Russia: ವಾಪಸ್ ಹೊರಟ ವ್ಯಾಗ್ನರ್ ಗ್ರೂಪ್, ಬಂಡಾಯ ಶಮನವಾಯಿತೇ?

ಖಾಸಗಿ ಸೇನೆ ವ್ಯಾಗ್ನರ್ ಗ್ರೂಪ್ ಬಂಡಾಯದ ಘೋಷಣೆಯ ಬಳಿಕ ರಷ್ಯಾ(Russia)ದಲ್ಲಿ ತೀವ್ರ ಕೋಲಾಹಲ ಉಂಟಾಗಿತ್ತು. ವ್ಯಾಗ್ನರ್ ಗ್ರೂಪ್ ಬಂಡಾಯವೆದ್ದು 12 ಗಂಟೆಗಳ ಒಳಗಾಗಿ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ.

Russia: ವಾಪಸ್ ಹೊರಟ ವ್ಯಾಗ್ನರ್ ಗ್ರೂಪ್, ಬಂಡಾಯ ಶಮನವಾಯಿತೇ?
ವ್ಯಾಗ್ನರ್ ಗ್ರೂಪ್Image Credit source: Hindustan Times
Follow us
|

Updated on: Jun 25, 2023 | 3:55 PM

ಖಾಸಗಿ ಸೇನೆ ವ್ಯಾಗ್ನರ್ ಗ್ರೂಪ್ ಬಂಡಾಯದ ಘೋಷಣೆಯ ಬಳಿಕ ರಷ್ಯಾ(Russia)ದಲ್ಲಿ ತೀವ್ರ ಕೋಲಾಹಲ ಉಂಟಾಗಿತ್ತು. ವ್ಯಾಗ್ನರ್ ಗ್ರೂಪ್ ಬಂಡಾಯವೆದ್ದು 12 ಗಂಟೆಗಳ ಒಳಗಾಗಿ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ. ರಷ್ಯಾದ ಅಧ್ಯಕ್ಷ ಪುಟಿನ್ ಅವರ ಆಪ್ತರಾಗಿದ್ದ ಯೆಗ್ವೆನಿ ಪ್ರಿಗೋಷಿನ್, ಪುಟಿನ್ ಬೆಂಬಲದಿಂದಲೇ 2014ರಲ್ಲಿ ವ್ಯಾಗ್ನರ್ ಎಂಬ ಮಿಲಿಟರಿ ಪಡೆ ಕಟ್ಟಿದ್ದರು. ಸೇಂಟ್ ಪೀಟರ್ಸ್​ಬರ್ಗ್​ ಮೇಯರ್ ಆಗಿಯೂ ಕೆಲಸ ನಿರ್ವಹಿಸಿದ್ದರು.

ಉಕ್ರೇನ್ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ವ್ಯಾಗ್ನರ್ ಗುಂಪು ಮಹತ್ವದ ಪಾತ್ರವಹಿಸಿತ್ತು, ಹಾಗೆಯೇ ಬಖ್ಮಟ್ ನಗರವನ್ನು ವಶಪಡಿಸಿಕೊಳ್ಳುವ ಸಲುವಾಗಿ ನಡೆದ ಯುದ್ಧದಲ್ಲಿ ರಷ್ಯಾ ಪಡೆಗಳು ಯಶ್ವಿಯಾಗುವಲ್ಲಿ ವ್ಯಾಗ್ನರ್ ಪಾತ್ರ ಹೆಚ್ಚಿತ್ತು.

ಮತ್ತಷ್ಟು ಓದಿ: Russia: ಉಕ್ರೇನ್ ವಿರುದ್ಧ ಸಮರ ಸಾರಿರುವ ರಷ್ಯಾಕ್ಕೀಗ ದಂಗೆಯ ಬಿಸಿ; ಸೇನೆ ವಿರುದ್ಧವೇ ಶುರುವಾಯ್ತು ಬಂಡಾಯ

ಸರ್ಕಾರ ಹಾಗೂ ಸೇನೆಯ ವಿರುದ್ಧ ಬಂಡಾಯವೆದ್ದಿರುವ ಪ್ರಿಗೋಷಿಸ್ ವಿರುದ್ಧ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಸಮಿತಿ ಕಿಡಿಕಾರಿತ್ತು, ಸಶಸ್ತ್ರ ದಂಗೆ ನಡೆಸುವವರಿಗೆ 20 ವರ್ಷಗಳಷ್ಟು ಜೈಲು ಶಿಕ್ಷೆ ವಿಧಿಸಬಹುದು ಎಂದು ಎಚ್ಚರಿಸಿತ್ತು.

ಉಕ್ರೇನ್ ವಿರುದ್ಧ ಹೋರಾಡುತ್ತಿರುವ ಯೋಧರಿಗೆ ರಷ್ಯಾ ಸೇನೆಯ ಅಧಿಕಾರಿಗಳು ಅಗತ್ಯವಿರುವ ಶಸ್ತ್ರಾಸ್ತ್ರಗಳನ್ನು ಒದಿಸುತ್ತಿಲ್ಲ ಎಂದು ಆರೋಪಿಸಲಾಗಿತ್ತು ಇದರ ಬೆನ್ನಲ್ಲೇ ಬಂಡಾಯವೆದ್ದಿತ್ತು. ರಷ್ಯಾ ಸೇನೆಯ ಉನ್ನತ ಅಧಿಕಾರಿಗಳು ಹಾಗೂ ರಕ್ಷಣಾ ಸಚಿವಾಲಯದ ಜತೆಗಿನ ಮುಸುಕಿನ ಗುದ್ದಾಟ ಈಗ ದಂಗೆ ರೂಪ ತಳೆದಿದೆ ಎಂದುಋಉ ಹೇಳಲಾಗಿದೆ.

ರಕ್ಷಣಾ ಸಚಿವಾಲಯವು ವ್ಯಾಗ್ನರ್ ಗುಂಪಿನ ಮುಖ್ಯಸ್ಥರ ಮೇಲೆ ಸಶಸ್ತ್ರ ದಂಗೆಯ ಆರೋಪವನ್ನು ಹೊರಿಸಿದೆ. ಅಷ್ಟೇ ಅಲ್ಲದೆ, ಪ್ರಿಗೋಜಿನ್ ಆದೇಶಗಳನ್ನು ಪಾಲಿಸದಂತೆ ವ್ಯಾಗ್ನರ್ ಗುಂಪಿನ ಪಡೆಗಳಿಗೆ ಮನವಿ ಮಾಡಿದೆ. ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೂ ಈ ಕುರಿತು ಮಾಹಿತಿ ನೀಡಲಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ