ನಾಗರಿಕರಿಗೆ ಮಾನವೀಯ ಕಾರಿಡಾರ್‌ಗಳನ್ನು ತೆರೆಯುವ ಉದ್ದೇಶದಿಂದ ರಷ್ಯಾವು ಕದನ ವಿರಾಮವನ್ನು (Russia declares ceasefire) ಘೋಷಿಸಿವೆ. ಈ ಕುರಿತು ರಷ್ಯಾದ ಮಾಧ್ಯಮ ಔಟ್ಲೆಟ್ ಸ್ಪುಟ್ನಿಕ್ ವರದಿಯನ್ನು ಎಎನ್ಐ ಸುದ್ದಿಸಂಸ್ಥೆ ಉಲ್ಲೇಖಿಸಿದೆ. ಗ್ರೀನ್ವಿಚ್ ಮೀನ್ ಟೈಮ್ ಸಮಯ 6ರಿಂದ (ಭಾರತೀಯ ಕಾಲಮಾನ ಬೆಳಗ್ಗೆ 11.30) ಕದನ ವಿರಾಮ ಘೋಷಿಸುವುದಾಗಿ ರಷ್ಯಾ ತಿಳಿಸಿದೆ. ವರದಿಗಳ ಪ್ರಕಾರ ಉಕ್ರೇನ್‌ನ ಮರಿಯುಪೋಲ್, ವೊಲ್ನೋವಾಖಾ ನಿವಾಸಿಗಳಿಗೆ ಮಾನವೀಯ ಕಾರಿಡಾರ್‌ಗಳನ್ನು ತೆರೆಯಲಾಗುವುದು. ಉಕ್ರೇನ್ ಮೇಲೆ ದಾಳಿ ಮಾಡಿ, ಪ್ರಮುಖ ನಗರಗಳನ್ನು ವಶಪಡಿಸಿಕೊಂಡು ರಾಜಧಾನಿ ಕೀವ್ ನಗರಕ್ಕೆ ಮುತ್ತಿಗೆ ಹಾಕಿರುವ ರಷ್ಯಾ ಸೇನೆ ಇಂದು ಮುಂಜಾನೆ 6 ಗಂಟೆಯಿಂದ ತಾತ್ಕಾಲಿಕ ಕದನ ವಿರಾಮ ಘೋಷಿಸಿದೆ.
ಉಕ್ರೇನ್ ದೇಶವನ್ನು ಸಂಪೂರ್ಣವಾಗಿ ಹಿಡಿತಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ದಾಳಿ ಮಾಡಿದ್ದ ರಷ್ಯಾ ಇದ್ದಕ್ಕಿದ್ದಂತೆ ಕದನ ವಿರಾಮ ಏಕೆ ಘೋಷಿಸಿತು ಎಂಬ ಬಗ್ಗೆ ಹಲವು ರೀತಿಯ ಚರ್ಚೆಗಳು ಆರಂಭವಾಗಿವೆ. ಭಾರತೀಯ ಕಾಲಮಾನ ಬೆಳಿಗ್ಗೆ 11.30ರಿಂದ ತಾತ್ಕಾಲಿಕ ಕದನ ವಿರಾಮ ಜಾರಿಗೆ ಬಂದಿದೆ. ಯುದ್ಧಪೀಡಿತ ಪ್ರದೇಶದಲ್ಲಿ ಸಿಲುಕಿರುವ ವಿದೇಶಿಯರ ರಕ್ಷಣೆಗಾಗಿ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ರಷ್ಯಾ ಮಾಧ್ಯಮಗಳು ವರದಿ ಮಾಡಿವೆ.
ಕೀವ್ ಮತ್ತು ಖಾರ್ಕಿವ್ ಸೇರಿದಂತೆ ಉಕ್ರೇನ್‌ನ ಹಲವು ಪ್ರಮುಖ ನಗರಗಳಲ್ಲಿ ಸಿಲುಕಿರುವ ಭಾರತ ಸೇರಿದಂತೆ ವಿವಿಧ ದೇಶಗಳ ವಿದ್ಯಾರ್ಥಿಗಳು ತಮ್ಮ ದೇಶಗಳಿಗೆ ಹಿಂದಿರುಗಲು ಇದರಿಂದ ತುಸು ಅವಕಾಶ ಸಿಕ್ಕಿದೆ. ಆದರೆ ಭಾರತದ ವಿಮಾನಗಳಿಗೆ ಉಕ್ರೇನ್ ವಾಯುಗಡಿ ಪ್ರವೇಶಿಸಲು ಅವಕಾಶ ಸಿಗುತ್ತದೆಯೇ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಈ ಕುರಿತು ಎಎನ್ಐ ಮಾಹಿತಿ ಇಲ್ಲಿದೆ:
Russia declares ceasefire in Ukraine from 06:00 GMT (Greenwich Mean Time Zone) to open humanitarian corridors for civilians, reports Russia’s media outlet Sputnik
— ANI (@ANI) March 5, 2022
ಉಕ್ರೇನ್‌ನ ವಿವಿಧ ಪ್ರದೇಶಗಳಲ್ಲಿ ಇನ್ನೂ 2000 ಭಾರತೀಯ ವಿದ್ಯಾರ್ಥಿಗಳು ಸಿಲುಕಿದ್ದಾರೆ ಎಂದು ಸರ್ಕಾರದ ಮೂಲಗಳು ಹೇಳಿವೆ. ಇದೀಗ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರವೂ ರಕ್ಷಣಾ ಕಾರ್ಯಾಚರಣೆಗಳನ್ನು ಚುರುಕುಗೊಳಿಸಲು ನಿರ್ಧರಿಸಿದ್ದು, ಅಕ್ಕಪಕ್ಕದ ದೇಶಗಳಲ್ಲಿರುವ ರಾಯಭಾರ ಕಚೇರಿ ಸಿಬ್ಬಂದಿಯನ್ನು ಉಕ್ರೇನ್ನಲ್ಲಿರುವ ಭಾರತೀಯರ ಸ್ಥಳಾಂತರ ನಿಯೋಜಿಸಲು ಮುಂದಾಗಿದೆ. ರಷ್ಯಾ ಗಡಿಯ ಮೂಲಕ ರಷ್ಯಾದ ದೇಶದ ಸಮೀಪದ ವಿಮಾನ ನಿಲ್ದಾಣಕ್ಕೆ ಭಾರತೀಯರನ್ನು ಅಲ್ಲಿಂದ ಸ್ವದೇಶಕ್ಕೆ ಕರೆತರುವ ಬಗ್ಗೆಯೂ ಪ್ರಯತ್ನಗಳು ತೀವ್ರಗೊಂಡಿವೆ.
ಭಾರತೀಯರಿಗೆ ರಷ್ಯಾ ದೇಶಕ್ಕೆ ಪ್ರವೇಶ ಕಲ್ಪಿಸಲು ರಷ್ಯಾ ಆಡಳಿತ ಸಮ್ಮತಿಸಿದ್ದು, ಸಂಘರ್ಷ ತೀವ್ರವಾಗಿರುವ ಪೂರ್ವ ಗಡಿಗೆ ತನ್ನ ಬಸ್ಗಳನ್ನು ಕಳಿಸಿಕೊಟ್ಟಿದೆ. ರಷ್ಯಾದ ವಿಮಾನಗಳನ್ನೂ ಇದೀಗ ತೆರವು ಕಾರ್ಯಾಚರಣೆಗೆ ಬಳಸಿಕೊಳ್ಳಲು ಚಿಂತನೆ ನಡೆದಿದೆ. ಈ ಕಾರ್ಯಾಚರಣೆ ಯಶಸ್ವಿಯಾದರೆ ಇನ್ನೂ ಉಕ್ರೇನ್ನಲ್ಲಿರುವ ಭಾರತದ ಮಕ್ಕಳು ಶೀಘ್ರ ಸ್ವದೇಶಕ್ಕೆ ಮರಳಲಿದ್ದಾರೆ. ರಷ್ಯಾ ಸಹಕರಿಸಲು ಸಿದ್ಧವಿರುವ ವಿಚಾರದ ಬಗ್ಗೆ ವಿಶ್ವಸಂಸ್ಥೆಯಲ್ಲಿರುವ ರಷ್ಯಾ ರಾಯಭಾರಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:
Russia Ukraine War Live: ಉ್ರಕೇನ್ನಲ್ಲಿ ಕದನ ವಿರಾಮ ಘೋಷಣೆ ಮಾಡಿದ ರಷ್ಯಾ
US vs Russia: ಅಮೆರಿಕ ಸೆನೆಟ್ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡ್ಮಿರ್ ಝೆಲೆನ್ಸ್ಕಿ ಭಾಷಣ
Published On - 12:17 pm, Sat, 5 March 22