AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia- Ukraine War: ರಷ್ಯಾದ ಕ್ಷಿಪಣಿ ದಾಳಿಯನ್ನು ಎದುರಿಸಲು ನಾವು ಸಿದ್ಧರಿದ್ದೇವೆ; ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

"ರಷ್ಯಾದ ಭಯೋತ್ಪಾದಕರು ಹೊಸ ದಾಳಿಗಳನ್ನು ಯೋಜಿಸುತ್ತಿದ್ದಾರೆ ಎಂದು ನಮಗೆ ಮಾಹಿತಿ ಬಂದಿದೆ. ನಮ್ಮ ರಕ್ಷಣಾ ಪಡೆಗಳು ಸಜ್ಜಾಗುತ್ತಿವೆ. ಇಡೀ ದೇಶವೇ ಸಜ್ಜಾಗುತ್ತಿದೆ" ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

Russia- Ukraine War: ರಷ್ಯಾದ ಕ್ಷಿಪಣಿ ದಾಳಿಯನ್ನು ಎದುರಿಸಲು ನಾವು ಸಿದ್ಧರಿದ್ದೇವೆ; ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ
ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ
TV9 Web
| Edited By: |

Updated on:Nov 28, 2022 | 8:22 AM

Share

ಕೈವ್: ರಷ್ಯಾ ಖಂಡಿತವಾಗಿಯೂ ರಷ್ಯಾ (Russia) ದೇಶದ ಮೇಲೆ ಹೊಸ ಕ್ಷಿಪಣಿ ದಾಳಿಯನ್ನು(Air Strike)  ನಡೆಸಲಿದೆ. ಆದರೆ, ಅದನ್ನು ಎದುರಿಸಲು ನಾವು ಸಿದ್ಧರಾಗಿದ್ದೇವೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Ukrainian President Volodymyr Zelenskiy) ಹೇಳಿದ್ದಾರೆ. ರಷ್ಯಾ ಮತ್ತೆ ತನ್ನ ದಾಳಿಯನ್ನು ಮುಂದುವರೆಸುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ರಕ್ಷಣಾ ಪಡೆಗಳು ಮತ್ತು ಸಾರ್ವಜನಿಕರು ಸಿದ್ಧರಾಗಿರಬೇಕು ಎಂದು ಉಕ್ರೇನ್ ಅಧ್ಯಕ್ಷ ಎಚ್ಚರಿಸಿದ್ದಾರೆ.

“ರಷ್ಯಾದ ಭಯೋತ್ಪಾದಕರು ಹೊಸ ದಾಳಿಗಳನ್ನು ಯೋಜಿಸುತ್ತಿದ್ದಾರೆ ಎಂದು ನಮಗೆ ಮಾಹಿತಿ ಬಂದಿದೆ. ರಷ್ಯಾದವರ ಬಳಿ ಕ್ಷಿಪಣಿಗಳು ಇರುವವರೆಗೂ ಅವರು ಶಾಂತರಾಗುವುದಿಲ್ಲ. ನಮ್ಮ ರಕ್ಷಣಾ ಪಡೆಗಳು ಸಜ್ಜಾಗುತ್ತಿವೆ. ಇಡೀ ದೇಶವೇ ಸಜ್ಜಾಗುತ್ತಿದೆ” ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್ ಮೇಲೆ ಸಿಡಿತಲೆರಹಿತ ಪರಮಾಣು ಕ್ಷಿಪಣಿ ಪ್ರಯೋಗಿಸುತ್ತಿರುವ ರಷ್ಯಾ; ಕಾರಣ ಇಲ್ಲಿದೆ

ಕಳೆದ 2 ವಾರಗಳ ಹಿಂದೆ ರಷ್ಯಾದ ಪಡೆಗಳು ಉಕ್ರೇನ್‌ನ ಖೆರ್ಸನ್‌ ನಗರವನ್ನು ಬಿಟ್ಟು ಹಿಂದೆ ಸರಿದಿತ್ತು. ಇದರಿಂದ ಉಕ್ರೇನ್​ಗೆ ದೊಡ್ಡ ಜಯ ಉಂಟಾಗಿತ್ತು. ಇದಾದ ಬಳಿಕ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ‘ಖೆರ್ಸನ್ ಪ್ರಜೆಗಳು ನಮ್ಮವರು’ ಎಂದು ಹೇಳಿದ್ದರು. ಇದರಿಂದ ರಷ್ಯಾಕ್ಕೆ ದೊಡ್ಡ ಹಿನ್ನಡೆಯಾಗಿತ್ತು. ಆದರೆ, 3 ದಿನದ ಹಿಂದೆ ಮತ್ತೆ ಉಕ್ರೇನ್ ನಗರದ ಖೆರ್ಸನ್ ಮೇಲೆ ರಷ್ಯಾ ಶೆಲ್ ದಾಳಿ ನಡೆಸಿದ್ದು, 15 ಜನರು ಸಾವನ್ನಪ್ಪಿದ್ದರು.

ಉಕ್ರೇನ್ ದೇಶಾದ್ಯಂತ ಇತ್ತೀಚಿನ ವಾರಗಳಲ್ಲಿ ರಷ್ಯಾದ ವೈಮಾನಿಕ ದಾಳಿಗಳು ಉಕ್ರೇನ್‌ನ ಶಕ್ತಿಯ ಮೂಲಸೌಕರ್ಯಕ್ಕೆ ಭಾರೀ ಪೆಟ್ಟು ಕೊಟ್ಟಿತ್ತು. ಚಳಿಗಾಲದ ಸಮೀಪಿಸುತ್ತಿರುವುದರಿಂದ ಉಕ್ರೇನ್​ನಲ್ಲಿ ಆರೋಗ್ಯ ಬಿಕ್ಕಟ್ಟು ಕೂಡ ಎದುರಾಗಿದೆ. ಇತ್ತೀಚೆಗಷ್ಟೇ ಉಕ್ರೇನಿಯನ್ ಪಡೆಗಳು ಪುನಃ ವಶಪಡಿಸಿಕೊಂಡ ಪೂರ್ವದ ಪ್ರಮುಖ ನಗರವಾದ ಖೆರ್ಸನ್‌ನಲ್ಲಿ ರಷ್ಯಾದ ಅತ್ಯಂತ ಭೀಕರ ಬಾಂಬ್ ದಾಳಿ ಅಪ್ಪಳಿಸಿತ್ತು.

ಇದನ್ನೂ ಓದಿ: Russia-Ukraine War: ಉಕ್ರೇನ್​ನ ಖೆರ್ಸನ್ ಮೇಲೆ ರಷ್ಯಾದಿಂದ ಶೆಲ್ ದಾಳಿ; 15 ಜನರ ಸಾವು

ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಆರಂಭವಾಗಿ 278 ದಿನಗಳಾಗಿವೆ. ಸದ್ಯದಲ್ಲೇ ರಷ್ಯಾ ತನ್ನ ಗುರಿ ಸಾಧಿಸಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಯುದ್ಧದಲ್ಲಿ ಮಡಿದ ಯೋಧರ ಕುಟುಂಬದವರಿಗೆ ಕೆಲ ದಿನಗಳ ಹಿಂದಷ್ಟೇ ಭರವಸೆ ನೀಡಿದ್ದರು. ನಾವು ನಮ್ಮ ಗುರಿಯನ್ನು ಸಾಧಿಸಬೇಕು ಮತ್ತು ಅಂತಿಮವಾಗಿ ನಾವು ಅದನ್ನು ಸಾಧಿಸುತ್ತೇವೆ. ನಾನು ವೈಯಕ್ತಿಕವಾಗಿ ಮತ್ತು ದೇಶದ ಇಡೀ ನಾಯಕತ್ವ ವಹಿಸಿರುವ ನೆಲೆಯಲ್ಲಿ ನಿಮ್ಮ ನೋವಿನಲ್ಲಿ ಭಾಗಿಯಾಗಿದ್ದೇನೆ ಎಂದು ಪುಟಿನ್ ಹೇಳಿದ್ದರು. ಇದರ ಬೆನ್ನಲ್ಲೇ ರಷ್ಯಾ ಪಡೆಗಳು ಶಸ್ತ್ರಾಸ್ತ್ರ ಅಥವಾ ಸಿಡಿತಲೆರಹಿತ ಹಳೆಯ ಕ್ಷಿಪಣಿಗಳನ್ನು ಉಕ್ರೇನ್ ಮೇಲೆ ಪ್ರಯೋಗಿಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ರಷ್ಯಾ ದಾಳಿಗಳ ಪರಿಣಾಮವಾಗಿ ಉಕ್ರೇನ್​ನ ಸುಮಾರು 60 ಲಕ್ಷಕ್ಕೂ ಹೆಚ್ಚು ಕುಟುಂಬಗಳು ವಿದ್ಯುತ್ ಕಡಿತ ಎದುರಿಸುತ್ತಿವೆ. ರಷ್ಯಾದ ದಾಳಿಗಳಿಂದ ಉಕ್ರೇನ್​ನ ಇಂಧನ ಕ್ಷೇತ್ರದ ಮೇಲೆ ಭಾರಿ ಹೊಡೆತವಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:22 am, Mon, 28 November 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ