ಡೊನಾಲ್ಡ್ ಟ್ರಂಪ್ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ರದ್ದುಗೊಳಿಸಿದ ಟ್ವಿಟ್ಟರ್ ಸಂಸ್ಥೆ!
ಯುಎಸ್ ಕ್ಯಾಪಿಟಲ್ ಮೇಲೆ ಟ್ರಂಪ್ ಬೆಂಬಲಿಗರು ನಡೆಸಿದ ಗಲಭೆಯನ್ನ ಬೆಂಬಲಿಸಿ ಟ್ವೀಟ್ ಮಾಡಿದ್ದ ಡೊನಾಲ್ಡ್ ಟ್ರಂಪ್ ಟ್ವಿಟ್ಟರ್ ಖಾತೆಯನ್ನು, ಟ್ವಿಟ್ಟರ್ ಸಂಸ್ಥೆ ಶಾಶ್ವತವಾಗಿ ರದ್ದುಗೊಳಿಸಿದೆ.
ಸ್ಯಾನ್ ಫ್ರಾನ್ಸಿಸ್ಕೋ: ಯುಎಸ್ ಕ್ಯಾಪಿಟಲ್ ಮೇಲೆ ಟ್ರಂಪ್ ಬೆಂಬಲಿಗರು ನಡೆಸಿದ ಗಲಭೆಯನ್ನ ಬೆಂಬಲಿಸಿ ಟ್ವೀಟ್ ಮಾಡಿದ್ದ ಡೊನಾಲ್ಡ್ ಟ್ರಂಪ್ ಟ್ವಿಟ್ಟರ್ ಖಾತೆಯನ್ನು, ಟ್ವಿಟ್ಟರ್ ಸಂಸ್ಥೆ ಶಾಶ್ವತವಾಗಿ ರದ್ದುಗೊಳಿಸಿದೆ.
@RealDonaldTrump ಖಾತೆಯಿಂದ ಇತ್ತೀಚಿನ ಟ್ವೀಟ್‌ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ನಂತರ, ಟ್ವಿಟರ್ ತನ್ನ ನಿರ್ಧಾರವನ್ನು ವಿವರಿಸುವ ಬ್ಲಾಗ್ ಪೋಸ್ಟ್‌ನಲ್ಲಿ, ಹಿಂಸಾಚಾರವನ್ನು ಮತ್ತಷ್ಟು ಪ್ರಚೋದಿಸುವ ಅಪಾಯದಿಂದಾಗಿ ನಾವು ಡೊನಾಲ್ಡ್ ಟ್ರಂಪ್ ಅವರ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಿದ್ದೇವೆ ಎಂದು ತಿಳಿಸಿದೆ.
ಗಲಭೆ ಕುರಿತಂತೆ ಟ್ವೀಟ್ ಮಾಡಿದ್ದ ಡೊನಾಲ್ಡ್ ಟ್ರಂಪ್, ತಮ್ಮ ಬೆಂಬಲಿಗರ್ಯಾರು ಅಗೌರವಕ್ಕೆ ಒಳಗಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದಲ್ಲದೆ ಮತ್ತೊಂದು ಟ್ವೀಟ್ನಲ್ಲಿ ನಾನು ಜನವರಿ 20 ರಂದು ನಡೆಯುವ ಬಿಡನ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಬಾಗವಹಿಸುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಈ ಟ್ವೀಟ್‌ಗಳನ್ನು ಗಂಭೀರವಾಗಿ ಪರಿಗಣಿಸಿದ ಟ್ವಿಟ್ಟರ್ ಸಂಸ್ಥೆ ಈ ನಿರ್ಧಾರಕ್ಕೆ ಬಂದಿದೆ.
Published On - 7:30 am, Sat, 9 January 21