AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಶಾಕ್ ನೀಡಲಿದೆಯೇ ರಷ್ಯಾ? ಏಪ್ರಿಲ್ 1 ರಿಂದ ಕಚ್ಚಾ ತೈಲ ರಫ್ತು ಸ್ಥಗಿತ!

ಏಪ್ರಿಲ್ 1 ರಿಂದ ಕಚ್ಚಾ ತೈಲ ರಫ್ತು ಸ್ಥಗಿತಗೊಳಿಸಲು ರಷ್ಯಾ ನಿರ್ಧರಿಸಿದ್ದು, ಇದು ಭಾರತದ ಇಂಧನ ಮಾರುಕಟ್ಟೆ ಮೇಲೆ ಕರಿನೆರಳು ಬೀರುವ ಸಾಧ್ಯತೆ ಇದೆ. ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಪಡೆಯುತ್ತಿದ್ದ ಭಾರತಕ್ಕೆ ರಫ್ತು ಸ್ಥಗಿತದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಭೀತಿ ಎದುರಾಗಿದೆಯೇ? ಈ ಬೆಳವಣಿಗೆಯಿಂದ ಭಾರತಕ್ಕಾಗುವ ಲಾಭ-ನಷ್ಟಗಳೇನು? ಇಲ್ಲಿದೆ ವಿವರ.

ಭಾರತಕ್ಕೆ ಶಾಕ್ ನೀಡಲಿದೆಯೇ ರಷ್ಯಾ? ಏಪ್ರಿಲ್ 1 ರಿಂದ ಕಚ್ಚಾ ತೈಲ ರಫ್ತು ಸ್ಥಗಿತ!
ಭಾರತಕ್ಕೆ ಶಾಕ್ ನೀಡಲಿದೆಯೇ ರಷ್ಯಾ? (ಸಾಂದರ್ಭಿಕ ಚಿತ್ರ)Image Credit source: TV9 Network
ಗಣಪತಿ ಶರ್ಮಾ
|

Updated on: Mar 28, 2026 | 9:46 AM

Share

ನವದೆಹಲಿ, ಮಾರ್ಚ್ 28: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ಮುಗಿಯುವ ಲಕ್ಷಣ ಗೋಚರಿಸುತ್ತಿಲ್ಲ. ಮತ್ತೊಂದೆಡೆ, ಎಲ್​ಪಿಜಿ ಗ್ಯಾಸ್ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಹಾಗೂ ಜಾಗತಿಕ ಬಿಕ್ಕಟ್ಟು ಎದುರಾಗಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸುವಂತಹ ನಿರ್ಧಾರವೊಂದನ್ನು ರಷ್ಯಾ (Russia) ಕೈಗೊಂಡಿದೆ. ಏಪ್ರಿಲ್ 1 ರಿಂದ ಕಚ್ಚಾ ತೈಲ ರಫ್ತನ್ನು (Crude Oil Export Ban) ಸ್ಥಗಿತಗೊಳಿಸಲು ರಷ್ಯಾ ಮುಂದಾಗಿದ್ದು, ಜುಲೈ 31 ರ ವರೆಗೆ ಇದು ಜಾರಿಯಲ್ಲಿರಲಿದೆ. ರಷ್ಯಾದ ಈ ನಿರ್ಧಾರ ಭಾರತದ (India) ಮೇಲೆ ಎಂತಹ ಪರಿಣಾಮ ಬೀರಲಿದೆ ಎಂಬ ಚರ್ಚೆ ಈಗ ಶುರುವಾಗಿದೆ.

ಉಕ್ರೇನ್ ಯುದ್ಧದ ನಂತರ ಭಾರತಕ್ಕೆ ರಿಯಾಯಿತಿ ದರದಲ್ಲಿ ತೈಲ ನೀಡುತ್ತಿದ್ದ ರಷ್ಯಾದ ಈ ನಡೆ ಕುತೂಹಲ ಮೂಡಿಸಿದೆ. ಅಷ್ಟೇ ಅಲ್ಲದೆ, ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧ ಭೀತಿಯಿಂದ ಭಾರತಕ್ಕೆ ಕಚ್ಚಾ ತೈಲ ಸಾಗಾಟಕ್ಕೆ ಅಡ್ಡಿಯಾದಾಗಲೂ ರಷ್ಯಾ ಆಪತ್ಬಾಂಧವನಂತೆ ಭಾರತಕ್ಕೆ ತೈಲ ಪೂರೈಕೆ ಮಾಡಿದೆ.

ಕಚ್ಚಾ ತೈಲ ರಫ್ತು ಸ್ಥಗಿತದ ರಷ್ಯಾ ನಿರ್ಧಾರಕ್ಕೆ ಕಾರಣವೇನು?

ಅಂತರರಾಷ್ಟ್ರೀಯ ಒಪ್ಪಂದದ ಭಾಗವಾಗಿ ಮತ್ತು ದೇಶದ ಆಂತರಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಯನ್ನು ನಿಯಂತ್ರಣದಲ್ಲಿಡಲು ರಷ್ಯಾ ಉತ್ಪಾದನೆಯನ್ನು ಕಡಿತಗೊಳಿಸುತ್ತಿದೆ. ಜಾಗತಿಕವಾಗಿ ಕಚ್ಚಾ ತೈಲದ ಬೆಲೆಯನ್ನು ಸ್ಥಿರವಾಗಿರಿಸಲು ರಷ್ಯಾ ಈ ತಂತ್ರ ಅನುಸರಿಸುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಭಾರತದ ಮೇಲೆ ಆಗುವ ಪರಿಣಾಮಗಳೇನು?

  • ರಿಯಾಯಿತಿ ತೈಲಕ್ಕೆ ಬ್ರೇಕ್: ಉಕ್ರೇನ್ ಯುದ್ಧದ ಬಳಿಕ ರಷ್ಯಾ ಭಾರತದ ಅತಿದೊಡ್ಡ ತೈಲ ಪೂರೈಕೆದಾರ ರಾಷ್ಟ್ರವಾಗಿ ಹೊರಹೊಮ್ಮಿತ್ತು. ಕಡಿಮೆ ದರದಲ್ಲಿ ಸಿಗುತ್ತಿದ್ದ ತೈಲ ಪೂರೈಕೆ ಈಗ ಇಲ್ಲವಾಗುವ ಆತಂಕ ಎದುರಾಗಿದೆ.
  • ಪೆಟ್ರೋಲ್, ಡೀಸೆಲ್ ದರ ಏರಿಕೆ ಸಾಧ್ಯತೆ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಪೂರೈಕೆ ಕಡಿಮೆಯಾದರೆ ಬೆಲೆ ಏರಿಕೆಯಾಗುವುದು ಸಹಜ. ಇದು ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ನೇರ ಪರಿಣಾಮ ಬೀರಬಹುದು.
  • ಬದಲಿ ಮಾರ್ಗಗಳ ಹುಡುಕಾಟ: ರಷ್ಯಾದಿಂದ ಪೂರೈಕೆ ಕಡಿಮೆಯಾದರೆ ಭಾರತ ಮತ್ತೆ ಇರಾಕ್, ಸೌದಿ ಅರೇಬಿಯಾದಂತಹ ಪಶ್ಚಿಮ ಏಷ್ಯಾ ರಾಷ್ಟ್ರಗಳ ಮೇಲೆ ಅವಲಂಬಿತವಾಗಬೇಕಾಗುತ್ತದೆ. ಇದು ಆಮದು ವೆಚ್ಚವನ್ನು ಹೆಚ್ಚಿಸಬಹುದು.

ಇದನ್ನೂ ಓದಿ: ಮಧ್ಯಪ್ರಾಚ್ಯ ಸಂಘರ್ಷ ಕೋವಿಡ್​ನಂತಹ ಜಾಗತಿಕ ಪರಿಣಾಮ ಬೀರಬಹುದು: ಪುಟಿನ್

ಆದರೆ, ಭಾರತವು ಈಗಾಗಲೇ ರಷ್ಯಾದೊಂದಿಗೆ ದೀರ್ಘಾವಧಿಯ ಒಪ್ಪಂದಗಳನ್ನು ಮಾಡಿಕೊಂಡಿರುವುದರಿಂದ ತಕ್ಷಣಕ್ಕೆ ಯಾವುದೇ ದೊಡ್ಡ ಬಿಕ್ಕಟ್ಟು ಎದುರಾಗಲಾರದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ
ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಗಾಜಿಯಾಬಾದ್‌ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಗಾಜಿಯಾಬಾದ್‌ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಪ್ರಧಾನಿ ಮೋದಿ ಮತ್ತು ನನಗೆ ಇಬ್ರಿಗೂ ‘ಹೆಂಡತಿ’ ಕಾಟ ಇಲ್ಲ : ರಾಹುಲ್ ಗಾಂಧಿ
ಪ್ರಧಾನಿ ಮೋದಿ ಮತ್ತು ನನಗೆ ಇಬ್ರಿಗೂ ‘ಹೆಂಡತಿ’ ಕಾಟ ಇಲ್ಲ : ರಾಹುಲ್ ಗಾಂಧಿ