AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಮಾನವೀಯ ಕಾರಿಡಾರ್​ಗಳನ್ನು ತೆರೆಯಲು ಕದನ ವಿರಾಮ ಘೋಷಿಸಿದ ರಷ್ಯಾ

Russia Ukraine war | Russia declares Ceasefire: ಮಾನವೀಯ ಕಾರಿಡಾರ್​ಗಳನ್ನು ತೆರೆಯುವ ಉದ್ದೇಶದಿಂದ ರಷ್ಯಾ ಕದನ ವಿರಾಮ ಘೋಷಿಸಿದೆ ಎಂದು ರಷ್ಯಾದ ಮಾಧ್ಯಮಗಳು ವರದಿ ಮಾಡಿವೆ.

Breaking: ಮಾನವೀಯ ಕಾರಿಡಾರ್​ಗಳನ್ನು ತೆರೆಯಲು ಕದನ ವಿರಾಮ ಘೋಷಿಸಿದ ರಷ್ಯಾ
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್
TV9 Web
| Edited By: |

Updated on:Mar 05, 2022 | 12:29 PM

Share

ನಾಗರಿಕರಿಗೆ ಮಾನವೀಯ ಕಾರಿಡಾರ್​ಗಳನ್ನು ತೆರೆಯುವ ಉದ್ದೇಶದಿಂದ ರಷ್ಯಾವು ಕದನ ವಿರಾಮವನ್ನು (Russia declares ceasefire) ಘೋಷಿಸಿವೆ. ಈ ಕುರಿತು ರಷ್ಯಾದ ಮಾಧ್ಯಮ ಔಟ್ಲೆಟ್ ಸ್ಪುಟ್ನಿಕ್ ವರದಿಯನ್ನು ಎಎನ್​ಐ ಸುದ್ದಿಸಂಸ್ಥೆ ಉಲ್ಲೇಖಿಸಿದೆ. ಗ್ರೀನ್​ವಿಚ್ ಮೀನ್ ಟೈಮ್ ಸಮಯ 6ರಿಂದ (ಭಾರತೀಯ ಕಾಲಮಾನ ಬೆಳಗ್ಗೆ 11.30) ಕದನ ವಿರಾಮ ಘೋಷಿಸುವುದಾಗಿ ರಷ್ಯಾ ತಿಳಿಸಿದೆ. ವರದಿಗಳ ಪ್ರಕಾರ ಉಕ್ರೇನ್‌ನ ಮರಿಯುಪೋಲ್, ವೊಲ್ನೋವಾಖಾ ನಿವಾಸಿಗಳಿಗೆ ಮಾನವೀಯ ಕಾರಿಡಾರ್‌ಗಳನ್ನು ತೆರೆಯಲಾಗುವುದು. ಉಕ್ರೇನ್ ಮೇಲೆ ದಾಳಿ ಮಾಡಿ, ಪ್ರಮುಖ ನಗರಗಳನ್ನು ವಶಪಡಿಸಿಕೊಂಡು ರಾಜಧಾನಿ ಕೀವ್ ನಗರಕ್ಕೆ ಮುತ್ತಿಗೆ ಹಾಕಿರುವ ರಷ್ಯಾ ಸೇನೆ ಇಂದು ಮುಂಜಾನೆ 6 ಗಂಟೆಯಿಂದ ತಾತ್ಕಾಲಿಕ ಕದನ ವಿರಾಮ ಘೋಷಿಸಿದೆ.

ಉಕ್ರೇನ್ ದೇಶವನ್ನು ಸಂಪೂರ್ಣವಾಗಿ ಹಿಡಿತಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ದಾಳಿ ಮಾಡಿದ್ದ ರಷ್ಯಾ ಇದ್ದಕ್ಕಿದ್ದಂತೆ ಕದನ ವಿರಾಮ ಏಕೆ ಘೋಷಿಸಿತು ಎಂಬ ಬಗ್ಗೆ ಹಲವು ರೀತಿಯ ಚರ್ಚೆಗಳು ಆರಂಭವಾಗಿವೆ. ಭಾರತೀಯ ಕಾಲಮಾನ ಬೆಳಿಗ್ಗೆ 11.30ರಿಂದ ತಾತ್ಕಾಲಿಕ ಕದನ ವಿರಾಮ ಜಾರಿಗೆ ಬಂದಿದೆ. ಯುದ್ಧಪೀಡಿತ ಪ್ರದೇಶದಲ್ಲಿ ಸಿಲುಕಿರುವ ವಿದೇಶಿಯರ ರಕ್ಷಣೆಗಾಗಿ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ರಷ್ಯಾ ಮಾಧ್ಯಮಗಳು ವರದಿ ಮಾಡಿವೆ.

ಕೀವ್ ಮತ್ತು ಖಾರ್ಕಿವ್ ಸೇರಿದಂತೆ ಉಕ್ರೇನ್​ನ ಹಲವು ಪ್ರಮುಖ ನಗರಗಳಲ್ಲಿ ಸಿಲುಕಿರುವ ಭಾರತ ಸೇರಿದಂತೆ ವಿವಿಧ ದೇಶಗಳ ವಿದ್ಯಾರ್ಥಿಗಳು ತಮ್ಮ ದೇಶಗಳಿಗೆ ಹಿಂದಿರುಗಲು ಇದರಿಂದ ತುಸು ಅವಕಾಶ ಸಿಕ್ಕಿದೆ. ಆದರೆ ಭಾರತದ ವಿಮಾನಗಳಿಗೆ ಉಕ್ರೇನ್ ವಾಯುಗಡಿ ಪ್ರವೇಶಿಸಲು ಅವಕಾಶ ಸಿಗುತ್ತದೆಯೇ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಈ ಕುರಿತು ಎಎನ್​ಐ ಮಾಹಿತಿ ಇಲ್ಲಿದೆ:

ಉಕ್ರೇನ್​ನ ವಿವಿಧ ಪ್ರದೇಶಗಳಲ್ಲಿ ಇನ್ನೂ 2000 ಭಾರತೀಯ ವಿದ್ಯಾರ್ಥಿಗಳು ಸಿಲುಕಿದ್ದಾರೆ ಎಂದು ಸರ್ಕಾರದ ಮೂಲಗಳು ಹೇಳಿವೆ. ಇದೀಗ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರವೂ ರಕ್ಷಣಾ ಕಾರ್ಯಾಚರಣೆಗಳನ್ನು ಚುರುಕುಗೊಳಿಸಲು ನಿರ್ಧರಿಸಿದ್ದು, ಅಕ್ಕಪಕ್ಕದ ದೇಶಗಳಲ್ಲಿರುವ ರಾಯಭಾರ ಕಚೇರಿ ಸಿಬ್ಬಂದಿಯನ್ನು ಉಕ್ರೇನ್​ನಲ್ಲಿರುವ ಭಾರತೀಯರ ಸ್ಥಳಾಂತರ ನಿಯೋಜಿಸಲು ಮುಂದಾಗಿದೆ. ರಷ್ಯಾ ಗಡಿಯ ಮೂಲಕ ರಷ್ಯಾದ ದೇಶದ ಸಮೀಪದ ವಿಮಾನ ನಿಲ್ದಾಣಕ್ಕೆ ಭಾರತೀಯರನ್ನು ಅಲ್ಲಿಂದ ಸ್ವದೇಶಕ್ಕೆ ಕರೆತರುವ ಬಗ್ಗೆಯೂ ಪ್ರಯತ್ನಗಳು ತೀವ್ರಗೊಂಡಿವೆ.

ಭಾರತೀಯರಿಗೆ ರಷ್ಯಾ ದೇಶಕ್ಕೆ ಪ್ರವೇಶ ಕಲ್ಪಿಸಲು ರಷ್ಯಾ ಆಡಳಿತ ಸಮ್ಮತಿಸಿದ್ದು, ಸಂಘರ್ಷ ತೀವ್ರವಾಗಿರುವ ಪೂರ್ವ ಗಡಿಗೆ ತನ್ನ ಬಸ್​ಗಳನ್ನು ಕಳಿಸಿಕೊಟ್ಟಿದೆ. ರಷ್ಯಾದ ವಿಮಾನಗಳನ್ನೂ ಇದೀಗ ತೆರವು ಕಾರ್ಯಾಚರಣೆಗೆ ಬಳಸಿಕೊಳ್ಳಲು ಚಿಂತನೆ ನಡೆದಿದೆ. ಈ ಕಾರ್ಯಾಚರಣೆ ಯಶಸ್ವಿಯಾದರೆ ಇನ್ನೂ ಉಕ್ರೇನ್​ನಲ್ಲಿರುವ ಭಾರತದ ಮಕ್ಕಳು ಶೀಘ್ರ ಸ್ವದೇಶಕ್ಕೆ ಮರಳಲಿದ್ದಾರೆ. ರಷ್ಯಾ ಸಹಕರಿಸಲು ಸಿದ್ಧವಿರುವ ವಿಚಾರದ ಬಗ್ಗೆ ವಿಶ್ವಸಂಸ್ಥೆಯಲ್ಲಿರುವ ರಷ್ಯಾ ರಾಯಭಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:

Russia Ukraine War Live: ಉ್ರಕೇನ್​ನಲ್ಲಿ ಕದನ ವಿರಾಮ ಘೋಷಣೆ ಮಾಡಿದ ರಷ್ಯಾ

US vs Russia: ಅಮೆರಿಕ ಸೆನೆಟ್​ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡ್ಮಿರ್ ಝೆಲೆನ್​ಸ್ಕಿ ಭಾಷಣ

Published On - 12:17 pm, Sat, 5 March 22

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ