AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌದಿ ಅರೇಬಿಯಾದ ರಿಯಾದ್ ವಿಮಾನ ನಿಲ್ದಾಣದ ಮೇಲಿನ ಹೌತಿ ದಾಳಿ; ಅ. 17ರವರೆಗೂ ಏರ್​ಪೋರ್ಟ್ ಬಂದ್

ಯೆಮೆನ್‌ನ ಇರಾನ್ ಬೆಂಬಲಿತ ಹೌತಿ ದಂಗೆಕೋರರು ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿರುವ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಸರಣಿ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದ್ದು, ಪರಿಸ್ಥಿತಿ ತೀವ್ರ ಉದ್ವಿಗ್ನಗೊಂಡಿದೆ. ಸೌದಿ ನಾಗರಿಕ ವಿಮಾನಯಾನ ಪ್ರಾಧಿಕಾರವು ಕಿಂಗ್ ಖಾಲಿದ್ ವಿಮಾನ ನಿಲ್ದಾಣದ ಕಾರ್ಯಾಚರಣೆಯ ಅಮಾನತನ್ನು ಅಕ್ಟೋಬರ್ 17ರವರೆಗೆ ವಿಸ್ತರಿಸಿ ಅಧಿಕೃತ ಸೂಚನೆ ಹೊರಡಿಸಿದೆ. ಮೂಲಸೌಕರ್ಯಗಳ ದುರಸ್ತಿ ಮತ್ತು ಭದ್ರತಾ ಸಜ್ಜುಗೊಳಿಸುವಿಕೆಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸೌದಿ ಅರೇಬಿಯಾದ ರಿಯಾದ್ ವಿಮಾನ ನಿಲ್ದಾಣದ ಮೇಲಿನ ಹೌತಿ ದಾಳಿ; ಅ. 17ರವರೆಗೂ ಏರ್​ಪೋರ್ಟ್ ಬಂದ್
ರಿಯಾದ್ ವಿಮಾನ ನಿಲ್ದಾಣImage Credit source: X
ಸುಷ್ಮಾ ಚಕ್ರೆ
|

Updated on: Oct 12, 2026 | 10:52 PM

Share

ರಿಯಾದ್, ಅಕ್ಟೋಬರ್ 12: ಯೆಮೆನ್‌ನ ಇರಾನ್ ಬೆಂಬಲಿತ ಹೌತಿ ದಂಗೆಕೋರರು ನಡೆಸಿದ ಮಾರಕ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳ ಬೆನ್ನಲ್ಲೇ, ಸೌದಿ ಅರೇಬಿಯಾದ ಪ್ರಮುಖ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯ ತಡೆಯನ್ನು ಅಕ್ಟೋಬರ್ 17ರವರೆಗೆ ವಿಸ್ತರಿಸಲಾಗಿದೆ. ವಿಮಾನಯಾನ ಸಂಸ್ಥೆಗಳು ಹಾಗೂ ಪೈಲಟ್‌ಗಳಿಗೆ ನೀಡಿರುವ ಅಧಿಕೃತ ಸೂಚನೆಯ ಪ್ರಕಾರ ಅಕ್ಟೋಬರ್ 17ರವರೆಗೆ ರಿಯಾದ್ ವಿಮಾನ ನಿಲ್ದಾಣವು ಸಂಪೂರ್ಣವಾಗಿ ಬಂದ್ ಆಗಿರಲಿದೆ. ಸೌದಿ ಅರೇಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರವು ವಿಮಾನ ನಿಲ್ದಾಣದ ಭದ್ರತೆ ಹಾಗೂ ಮೂಲಸೌಕರ್ಯಗಳ ಸಜ್ಜುಗೊಳಿಸುವಿಕೆಯನ್ನು ಪರಿಶೀಲಿಸುತ್ತಿದ್ದು, ಪ್ರಯಾಣಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಸೌದಿ ಅರೇಬಿಯಾದ ಎರಡನೇ ಅತಿ ದೊಡ್ಡ ಹಾಗೂ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣದ ಈ ಸುದೀರ್ಘ ಬಂದ್‌ನಿಂದಾಗಿ ಜಾಗತಿಕ ವಿಮಾನಯಾನ ಸೇವೆಗಳಲ್ಲಿ ಭಾರಿ ಏರುಪೇರು ಉಂಟಾಗಿದೆ.

ಅಕ್ಟೋಬರ್ 10ರ ಶನಿವಾರ ನಡೆದ ಭೀಕರ ದಾಳಿಯಲ್ಲಿ 13 ಜನರು ಮೃತಪಟ್ಟು, 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಮೃತರ ಪೈಕಿ ಒಬ್ಬ ಭಾರತೀಯ ನಾಗರಿಕ ಸೇರಿದ್ದಾನೆ ಎಂಬುದನ್ನು ಭಾರತೀಯ ವಿದೇಶಾಂಗ ಸಚಿವಾಲಯ ಹಾಗೂ ಸೌದಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕೃತವಾಗಿ ದೃಢಪಡಿಸಿವೆ. ಭಾನುವಾರ ನಡೆದ ಮತ್ತೊಂದು ದಾಳಿಯಲ್ಲಿ ಒಬ್ಬರು ಮೃತಪಟ್ಟು 11 ಜನರು ಗಾಯಗೊಂಡಿದ್ದಾರೆ.

ಭಾರತ ಸರ್ಕಾರ ಖಂಡನೆ:

ನಾಗರಿಕ ವಿಮಾನ ನಿಲ್ದಾಣ ಹಾಗೂ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಈ ಭಯೋತ್ಪಾದನಾ ಕೃತ್ಯವನ್ನು ಭಾರತ ಸರ್ಕಾರ ಕಠಿಣ ಶಬ್ದಗಳಲ್ಲಿ ಖಂಡಿಸಿದೆ. ಮೃತಪಟ್ಟ ಭಾರತೀಯನ ಕುಟುಂಬಕ್ಕೆ ಅಗತ್ಯವಿರುವ ಎಲ್ಲಾ ನೆರವು ಮತ್ತು ಮೃತದೇಹವನ್ನು ತಾಯ್ನಾಡಿಗೆ ತರಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ‘ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಒಪ್ಪಲಾಗದು’; ಸೌದಿ ವಿಮಾನ ನಿಲ್ದಾಣಗಳ ಮೇಲಿನ ಹೌತಿ ದಾಳಿಗೆ ಭಾರತ ಖಂಡನೆ

ಸೌದಿ ಅರೇಬಿಯಾದ್ಯಂತ ಶೇ. 46.4ರಷ್ಟು ವಿಮಾನ ಸೇವೆಗಳು ರದ್ದಾಗಿವೆ. ಲುಫ್ಥಾನ್ಸಾ, ಏರ್ ಫ್ರಾನ್ಸ್, ಎತಿಹಾದ್ ಸೇರಿದಂತೆ ಪ್ರಮುಖ ಅಂತಾರಾಷ್ಟ್ರೀಯ ಸಂಸ್ಥೆಗಳು ರಿಯಾದ್‌ಗೆ ತೆರಳುವ ವಿಮಾನಗಳನ್ನು ರದ್ದುಗೊಳಿಸಿವೆ. ಡೆಲ್ಟಾ ಏರ್‌ಲೈನ್ಸ್ ತನ್ನ ಹೊಸ ಸೇವೆಗಳನ್ನು 2027ರವರೆಗೆ ಮುಂದೂಡಿದೆ. ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಗಲ್ಫ್ ರಾಷ್ಟ್ರಗಳಲ್ಲಿರುವ ಭಾರತೀಯ ನಾಗರಿಕರು ಹಾಗೂ ಪ್ರಯಾಣಿಕರಿಗೆ ಜಾಗರೂಕರಾಗಿರಲು ಮತ್ತು ತುರ್ತು ಸಂದರ್ಭಗಳಲ್ಲಿ ಕಚೇರಿಯನ್ನು ಸಂಪರ್ಕಿಸಲು ಸೂಚಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ