AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War: ಉಕ್ರೇನ್​ನ ಅಪಾರ್ಟ್​ಮೆಂಟ್ ಮೇಲೆ ರಷ್ಯಾದ ಕ್ಷಿಪಣಿ ದಾಳಿ; 30 ಮಂದಿ ಸಾವು, 12 ಜನರ ಸ್ಥಿತಿ ಗಂಭೀರ

ಕ್ಷಿಪಣಿ ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ನಾವು ಪ್ರತಿಯೊಬ್ಬ ವ್ಯಕ್ತಿಗಾಗಿ ಹೋರಾಡುತ್ತಿದ್ದೇವೆ. ನಮ್ಮ ಜನರ ಜೀವ ಉಳಿಸಲು ಕೊನೆಯವರೆಗೂ ರಕ್ಷಣಾ ಕಾರ್ಯಾಚರಣೆ ನಡೆಸಲಾಗುವುದು ಎಂದಿದ್ದಾರೆ.

Russia-Ukraine War: ಉಕ್ರೇನ್​ನ ಅಪಾರ್ಟ್​ಮೆಂಟ್ ಮೇಲೆ ರಷ್ಯಾದ ಕ್ಷಿಪಣಿ ದಾಳಿ; 30 ಮಂದಿ ಸಾವು, 12 ಜನರ ಸ್ಥಿತಿ ಗಂಭೀರ
ಉಕ್ರೇನ್​ನ ಅಪಾರ್ಟ್​ಮೆಂಟ್ ಮೇಲೆ ರಷ್ಯಾದ ಕ್ಷಿಪಣಿ ದಾಳಿImage Credit source: ANI
TV9 Web
| Edited By: |

Updated on: Jan 16, 2023 | 12:14 PM

Share

ಕೈವ್: ರಷ್ಯಾ ಮತ್ತು ಉಕ್ರೇನ್ ನಡುವಿನ (Russia- Ukraine War) ಯುದ್ಧ ಮುಗಿಯುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಉಕ್ರೇನ್​ನ ದ್ನಿಪ್ರೋ ನಗರದ 9 ಅಂತಸ್ತಿನ ಅಪಾರ್ಟ್​ಮೆಂಟ್ ಕಟ್ಟಡದ ಮೇಲೆ ರಷ್ಯಾ ಕ್ಷಿಪಣಿ ದಾಳಿ (Missile Strike) ನಡೆಸಿದ್ದು, ಈ ದಾಳಿಯಲ್ಲಿ ಸುಮಾರು 30 ಜನರು ಸಾವನ್ನಪ್ಪಿದ್ದಾರೆ, 30ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ 12 ಮಂದಿಯ ಸ್ಥಿತಿ ಗಂಭೀರವಾಗಿದೆ.

ಕ್ಷಿಪಣಿ ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ನಾವು ಪ್ರತಿಯೊಬ್ಬ ವ್ಯಕ್ತಿಗಾಗಿ ಹೋರಾಡುತ್ತಿದ್ದೇವೆ. ನಮ್ಮ ಜನರ ಜೀವ ಉಳಿಸಲು ಕೊನೆಯವರೆಗೂ ರಕ್ಷಣಾ ಕಾರ್ಯಾಚರಣೆ ನಡೆಸಲಾಗುವುದು ಎಂದಿದ್ದಾರೆ.

ಅಪಾರ್ಟ್​ಮೆಂಟ್​​ನೊಳಗೆ ಸಿಲುಕಿರುವ ಕೆಲವು ಮಂದಿ ಸಹಾಯಕ್ಕಾಗಿ ಜೋರಾಗಿ ಕೂಗುತ್ತಿರುವ ಧ್ವನಿ ಕೇಳಿಸಿತು. ಅವರು ಎಲ್ಲಿದ್ದಾರೋ ಅಲ್ಲಿಗೆ ನಮಗೆ ತಲುಪಲು ಸಾಧ್ಯವಾಗಲಿಲ್ಲ. ಆದರೂ ಇನ್ನೂ ಪ್ರಯತ್ನ ನಡೆಸಲಾಗುತ್ತಿದೆ ಎಂದು ರಕ್ಷಣಾ ಸಿಬ್ಬಂದಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Russia Ukraine War: ಸೈನಿಕರ ಸಾವಿಗೆ ಪ್ರತೀಕಾರ, 600 ಉಕ್ರೇನ್ ಸೈನಿಕರನ್ನು ಕೊಂದ ರಷ್ಯಾ

ಭಾರೀ ಘರ್ಷಣೆಗಳ ನಂತರ ತನ್ನ ಪಡೆಗಳು ಸೊಲೆಡಾರ್ ಅನ್ನು ವಶಪಡಿಸಿಕೊಂಡಿದೆ ಎಂದು ರಷ್ಯಾ ಹೇಳಿಕೊಂಡಿದ್ದರೂ ಸಹ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ “ಸೋಲೆಡಾರ್ ಪಟ್ಟಣಕ್ಕಾಗಿ ನಮ್ಮ ಹೋರಾಟ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಅಪಾರ್ಟ್​ಮೆಂಟ್ ಮೇಲೆ ನಡೆದ ರಷ್ಯಾದ ಕ್ಷಿಪಣಿ ದಾಳಿಯಲ್ಲಿ 6 ಮಕ್ಕಳು ಸೇರಿದಂತೆ ಹತ್ತಾರು ಜನರನ್ನು ಅವಶೇಷಗಳಿಂದ ರಕ್ಷಿಸಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು