Rishi Sunak: ಬ್ರಿಟನ್ ಪ್ರಧಾನಿ ರೇಸ್​ನಲ್ಲಿ ಅಂತಿಮ ಸುತ್ತಿನಲ್ಲಿ ರಿಷಿ ಸುನಕ್​ಗೆ 118 ಶಾಸಕರ ಬೆಂಬಲ

ಬ್ರಿಟನ್‌ನ ಮುಂದಿನ ಪ್ರಧಾನಿಯನ್ನು ನಿರ್ಧರಿಸಲು ಕನ್ಸರ್ವೇಟಿವ್ ಪಕ್ಷದ ಸಂಸದರು ಮಂಗಳವಾರ ನಡೆಸಿದ ಕೊನೆಯ ಸುತ್ತಿನ ಮತದಾನದಲ್ಲಿ ಬ್ರಿಟನ್​ನ ಮಾಜಿ ಹಣಕಾಸು ಸಚಿವ ರಿಷಿ ಸುನಕ್ ಗೆಲವು ಸಾಧಿಸಿದ್ದಾರೆ.

Rishi Sunak: ಬ್ರಿಟನ್ ಪ್ರಧಾನಿ ರೇಸ್​ನಲ್ಲಿ ಅಂತಿಮ ಸುತ್ತಿನಲ್ಲಿ ರಿಷಿ ಸುನಕ್​ಗೆ 118 ಶಾಸಕರ ಬೆಂಬಲ
ರಿಷಿ ಸುನಕ್‌
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 19, 2022 | 8:49 PM

ಲಂಡನ್: ಬ್ರಿಟನ್‌ನ ಮುಂದಿನ ಪ್ರಧಾನಿಯನ್ನು ನಿರ್ಧರಿಸಲು ಕನ್ಸರ್ವೇಟಿವ್ ಪಕ್ಷದ (Conservative Party) ಸಂಸದರು ಮಂಗಳವಾರ ನಡೆಸಿದ ಕೊನೆಯ ಸುತ್ತಿನ ಮತದಾನದಲ್ಲಿ ಬ್ರಿಟನ್​ನ ಮಾಜಿ ಹಣಕಾಸು ಸಚಿವ ರಿಷಿ ಸುನಕ್ (Rishi Sunak) ಗೆಲವು ಸಾಧಿಸಿದ್ದಾರೆ. ರಿಷಿ ಸುನಕ್ 118 ಮತಗಳನ್ನು ಪಡೆದು ಕನ್ಸರ್ವೇಟಿವ್ ಪಕ್ಷದ ನಾಯಕತ್ವ ಮತ್ತು ಬ್ರಿಟನ್ ಪ್ರಧಾನಿ ಸ್ಥಾನದ ಸ್ಪರ್ಧೆಯ ಮೇಲಿನ ಹಿಡಿತವನ್ನು ಬಿಗಿಗೊಳಿಸಿದ್ದಾರೆ. ಕೆಮಿ ಬಡೆನೋಚ್ ಚುನಾವಣೆ ಕಣದಿಂದ ಹೊರಬಿದ್ದಿದ್ದಾರೆ. ಈ ಮೂಲಕ ಕಣದಲ್ಲಿ ಮೂವರು ಮಾತ್ರ ಉಳಿದಿದ್ದಾರೆ. ಬ್ರಿಟನ್ ಪ್ರಧಾನಿ ಹುದ್ದೆಗೆ ಪೈಪೋಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಿಷಿ ಸುನಕ್ 118 ಟೋರಿ ಶಾಸಕರ ಬೆಂಬಲವನ್ನು ಗಳಿಸಿದ್ದಾರೆ. ಅವ ಬಳಿಕ ಪೆನ್ನಿ ಮೊರ್ಡಾಂಟ್ 92, ಲಿಜ್ ಟ್ರಸ್ 86, ರೇಸ್​ನಲ್ಲಿ ಇಬ್ಬರು ಅಭ್ಯರ್ಥಿಗಳು ಮಾತ್ರ ಉಳಿಯುವವರೆಗೆ ಸಂಸದರು ಮತ ಚಲಾಯಿಸುತ್ತಾರೆ. ವಿಜೇತರನ್ನು ಪಕ್ಷದ ಸದಸ್ಯರು ನಿರ್ಧರಿಸುತ್ತಾರೆ. ಪ್ರಧಾನಿ ಬೋರಿಸ್ ಜಾನ್ಸನ್ ಜುಲೈ 7ರಂದು ಕನ್ಸರ್ವೇಟಿವ್ ಪಕ್ಷದ ನಾಯಕತ್ವವನ್ನು ತ್ಯಜಿಸುವುದಾಗಿ ಘೋಷಿಸಿದ್ದರು. ಸೆಪ್ಟೆಂಬರ್ 5ರಂದು ಹೊಸ ನಾಯಕನ ಆಯ್ಕೆಯಾಗುವವರೆಗೂ ಅವರು ಪ್ರಧಾನಿಯಾಗಿ ಮುಂದುವರಿಯುತ್ತಾರೆ.

Published On - 8:49 pm, Tue, 19 July 22

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್