Cancer Vaccine: ಕ್ಯಾನ್ಸರ್​ ಲಸಿಕೆ ಸಿದ್ಧ, ವೈದ್ಯಕೀಯ ವಿಜ್ಞಾನದಲ್ಲಿ ರಷ್ಯಾದ ಸಾಧನೆ, ಲಸಿಕೆ ಉಚಿತ

ರಷ್ಯಾದ ಆರೋಗ್ಯ ಸಚಿವಾಲಯವು ಕ್ಯಾನ್ಸರ್ ಲಸಿಕೆಯನ್ನು ಅಭಿವೃದ್ಧಿಪಡಿಸಿರುವುದಾಗಿ ಘೋಷಿಸಿದೆ. ಅದನ್ನು ತನ್ನ ನಾಗರಿಕರಿಗೆ ಉಚಿತವಾಗಿ ನೀಡಲಿದೆ ಎಂಬುದನ್ನೂ ಹೇಳಿದೆ. ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ಮುಖ್ಯಸ್ಥ ಆಂಡ್ರೆ ಕಪ್ರಿನ್ ಮಾತನಾಡಿ ಲಸಿಕೆ ವಿತರಣೆಯನ್ನು 2025ರ ಆರಂಭದಲ್ಲಿ ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ.

Cancer Vaccine: ಕ್ಯಾನ್ಸರ್​ ಲಸಿಕೆ ಸಿದ್ಧ, ವೈದ್ಯಕೀಯ ವಿಜ್ಞಾನದಲ್ಲಿ ರಷ್ಯಾದ ಸಾಧನೆ, ಲಸಿಕೆ ಉಚಿತ
ಲಸಿಕೆ

Updated on: Dec 18, 2024 | 10:10 AM

ರಷ್ಯಾದ ಆರೋಗ್ಯ ಸಚಿವಾಲಯವು ಕ್ಯಾನ್ಸರ್ ಲಸಿಕೆಯನ್ನು ಅಭಿವೃದ್ಧಿಪಡಿಸಿರುವುದಾಗಿ ಘೋಷಿಸಿದೆ. ಅದನ್ನು ತನ್ನ ನಾಗರಿಕರಿಗೆ ಉಚಿತವಾಗಿ ನೀಡಲಿದೆ ಎಂಬುದನ್ನೂ ಹೇಳಿದೆ. ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ಮುಖ್ಯಸ್ಥ ಆಂಡ್ರೆ ಕಪ್ರಿನ್ ಮಾತನಾಡಿ ಲಸಿಕೆ ವಿತರಣೆಯನ್ನು 2025ರ ಆರಂಭದಲ್ಲಿ ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ.

ಈ ಲಸಿಕೆ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ಇರುತ್ತದೆ. ಗಡ್ಡೆಯ ರಚನೆಯನ್ನು ತಡೆಯಲು ಇದನ್ನು ಬಳಸಲಾಗುವುದಿಲ್ಲ. ಪಾಶ್ಚಿಮಾತ್ಯ ದೇಶಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಕ್ಯಾನ್ಸರ್ ಲಸಿಕೆಗಳಂತೆಯೇ ಪ್ರತಿ ಶಾಟ್ ಅನ್ನು ಪ್ರತಿ ರೋಗಿಗೆ ಅನುಗುಣವಾಗಿ ಮಾಡಲಾಗುತ್ತದೆ ಎಂದು ರಷ್ಯಾದ ವಿಜ್ಞಾನಿಗಳು ಹೇಳಿದ್ದಾರೆ. ಈ ಕುರಿತು ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದೆ.

ಆದಾಗ್ಯೂ, ಈ ಲಸಿಕೆ ಯಾವ ರೀತಿಯ ಕ್ಯಾನ್ಸರ್​ಗೆ ಚಿಕಿತ್ಸೆ ನೀಡುತ್ತದೆ, ಅದು ಎಷ್ಟು ಪರಿಣಾಮಕಾರಿಯಾಗಿದೆ ಅಥವಾ ರಷ್ಯಾ ಅದನ್ನು ಹೇಗೆ ಕಾರ್ಯಗತಗೊಳಿಸುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅದೇ ಸಮಯದಲ್ಲಿ, ಲಸಿಕೆ ಹೆಸರನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.

ಮತ್ತಷ್ಟು ಓದಿ:ಶ್ವಾಸಕೋಶದ ಕ್ಯಾನ್ಸರ್​ಗೆ ಕಾರಣವೇನು? ಅದರ ಚಿಕಿತ್ಸೆಯ ವಿಧಾನ ತಿಳಿಯಿರಿ

ಪ್ರಪಂಚದ ಇತರ ಭಾಗಗಳಂತೆ, ರಷ್ಯಾದಲ್ಲಿಯೂ ಕ್ಯಾನ್ಸರ್ ಪ್ರಮಾಣ ಹೆಚ್ಚುತ್ತಿದೆ. 2022 ರಲ್ಲಿ 635,000 ಕ್ಕೂ ಹೆಚ್ಚು ಕ್ಯಾನ್ಸರ್ ರೋಗಿಗಳ ಪ್ರಕರಣಗಳು ದಾಖಲಾಗಿವೆ. ಕೊಲೊನ್, ಸ್ತನ ಮತ್ತು ಶ್ವಾಸಕೋಶದ ಕ್ಯಾನ್ಸರ್​ಗಳು ರಷ್ಯಾದಲ್ಲಿ ಹೆಚ್ಚು ಸಾಮಾನ್ಯವೆಂದು ಹೇಳಲಾಗುತ್ತದೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮಾತನಾಡಿ, ದೇಶದ ವಿಜ್ಞಾನಿಗಳು ಕ್ಯಾನ್ಸರ್​ ಲಸಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಅದು ಅಂತಿಮ ಹಂತದಲ್ಲಿದೆ ಎಂದು ಹೇಳಿದ್ದರು. ನಾವು ಕ್ಯಾನ್ಸರ್ ಲಸಿಕೆಗಳು ಹಾಗೂ ಹೊಸ ಪೀಳಿಗೆಯ ಇಮ್ಯುನೊಮಾಡ್ಯುಲೇಟರಿ ಔಷಧಗಳ ರಚನೆಗೆ ಬಹಳ ಹತ್ತಿರವಾಗುತ್ತಿದ್ದೇವೆ ಎಂದು ಹೇಳಿದ್ದರು.

ಇತರೆ ದೇಶಗಳು ತಮ್ಮದೇ ಆದ ವೈಯಕ್ತಿಕ ಕ್ಯಾನ್ಸರ್​ ಲಸಿಕೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಕೆಲಸ ಮಾಡಿದೆ. ಮೇ ತಿಂಗಳಲ್ಲಿ ಫ್ಲೋರಿಡಾ ವಿಶ್ವವಿದ್ಯಾಲಯದ ಸಂಶೋಧಕರು ನಾಲ್ಕು ರೋಗಿಗಳ ಮೇಲೆ ಲಸಿಕೆಗಳನ್ನು ಪರಿಶೀಲಿಸುತ್ತಿದ್ದರು.
ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, ಕೋವಿಡ್ -19 ಗಾಗಿ ರಷ್ಯಾ ತನ್ನದೇ ಆದ ಸ್ಪುಟ್ನಿಕ್ ವಿ ಲಸಿಕೆಯನ್ನು ತಯಾರಿಸಿತು ಮತ್ತು ಅದನ್ನು ಹಲವಾರು ದೇಶಗಳಿಗೆ ಮಾರಾಟ ಮಾಡಿತ್ತು.

ಇದು  ಟಿವಿ9 ಕನ್ನಡದ ಅಧಿಕೃತ ಮಾಹಿತಿಯಾಗಿರುವುದಿಲ್ಲ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 9:17 am, Wed, 18 December 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us