ಕೈವ್: ರಷ್ಯಾ ಮತ್ತು ಉಕ್ರೇನ್ ನಡುವಿನ (Russia- Ukraine War) ಯುದ್ಧ ಮುಗಿಯುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಉಕ್ರೇನ್ನ ದ್ನಿಪ್ರೋ ನಗರದ 9 ಅಂತಸ್ತಿನ ಅಪಾರ್ಟ್ಮೆಂಟ್ ಕಟ್ಟಡದ ಮೇಲೆ ರಷ್ಯಾ ಕ್ಷಿಪಣಿ ದಾಳಿ (Missile Strike) ನಡೆಸಿದ್ದು, ಈ ದಾಳಿಯಲ್ಲಿ ಸುಮಾರು 30 ಜನರು ಸಾವನ್ನಪ್ಪಿದ್ದಾರೆ, 30ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ 12 ಮಂದಿಯ ಸ್ಥಿತಿ ಗಂಭೀರವಾಗಿದೆ.
ಕ್ಷಿಪಣಿ ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ನಾವು ಪ್ರತಿಯೊಬ್ಬ ವ್ಯಕ್ತಿಗಾಗಿ ಹೋರಾಡುತ್ತಿದ್ದೇವೆ. ನಮ್ಮ ಜನರ ಜೀವ ಉಳಿಸಲು ಕೊನೆಯವರೆಗೂ ರಕ್ಷಣಾ ಕಾರ್ಯಾಚರಣೆ ನಡೆಸಲಾಗುವುದು ಎಂದಿದ್ದಾರೆ.
Kids in Ukraine today.#Dnipro pic.twitter.com/b9b4lNVQjA
— Defense of Ukraine (@DefenceU) January 14, 2023
ಅಪಾರ್ಟ್ಮೆಂಟ್ನೊಳಗೆ ಸಿಲುಕಿರುವ ಕೆಲವು ಮಂದಿ ಸಹಾಯಕ್ಕಾಗಿ ಜೋರಾಗಿ ಕೂಗುತ್ತಿರುವ ಧ್ವನಿ ಕೇಳಿಸಿತು. ಅವರು ಎಲ್ಲಿದ್ದಾರೋ ಅಲ್ಲಿಗೆ ನಮಗೆ ತಲುಪಲು ಸಾಧ್ಯವಾಗಲಿಲ್ಲ. ಆದರೂ ಇನ್ನೂ ಪ್ರಯತ್ನ ನಡೆಸಲಾಗುತ್ತಿದೆ ಎಂದು ರಕ್ಷಣಾ ಸಿಬ್ಬಂದಿ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: Russia Ukraine War: ಸೈನಿಕರ ಸಾವಿಗೆ ಪ್ರತೀಕಾರ, 600 ಉಕ್ರೇನ್ ಸೈನಿಕರನ್ನು ಕೊಂದ ರಷ್ಯಾ
ಭಾರೀ ಘರ್ಷಣೆಗಳ ನಂತರ ತನ್ನ ಪಡೆಗಳು ಸೊಲೆಡಾರ್ ಅನ್ನು ವಶಪಡಿಸಿಕೊಂಡಿದೆ ಎಂದು ರಷ್ಯಾ ಹೇಳಿಕೊಂಡಿದ್ದರೂ ಸಹ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ “ಸೋಲೆಡಾರ್ ಪಟ್ಟಣಕ್ಕಾಗಿ ನಮ್ಮ ಹೋರಾಟ ನಡೆಯುತ್ತಿದೆ” ಎಂದು ಹೇಳಿದ್ದಾರೆ.
ಅಪಾರ್ಟ್ಮೆಂಟ್ ಮೇಲೆ ನಡೆದ ರಷ್ಯಾದ ಕ್ಷಿಪಣಿ ದಾಳಿಯಲ್ಲಿ 6 ಮಕ್ಕಳು ಸೇರಿದಂತೆ ಹತ್ತಾರು ಜನರನ್ನು ಅವಶೇಷಗಳಿಂದ ರಕ್ಷಿಸಲಾಗಿದೆ.