ಅಮೆರಿಕದಲ್ಲಿ ದುರಂತಗಳ ಮೇಲೆ ದುರಂತ: ಒಂದೇ ದಿನ 3 ಪ್ರತ್ಯೇಕ ಗುಂಡಿನ ದಾಳಿಯಲ್ಲಿ 9 ಮಂದಿ ಸಾವು

ಅಮೆರಿಕದ ವಿವಿಧೆಡೆ 2022ರಲ್ಲಿ ಒಟ್ಟು 44,000 ಮಂದಿ ಗುಂಡಿನ ದಾಳಿಯಿಂದ ಮೃತಪಟ್ಟಿದ್ದರು. ಇದು ಅಮೆರಿಕದಲ್ಲಿ ಆತ್ಮಹತ್ಯೆ ಮಾಡಿಕೊಂಡವರ ಒಟ್ಟು ಸಂಖ್ಯೆಗಿಂತಲೂ ಅರ್ಧದಷ್ಟು ಕಡಿಮೆ.

ಅಮೆರಿಕದಲ್ಲಿ ದುರಂತಗಳ ಮೇಲೆ ದುರಂತ: ಒಂದೇ ದಿನ 3 ಪ್ರತ್ಯೇಕ ಗುಂಡಿನ ದಾಳಿಯಲ್ಲಿ 9 ಮಂದಿ ಸಾವು
ಅಮೆರಿಕದಲ್ಲಿ ಗುಂಡಿನ ಹಾರಾಟ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 24, 2023 | 10:06 AM

ವಾಷಿಂಗ್​ಟನ್: ಅಮೆರಿಕದಲ್ಲಿ (USA) ಇತ್ತೀಚೆಗೆ ನಡೆದ 3 ಪ್ರತ್ಯೇಕ ಗುಂಡಿನ ದಾಳಿ ಪ್ರಕರಣಗಳಲ್ಲಿ ಇಬ್ಬರು ವಿದ್ಯಾರ್ಥಿಗಳೂ ಸೇರಿ ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಕ್ಯಾಲಿಫೋರ್ನಿಯಾ (North California) ಮತ್ತು ಐಯೋವಾದಲ್ಲಿ (Iowa) ಕೇವಲ 48 ಗಂಟೆಗಳ ಅಂತರದಲ್ಲಿ ಎರಡು ಗುಂಡಿನದಾಳಿ ಪ್ರಕರಣಗಳು ವರದಿಯಾಗಿವೆ. ಇದಕ್ಕೂ ಮೊದಲು ಲಾಸ್​ಏಂಜಲೀಸ್​ನಲ್ಲಿ ನಡೆಯುತ್ತಿದ್ದ ಚೀನೀ ಹೊಸವರ್ಷಾಚರಣೆಯ ಮೇಲೆ ನಡೆದಿದ್ದ ಗುಂಡಿನ ದಾಳಿಯಲ್ಲಿ 11 ಮಂದಿ ಮೃತಪಟ್ಟಿದ್ದರು. ಉತ್ತರ ಕ್ಯಾಲಿಫೋರ್ನಿಯಾದ ಹಾಫ್ ಮೂನ್ ಬೇ ಎಂಬಲ್ಲಿ ಎರಡು ಪ್ರತ್ಯೇಕ ಗುಂಡಿನ ದಾಳಿ ಪ್ರಕರಣಗಳು ವರದಿಯಾಗಿವೆ. ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಾವಿನ ನಿಖರ ಆಂಕಿಸಂಖ್ಯೆಯ ಬಗ್ಗೆ ಪೊಲೀಸರು ಈವರೆಗೆ ಯಾವುದೇ ಅಧಿಕೃತ ಮಾಹಿತಿ ಪ್ರಕಟಿಸಿಲ್ಲ. ಸ್ಯಾನ್ ಮಾಟಿಯೊ ಕೌಂಟಿ ಪೊಲೀಸರು ಟ್ವೀಟ್ ಮಾಡಿದ್ದು, ‘ಶಂಕಿತ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಸಮುದಾಯಕ್ಕೆ ಯಾವುದೇ ಆತಂಕ ಇಲ್ಲ’ ಎಂದು ಹೇಳಿದ್ದಾರೆ. ಮೌಂಟೇನ್ ಮಶ್ರೂಮ್ ಫಾರ್ಮ್ ಎಂಬಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ಇದೇ ಸ್ಥಳಕ್ಕೆ ಸಮೀಪವಿರುವ ರೈಸ್ ಟಕಿಂಗ್-ಸಾಯಿಲ್ ಫಾರ್ಮ್ ಎಂಬಲ್ಲಿ ನಡೆದ ಮತ್ತೊಂದು ಗುಂಡು ಹಾರಾಟ ಪ್ರಕರಣದಲ್ಲಿ ಮೂವರು ಮೃತಪಟ್ಟರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದವು. ನಂತರ ಮತ್ತೊಮ್ಮೆ ಮಾಹಿತಿಯನ್ನು ಅಪ್​ಡೇಟ್ ಮಾಡಿದ್ದ ಮಾಧ್ಯಮಗಳು ಎರಡೂ ಪ್ರಕರಣಗಳಲ್ಲಿ ಸತ್ತವರ ಸಂಖ್ಯೆ 7ಕ್ಕೇರಿದೆ ಎಂದು ಹೇಳಿದ್ದವು.

ಘಟನೆ ಕುರಿತು ಪ್ರತಿಕ್ರಿಯಿಸಿದ್ದ ಕ್ಯಾಲಿಫೋರ್ನಿಯಾ ಗವರ್ನರ್ ಗಾವಿನ್ ನ್ಯೂಸೊಮ್, ‘ಗುಂಡಿನ ದಾಳಿಯ ಸಂತ್ರಸ್ತರೊಂದಿಗೆ ನಾನು ಮಾತನಾಡುತ್ತಿದ್ದಾಗಲೇ ಮತ್ತೊಂದು ಅಂಥದ್ದೇ ಪ್ರಕರಣದ ಬಗ್ಗೆ ಮಾಹಿತಿ ನೀಡಲೆಂದು ನನ್ನನ್ನು ಕರೆದುಕೊಂಡು ಹೋದರು. ಇದೇನಿದು ದುರಂತಗಳ ಮೇಲೆ ದುರಂತ’ ಎಂದು ಟ್ವೀಟ್ ಮಾಡಿದ್ದರು. ಈ ಎರಡು ಘಟನೆಗಳ ಬೆನ್ನಿಗೇ ಐಯೊವಾ ನಗರದಲ್ಲಿ ಗುಂಡಿನ ಹಾರಾಟ ನಡೆದಿದೆ. ತೃಪ್ತಿಕರ ಶೈಕ್ಷಣಿಕ ಪ್ರಗತಿ ಸಾಧಿಸದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಗುಂಡಿನ ಹಾರಾಟ ನಡೆದಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

ಅಮೆರಿಕದಲ್ಲಿ ಇತ್ತೀಚಿನ ದಿನಗಳಲ್ಲಿ ಗುಂಡು ಹಾರಾಟ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಿಂದ ಆಯುಧಗಳನ್ನು ಹಿಂಪಡೆಯಬೇಕು, ಆಯುಧ ಹೊಂದುವ ನಿಯಮಗಳನ್ನು ಬಿಗಿಮಾಡಬೇಕು ಎಂಬ ಒತ್ತಾಯ ವ್ಯಾಪಕವಾಗಿ ಕೇಳಿಬರುತ್ತಿದೆ. ಕಳೆದ 2022ರಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ ಒಟ್ಟು 647 ಸಮೂಹ ಗುಂಡಿನದಾಳಿ ಪ್ರಕರಣಗಳು ವರದಿಯಾಗಿದ್ದವು. ಅಮೆರಿಕದ ವಿವಿಧೆಡೆ ಒಟ್ಟು 44,000 ಮಂದಿ ಗುಂಡಿನ ದಾಳಿಯಿಂದ ಮೃತಪಟ್ಟಿದ್ದರು. ಇದು ಅಮೆರಿಕದಲ್ಲಿ ಆತ್ಮಹತ್ಯೆ ಮಾಡಿಕೊಂಡವರ ಒಟ್ಟು ಸಂಖ್ಯೆಗಿಂತಲೂ ಅರ್ಧದಷ್ಟು ಕಡಿಮೆ.

ಇದನ್ನೂ ಓದಿ: US Shootings: ಅಮೆರಿಕದ ಶಾಲೆಯಲ್ಲಿ ಗುಂಡುಹಾರಾಟ; ಇಬ್ಬರು ವಿದ್ಯಾರ್ಥಿಗಳು ಸಾವು, ಶಿಕ್ಷಕಿಗೆ ಗಾಯ

ಮತ್ತಷ್ಟು ವಿದೇಶ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:05 am, Tue, 24 January 23

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ