿದ ರಿಷಿ ಸುನಕ್
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Nov 13, 2023 | 3:12 PM

ಬ್ರಿಟನ್​​ ಪ್ರಧಾನಿ ರಿಷಿ ಸುನಕ್(Rishi Sunak) ಅವರು ತಮ್ಮ ಹಿರಿಯ ಸಚಿವರಲ್ಲಿ ಒಬ್ಬರಾದ ಬ್ರಿಟನ್​​​ ಆಂತರಿಕ ಸಚಿವೆ ಸುಯೆಲ್ಲಾ ಬ್ರಾವರ್‌ಮನ್ (Suella Braverman) ಅವರನ್ನು ತಮ್ಮ ಸಂಪುಟದಿಂದ ವಜಾಗೊಳಿಸಿದ್ದಾರೆ ಎಂದು ಸರ್ಕಾರದ ಮೂಲಗಳು ಇಂದು (ನ.13) ತಿಳಿಸಿದೆ. ಪ್ಯಾಲೇಸ್ಟಿನಿಯನ್ ಪರ ಮೆರವಣಿಗೆ ಮಾಡಿದ ಸಮಯದಲ್ಲಿ ಪೊಲೀಸರು ನಡೆದುಕೊಂಡ ರೀತಿಯನ್ನು ಸುಯೆಲ್ಲಾ ಬ್ರಾವರ್‌ಮನ್ ಟೀಕಿಸಿದ್ದಾರೆ. ಜತೆಗೆ ರಿಷಿ ಸುನಕ್ ವಿರುದ್ಧ ಹೇಳಿಕೆಯನ್ನು ಕೂಡ ನೀಡಿದರು. ಶನಿವಾರ ನಡೆದ ಮೆರವಣಿಗೆಯನ್ನು ಪೋಲೀಸರ ನಿರ್ವಹಣೆ ಮಾಡಿದ ರೀತಿಯ ಬಗ್ಗೆ ಒಂದು ಲೇಖನವನ್ನು ಕೂಡ ಬರೆದಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಹೇಳಿಕೊಂಡಿದ್ದರು. ಇದು ಜನರ ಮೇಲೆ ಕೆಟ್ಟ ಪರಿಣಾಮವನ್ನು ಉಂಟು ಮಾಡುತ್ತದೆ. ಈ ಹೇಳಿಕೆ ಉದ್ವಿಗ್ನತೆಯನ್ನು ಹೆಚ್ಚಿಸುತ್ತದೆ ಎಂದು ಸಂಪುಟ ಸದಸ್ಯರ ಒತ್ತಡಕ್ಕೆ ಮಣಿದು ಈ ಕ್ರಮವನ್ನು ತೆಗೆದುಕೊಂಡಿದ್ದಾರೆ.

ಇನ್ನು ಬಿಬಿಸಿ ವರದಿಯ ಪ್ರಕಾರ ಸುನಕ್ ಅವರು ಸೋಮವಾರದಂದು ಕ್ಯಾಬಿನೆಟ್ ಪುನರ್ರಚನೆಯನ್ನು ಮಾಡಲಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಇನ್ನು ವಿದೇಶಾಂಗ ಕಾರ್ಯದರ್ಶಿ ಜೇಮ್ಸ್ ಕ್ಲೆವರ್ಲಿ ಬ್ರೇವರ್‌ಮನ್ ಅವರನ್ನು ಬದಲಾಯಿಸಬಹುದು ಎಂಬ ಮಾತುಗಳು ಕೇಳಿ ಬಂದಿತ್ತು. ಈ ಎಲ್ಲ ನಡೆ ರಾಜಕೀಯ ತಂತ್ರವಾಗಿದೆ ಎಂದು ಹೇಳಿದರು. ಮಾಜಿ ಪಿಎಂ ಡೇವಿಡ್ ಕ್ಯಾಮರೂನ್ ಅವರು ಮತ್ತೆ ವಿದೇಶಾಂಗ ಕಾರ್ಯದರ್ಶಿಯಾಗಿ ರಾಜಕೀಯಕ್ಕೆ ಮರಳುಬಹುದು ಎಂದು ಹೇಳಲಾಗಿದೆ.

ಇದನ್ನೂ ಓದಿ:  ಬ್ರಿಟನ್ ಪ್ರಧಾನಿ ರಿಷಿ ಸುನಕ್ ನಿವಾಸದ ಗೇಟ್​ಗೆ ಡಿಕ್ಕಿ ಹೊಡೆದ ಕಾರು, ಚಾಲಕ ಅರೆಸ್ಟ್​

ಇನ್ನು ಸುಯೆಲ್ಲಾ ಬ್ರೆವರ್‌ಮನ್ ಅವರು ಸುನಕ್ ಅವರನ್ನು ವಿರೋಧಿಸಿದ್ದು ಒಂದು ಕಡೆಯಾದರೆ. ಇನ್ನು ಕಡೆ ಹೊಸ ಮುಖಗಳಿಗೆ ಅವಕಾಶ ನೀಡಬೇಕು. ಹಾಗೂ ಸಚಿವರ ಕಾರ್ಯವೈಖರಿ ಬಗ್ಗೆ ಅಸಮಾಧನವಿದೆ. ಜತೆಗೆ ಮಿತ್ರಪಕ್ಷಗಳಿಗೂ ಅವಕಾಶ ನೀಡುವ ಸಲುವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:45 pm, Mon, 13 November 23

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?