AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia- Ukraine War: ‘ಯುದ್ಧ ಬೇಡ’ ಎಂದು ಪ್ರತಿಭಟನೆ ನಡೆಸುತ್ತಿದ್ದ ತನ್ನದೇ ದೇಶದ 1,700 ನಾಗರಿಕರನ್ನು ಬಂಧಿಸಿದ ರಷ್ಯಾ

Ukraine Crisis: ಯುದ್ಧ ನಿಲ್ಲಿಸಿ ಎಂದು ವಿಶ್ವದ ಹಲವು ರಾಷ್ಟ್ರಗಳು ರಷ್ಯಾ ಮೇಲೆ ಯುದ್ಧ ಸಾರಿರುವಂತೆಯೇ ರಷ್ಯಾದ ನಾಗರಿಕರು ಕೂಡ ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ಹೊರಹಾಕಿದ್ಧಾರೆ. ‘ಯುದ್ಧ ಬೇಡ’ ಎಂದು ಪ್ರತಿಭಟಿಸುತ್ತಿದ್ದ ಹಲವು ನಾಗರಿಕರನ್ನು ಪೊಲೀಸರು ಬಂಧಿಸಿದ್ದಾರೆ.

Russia- Ukraine War: ‘ಯುದ್ಧ ಬೇಡ’ ಎಂದು ಪ್ರತಿಭಟನೆ ನಡೆಸುತ್ತಿದ್ದ ತನ್ನದೇ ದೇಶದ 1,700 ನಾಗರಿಕರನ್ನು ಬಂಧಿಸಿದ ರಷ್ಯಾ
ಸೇಂಟ್​​ ಪೀಟರ್ಸ್​​​ಬರ್ಗ್​ನಲ್ಲಿ ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು (ಎಪಿ ಚಿತ್ರ)
TV9 Web
| Updated By: shivaprasad.hs|

Updated on:Feb 25, 2022 | 11:02 AM

Share

ಗುರುವಾರ ಉಕ್ರೇನ್​ ಇರುದ್ಧ ರಷ್ಯಾ ಯುದ್ಧ (Russia- Ukraine War) ಘೋಷಿಸಿದೆ. ಈಗಾಗಲೇ ಈ ಕದನದಲ್ಲಿ ಎರಡೂ ದೇಶದ ಹಲವಾರು ಸೈನಿಕರು, ಜನ ಸಾಮಾನ್ಯರು ಪ್ರಾಣ ಕಳೆದುಕೊಂಡಿದ್ದಾರೆ. ವಿಶ್ವದ ಹಲವು ರಾಷ್ಟ್ರಗಳು ರಷ್ಯಾಗೆ ನಿರ್ಬಂಧಗಳನ್ನು ಹೇರಿ, ಯುದ್ಧ ನಿಲ್ಲಿಸಲು ಒತ್ತಾಯಿಸಿವೆ. ಆದರೆ ರಷ್ಯಾ ಪಾಶ್ಚಾತ್ಯ ರಾಷ್ಟ್ರಗಳು ತಮ್ಮ ತಂಟೆಗೆ ಬಂದರೆ ಪರಿಣಾಮ ಭೀಕರವಾಗಿರಲಿದೆ ಎಂದು ಪ್ರತಿಯಾಗಿ ಎಚ್ಚರಿಸಿದೆ. ಇದೀಗ ರಷ್ಯಾದ ನಿರ್ಧಾರದ ವಿರುದ್ಧ ಅದೇ ದೇಶದ ನಾಗರಿಕರು ಅಸಮಾಧಾನ ಹೊರಹಾಕಿದ್ದಾರೆ. ‘ಯುದ್ಧ ಬೇಡ’ (No to war) ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದ ಸಾವಿರಾರು ಜನರನ್ನು ರಷ್ಯಾದಲ್ಲಿ ಬಂಧಿಸಲಾಗಿದೆ. ಸುದ್ದಿ ಸಂಸ್ಥೆ ಎಎಫ್​ಪಿ ಈ ಕುರಿತು ವರದಿ ಮಾಡಿದ್ದು, ರಷ್ಯಾದ ಮಾಜಿ ರಾಜಧಾನಿ ಸೇಂಟ್ ಪೀಟರ್ಸ್​​ಬರ್ಗ್​ನಲ್ಲಿ ಸುಮಾರು 1,000 ಜನರು ಪ್ರತಿಭಟನೆಗೆ ಆಗಮಿಸಿದ್ದರು. ಮಧ್ಯ ಮಾಸ್ಕೋದ ಪುಷ್ಕಿನ್ ಚೌಕದ ಬಳಿಯೂ ಜನರು ಪ್ರತಿಭಟನೆ ನಡೆಸಿದ್ದಾರೆ. ಎಲ್ಲೆಡೆ ‘ಯುದ್ಧ ಬೇಡ’ ಎಂಬ ಘೋಷಣೆ ಮೊಳಗಿದೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಒಟ್ಟು 1,700 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಪ್ರತಿಭಟನಾಕಾರರಲ್ಲಿ ಒಬ್ಬರಾಗಿದ್ದ ಅನಸ್ತಾಸಿಯಾ ನೆಸ್ಟುಲ್ಯ ಎಎಫ್​ಪಿ ಜತೆ ಮಾತನಾಡಿ, ‘ನನಗೆ ಆಘಾತವಾಗಿದೆ. ನನ್ನ ಸಂಬಂಧಿಕರು ಮತ್ತು ಪ್ರೀತಿಪಾತ್ರರು ಉಕ್ರೇನ್‌ನಲ್ಲಿ ವಾಸಿಸುತ್ತಿದ್ದಾರೆ. ನಾನು ಅವರಿಗೆ ಫೋನ್ ಮೂಲಕ ಏನು ಹೇಳಬಹುದು? ನೀವು ಅಲ್ಲಿಯೇ ಇರಿ ಎನ್ನಲೇ?’ ಎಂದು ಅವರು ಪ್ರಶ್ನಿಸಿದ್ದಾರೆ. ಅಲ್ಲದೇ ಜನರು ಸರ್ಕಾರದ ವಿರುದ್ಧ ಪ್ರತಿಭಟಿಸಲು ಹೆದರುತ್ತಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.

ಮತ್ತೊಂದೆಡೆ, ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ಮುಖವಾಡ ಧರಿಸಿದ್ದ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರನ್ನು ಬಲವಂತವಾಗಿ ಬಂಧಿಸಿ ಎಳೆದುಕೊಂಡು ಹೋಗುತ್ತಿರುವುದು ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಪ್ರತಿಭಟನಾಕಾರರು ತಮ್ಮನ್ನು ಬಿಟ್ಟು ರಷ್ಯಾ ಅಧ್ಯಕ್ಷ ಪುಟಿನ್ ಅವರನ್ನು ಬಂಧಿಸುವಂತೆ ಒತ್ತಾಯಿಸಿದರು. ‘ಅಧಿಕಾರಿಗಳು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂಬ ಭಾವನೆ ನನ್ನಲ್ಲಿದೆ’ ಎಂದು ಸ್ವೆಟ್ಲಾನಾ ವೋಲ್ಕೊವಾ ಮಾಧ್ಯಮದೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.

ಪ್ರತಿಭಟನಾಕಾರರ ಹೊರತಾಗಿ ವ್ಲಾಡಿಮಿರ್ ಪುಟಿನ್ ಮತ್ತು ಅವರ ಆಡಳಿತದ ಕಟು ಟೀಕಾಕಾರರಾಗಿರುವ, ಪ್ರಸ್ತುತ ಜೈಲಿನಲ್ಲಿರುವ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಲ್ನಿ ಅವರು ಉಕ್ರೇನ್ ಆಕ್ರಮಣದ ವಿರುದ್ಧ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ರಷ್ಯಾ ದೇಶದೊಳಗಿನ ಸಮಸ್ಯೆಗಳನ್ನು ಮುಚ್ಚಿಹಾಕಿ, ಜನರ ಗಮನ ಬೇರೆಡೆ ಸೆಳೆಯಲು ಉಕ್ರೇನ್ ಮೇಲೆ ಯುದ್ಧ ಸಾರಲಾಗಿದೆ’ ಎಂದು ಅವರು ಆರೋಪಿಸಿದ್ದಾರೆ.

‘ಪುಟಿನ್​ರನ್ನು ಅರೆಸ್ಟ್ ಮಾಡಿ, ನನ್ನನ್ನಲ್ಲ’ ಎಂದ ಪ್ರತಿಭಟನಾಕಾರ; ವಿಡಿಯೋ ಇಲ್ಲಿದೆ:

ರಷ್ಯಾದ ವಿರುದ್ಧ ವಿವಿಧ ದೇಶಗಳಲ್ಲಿ ವಾಸಿಸುತ್ತಿರುವ ಉಕ್ರೇನಿಯನ್ನರು ಪ್ರತಿಭಟನೆ ನಡೆಸುತ್ತಿದ್ದಾರೆ. ಜಪಾನ್​ನಲ್ಲಿ ರಷ್ಯಾ ರಾಯಭಾರ ಕಚೇರಿಯ ಮುಂದೆ ಜನರು ಪ್ರತಿಭಟನೆ ನಡೆಸಿದ್ದರು. ಅಮೇರಿಕಾ ಸೇರಿದಂತೆ ಹಲವು ದೇಶಗಳಲ್ಲಿರುವ ಉಕ್ರೇನಿಯನ್ ನಾಗರಿಕರು ರಷ್ಯಾ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:

ಸಮಾಧಾನಕರ ಸಂಗತಿ: ಬಂಕರ್​ನಲ್ಲಿದ್ದ ಕನ್ನಡಿಗರು ಸೇಫ್-ಸೇಫ್, ಅಲ್ಲಿಯೇ ವಿದ್ಯಾಭ್ಯಾಸ ಮುಂದುವರಿಸುವ ಆಶಯ, ಆತ್ಮವಿಶ್ವಾಸ!

Ukraine Crisis: ರಷ್ಯಾ ನಡೆಸಿದ ದಾಳಿಯಲ್ಲಿ ಉಕ್ರೇನ್​ನ 137 ಜನರ ಮರಣ; ರಷ್ಯಾ- ಉಕ್ರೇನ್ ಬೆಳವಣಿಗೆಯ ಮುಖ್ಯಾಂಶಗಳು ಇಲ್ಲಿವೆ

Published On - 10:59 am, Fri, 25 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ