AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಷ್ಯಾ-ಉಕ್ರೇನ್ ನಡುವೆ ತಕ್ಷಣದಿಂದ ಜಾರಿಗೆ ಬರುವಂತೆ ಇಂಧನ ಕದನವಿರಾಮ ಒಪ್ಪಂದ’; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ

ರಷ್ಯಾ ಮತ್ತು ಉಕ್ರೇನ್ ನಡುವೆ ತಕ್ಷಣದಿಂದ ಜಾರಿಗೆ ಬರುವಂತೆ ಇಂಧನ ವಲಯಕ್ಕೆ ಸಂಬಂಧಿಸಿದ ಕದನವಿರಾಮ ಒಪ್ಪಂದ ಏರ್ಪಟ್ಟಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಎರಡೂ ದೇಶಗಳು ಈ ಒಪ್ಪಂದಕ್ಕೆ ಸಮ್ಮತಿಸಿವೆ ಎಂದು ಅವರು ತಿಳಿಸಿದ್ದಾರೆ. ಈ ಒಪ್ಪಂದದ ಪ್ರಕಾರ, ಉಕ್ರೇನ್ ರಷ್ಯಾದ ತೈಲ ಸಂಸ್ಕರಣಾಗಾರಗಳು ಮತ್ತು ಅನಿಲ ಘಟಕಗಳ ಮೇಲೆ ಡ್ರೋನ್ ಅಥವಾ ಕ್ಷಿಪಣಿ ದಾಳಿ ಮಾಡುವುದಿಲ್ಲ. ಅದೇ ರೀತಿ, ರಷ್ಯಾ ಉಕ್ರೇನ್‌ನ ವಿದ್ಯುತ್ ಗ್ರಿಡ್‌ಗಳು, ವಿದ್ಯುತ್ ಸ್ಥಾವರಗಳು ಮತ್ತು ಇಂಧನ ಸೌಲಭ್ಯಗಳ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸಲಿದೆ. ರಷ್ಯಾ ಅಥವಾ ಉಕ್ರೇನ್ ಕಡೆಯಿಂದಲೂ ಈವರೆಗೆ ಯಾವುದೇ ಅಧಿಕೃತ ದೃಢೀಕರಣ ಹೊರಬಂದಿಲ್ಲ.

‘ರಷ್ಯಾ-ಉಕ್ರೇನ್ ನಡುವೆ ತಕ್ಷಣದಿಂದ ಜಾರಿಗೆ ಬರುವಂತೆ ಇಂಧನ ಕದನವಿರಾಮ ಒಪ್ಪಂದ’; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ
ಟ್ರಂಪ್ Image Credit source: AP
ಸುಷ್ಮಾ ಚಕ್ರೆ
|

Updated on: Oct 11, 2026 | 9:22 PM

Share

ವಾಷಿಂಗ್ಟನ್, ಅಕ್ಟೋಬರ್ 11: ರಷ್ಯಾ ಮತ್ತು ಉಕ್ರೇನ್ ನಡುವೆ ತಕ್ಷಣದಿಂದ ಜಾರಿಗೆ ಬರುವಂತೆ “ಇಂಧನ ಕದನವಿರಾಮ” ಒಪ್ಪಂದ ಏರ್ಪಟ್ಟಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು (ಅಕ್ಟೋಬರ್ 11) ಘೋಷಿಸಿದ್ದಾರೆ. ಎರಡೂ ದೇಶಗಳು ಈ  ಕದನವಿರಾಮಕ್ಕೆ ಸಮ್ಮತಿಸಿವೆ ಎಂದು ಟ್ರಂಪ್ ತಿಳಿಸಿದ್ದಾರೆ. ಈ ಬಗ್ಗೆ ‘ಟ್ರೂತ್ ಸೋಶಿಯಲ್’ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಈ ವಿಷಯ ತಿಳಿಸಿರುವ ಟ್ರಂಪ್, ಈ ಒಪ್ಪಂದವನ್ನು ಉಲ್ಲಂಘಿಸದಂತೆ ಮಾಸ್ಕೋ ಮತ್ತು ಕೈವ್‌ಗೆ ಮನವಿ ಮಾಡಿದ್ದಾರೆ.

ಆದರೆ, ಈ ಕದನವಿರಾಮದ ಅವಧಿ ಎಷ್ಟು? ಅಥವಾ ಇದನ್ನು ಹೇಗೆ ಜಾರಿಗೊಳಿಸಲಾಗುತ್ತದೆ? ಎಂಬುದನ್ನು ಟ್ರಂಪ್ ಸ್ಪಷ್ಟಪಡಿಸಿಲ್ಲ. ಅಲ್ಲದೆ, ರಷ್ಯಾ ಆಗಲಿ ಅಥವಾ ಶ್ವೇತಭವನವಾಗಲಿ ಈ ಕುರಿತು ಯಾವುದೇ ಅಧಿಕೃತ ಹೇಳಿಕೆಯನ್ನು ನೀಡುವ ಮುನ್ನವೇ ಟ್ರಂಪ್ ಈ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ, ತೈಲಾಗಾರಗಳ ಮೇಲಿನ ದಾಳಿ ನಿಲ್ಲಿಸಲು ಎಚ್ಚರಿಕೆ

‘ಟ್ರೂತ್ ಸೋಶಿಯಲ್’ ಪೋಸ್ಟ್‌ನಲ್ಲಿ ಟ್ರಂಪ್, “ತಕ್ಷಣದಿಂದ ಜಾರಿಗೆ ಬರುವಂತೆ ರಷ್ಯಾ ಮತ್ತು ಉಕ್ರೇನ್ ಯುದ್ಧದಲ್ಲಿ ಇಂಧನ ಕದನವಿರಾಮ ಜಾರಿಯಾಗಿದೆ. ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ. ಇದನ್ನು ಯಾರೂ ಮುರಿಯಬೇಡಿ! ಈ ವಿಷಯವನ್ನು ಗಮನಿಸಿದ್ದಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ. ಪ್ರಸ್ತುತ ಈ ಒಪ್ಪಂದವನ್ನು ರಷ್ಯಾ ಅಥವಾ ಉಕ್ರೇನ್ ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ.

ಇಂಧನ ಕದನವಿರಾಮ ಎಂದರೆ ಎರಡೂ ದೇಶಗಳು ಪರಸ್ಪರರ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸದಿರಲು ಮಾಡಿಕೊಳ್ಳುವ ಸೀಮಿತ ಹಾಗೂ ಪರಸ್ಪರ ಒಪ್ಪಂದವಾಗಿದೆ. ಇದು ಪೂರ್ಣ ಪ್ರಮಾಣದ ಕದನವಿರಾಮವಲ್ಲ, ಬದಲಿಗೆ ಕೇವಲ ಇಂಧನ ಕ್ಷೇತ್ರಕ್ಕೆ ಮಾತ್ರ ಸೀಮಿತವಾದ ನಿರ್ಧಾರವಾಗಿದೆ. ಸರಳವಾಗಿ ಹೇಳುವುದಾದರೆ, ಉಕ್ರೇನ್ ರಷ್ಯಾದ ತೈಲ ಸಂಸ್ಕರಣಾಗಾರಗಳು, ತೈಲ ಸಂಗ್ರಹಾಗಾರಗಳು, ಅನಿಲ ಘಟಕಗಳು ಅಥವಾ ಇಂಧನ ರಫ್ತು ಕೇಂದ್ರಗಳ ಮೇಲೆ ಡ್ರೋನ್ ಅಥವಾ ಕ್ಷಿಪಣಿ ದಾಳಿ ನಡೆಸುವುದಿಲ್ಲ. ಅದೇ ರೀತಿ, ರಷ್ಯಾ ಉಕ್ರೇನ್‌ನ ವಿದ್ಯುತ್ ಗ್ರಿಡ್‌ಗಳು, ವಿದ್ಯುತ್ ಸ್ಥಾವರಗಳು, ಹೀಟಿಂಗ್ ವ್ಯವಸ್ಥೆಗಳು, ಸಬ್‌ಸ್ಟೇಷನ್‌ಗಳು ಮತ್ತು ತೈಲ ಪಂಪ್‌ಗಳ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸಲಿದೆ. ಇಂಧನ ಮೂಲಸೌಕರ್ಯ ಹೊರತುಪಡಿಸಿ ಯುದ್ಧದ ಇತರ ಭಾಗಗಳು ಎಂದಿನಂತೆ ಮುಂದುವರಿಯಲಿವೆ.

ಇದನ್ನೂ ಓದಿ: ರಷ್ಯಾದಿಂದ ಡೀಸೆಲ್ ಖರೀದಿಗೆ ಟ್ರಂಪ್ ಒಪ್ಪಂದ: ಉಕ್ರೇನ್ ಕೆಂಡಾಮಂಡಲ, ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ!

ಉಕ್ರೇನ್‌ಗೆ ಹೊಸ ಅಧ್ಯಕ್ಷರ ಅಗತ್ಯವಿದೆ ಎಂದ ಟ್ರಂಪ್:

ರಷ್ಯಾದ ಡೀಸೆಲ್ ಘಟಕಗಳ ಮೇಲೆ ದಾಳಿ ನಡೆಸಿ ಜಾಗತಿಕ ಇಂಧನ ಕೊರತೆಗೆ ಕಾರಣರಾಗಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಟ್ರಂಪ್ ಶನಿವಾರ ನಿಂದಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಯುದ್ಧವನ್ನು ಅಂತ್ಯಗೊಳಿಸಲು ಝೆಲೆನ್ಸ್ಕಿ ಸೂಕ್ತ ಕ್ರಮ ಕೈಗೊಂಡಿಲ್ಲ ಮತ್ತು ಅಮೆರಿಕದಲ್ಲಿ ಡೀಸೆಲ್ ಬೆಲೆ ಏರಿಕೆಗೆ ಅವರೇ ಕಾರಣ ಎಂದು ಆರೋಪಿಸಿದ್ದ ಟ್ರಂಪ್, ಉಕ್ರೇನ್‌ಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಮಯ ಬಂದಿದೆ ಎಂದಿದ್ದರು.

ಟ್ರಂಪ್ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಝೆಲೆನ್ಸ್ಕಿ, ರಷ್ಯಾ 60 ದಿನಗಳ ಕಾಲ ಪೂರ್ಣ ಕದನವಿರಾಮಕ್ಕೆ ಒಪ್ಪಿಕೊಂಡರೆ ಉಕ್ರೇನ್‌ನಲ್ಲಿ ಚುನಾವಣೆ ನಡೆಸಲು ಸಿದ್ಧ ಎಂದಿದ್ದರು. “ನಮಗೆ 2 ತಿಂಗಳು, ಅಂದರೆ 60 ದಿನಗಳ ಕಾಲ ಸಂಪೂರ್ಣ ಯುದ್ಧ ವಿರಾಮ ನೀಡಿ. ನಾವು ಚುನಾವಣೆ ಆಯೋಜಿಸುತ್ತೇವೆ. ಜನ ನೀಡುವ ತೀರ್ಪನ್ನು ನಾವು ಸ್ವೀಕರಿಸುತ್ತೇವೆ” ಎಂದು ಅವರು ಹೇಳಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು