ಉಕ್ರೇನ್​ನ ಶಾಲೆ ಮೇಲೆ ರಷ್ಯಾದಿಂದ ಬಾಂಬ್ ದಾಳಿ; 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಸುಮಾರು 90 ಜನರು ಆಶ್ರಯ ಪಡೆದಿದ್ದ ಶಾಲೆಯ ಮೇಲೆ ರಷ್ಯಾ ಶನಿವಾರ ಮಧ್ಯಾಹ್ನ ಬಾಂಬ್ ಹಾಕಿದೆ. ಕಟ್ಟಡಗಳ ಅವಶೇಷಗಳಡಿಯಲ್ಲಿ 60 ಜನರು ಸಾವನ್ನಪ್ಪಿರುವ ಸಾಧ್ಯತೆಯಿದೆ.

ಉಕ್ರೇನ್​ನ ಶಾಲೆ ಮೇಲೆ ರಷ್ಯಾದಿಂದ ಬಾಂಬ್ ದಾಳಿ; 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ
ಉಕ್ರೇನ್​ನಲ್ಲಿ ಬಾಂಬ್ ದಾಳಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: May 08, 2022 | 3:53 PM

ಉಕ್ರೇನ್: ಉಕ್ರೇನ್‌ನ ಬಿಲೋಹೊರಿವ್ಕಾ ಗ್ರಾಮದ ಶಾಲೆಯೊಂದರ ಮೇಲೆ ನಡೆದ ರಷ್ಯಾದ (Russia) ಬಾಂಬ್ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿಯಲ್ಲಿ ಉಳಿದಿರುವ 60 ಜನರು ನಾಪತ್ತೆಯಾಗಿದ್ದಾರೆ. ಅವರು ಕೂಡ ಸಾವನ್ನಪ್ಪಿರುವ ಸಾಧ್ಯತೆಗಳಿವೆ ಎನ್ನಲಾಗಿದೆ. ಆದರೆ, ಅವರ ಮೃತದೇಹಗಳು ಲಭ್ಯವಾಗುವವರೆಗೂ ಈ ಬಗ್ಗೆ ನಿಖರವಾಗಿ ಹೇಳಲು ಸಾಧ್ಯವಿಲ್ಲ ಎಂದು ಲುಹಾನ್ಸ್ಕ್ ಪ್ರದೇಶದ ಗವರ್ನರ್ ಸೆರ್ಹಿ ಗೈಡೈ ಹೇಳಿದ್ದಾರೆ.

ಸುಮಾರು 90 ಜನರು ಆಶ್ರಯ ಪಡೆದಿದ್ದ ಶಾಲೆಯ ಮೇಲೆ ರಷ್ಯಾ ಶನಿವಾರ ಮಧ್ಯಾಹ್ನ ಬಾಂಬ್ ಹಾಕಿದೆ ಎಂದು ಗೈದೈ ಹೇಳಿದ್ದಾರೆ. ಈ ವೇಳೆ ಮೂವತ್ತು ಜನರನ್ನು ರಕ್ಷಿಸಲಾಗಿದೆ. ಅವರಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಗೈದೈ ಟೆಲಿಗ್ರಾಮ್ ಮೆಸೇಜಿಂಗ್ ಅಪ್ಲಿಕೇಶನ್‌ನಲ್ಲಿ ತಿಳಿಸಿದ್ದಾರೆ. ಕಟ್ಟಡಗಳ ಅವಶೇಷಗಳಡಿಯಲ್ಲಿ 60 ಜನರು ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಕೂಡ ಅವರು ತಿಳಿಸಿದ್ದಾರೆ.

ವ್ಲಾಡಿಮಿರ್ ಪುಟಿನ್ ಘೋಷಿಸಿರುವ ರಷ್ಯಾ ಮತ್ತು ವೊಲೊಡಿಮಿರ್ ಝೆಲೆನ್ಸ್ಕಿ ಅವರ ಉಕ್ರೇನ್ ನಡುವಿನ ಹೋರಾಟವು ಸತತ 74ನೇ ದಿನವೂ ಮುಂದುವರಿದಿದ್ದು, ಉಭಯ ದೇಶಗಳ ನಡುವೆ ಶಾಂತಿಯ ಯಾವುದೇ ಲಕ್ಷಣಗಳಿಲ್ಲ. ಮುತ್ತಿಗೆ ಹಾಕಿದ ಮರಿಪೋಲ್ ಬಂದರು ನಗರದಲ್ಲಿರುವ ಅಜೋವ್‌ಸ್ಟಾಲ್ ಉಕ್ಕಿನ ಸ್ಥಾವರದಿಂದ ಎಲ್ಲಾ ಮಹಿಳೆಯರು ಮತ್ತು ಮಕ್ಕಳನ್ನು ಸ್ಥಳಾಂತರಿಸಲಾಗಿದೆ ಎಂದು ಕೈವ್ ಹೇಳಿದ್ದಾರೆ.

ಅಮೆರಿಕಾದ ಅಧ್ಯಕ್ಷ ಜೋ ಬಿಡೆನ್, ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತು ಇತರ ಜಿ -7 ನಾಯಕರು ಭಾನುವಾರ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ವೀಡಿಯೊ ಕರೆ ಮೂಲಕ ಭೇಟಿಯಾಗಲಿದ್ದಾರೆ. ವರ್ಚುವಲ್ ಸಭೆಗೆ ಮುಂಚಿತವಾಗಿ, ಯುಕೆ ಯುದ್ಧ-ಹಾನಿಗೊಳಗಾದ ರಾಷ್ಟ್ರಕ್ಕೆ 1.3 ಬಿಲಿಯನ್ ರೂ. ಮೌಲ್ಯದ ಮಿಲಿಟರಿ ಸಹಾಯವನ್ನು ಘೋಷಿಸಿತು. (Source)

“ಫಿನ್‌ಲ್ಯಾಂಡ್ ಮತ್ತು ಸ್ವೀಡನ್‌ಗೆ ಸಂಬಂಧಿಸಿದಂತೆ, ಎರಡು ದೇಶಗಳಿಗೆ ಸೇರಲು ಅವಕಾಶವಿದೆ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ಪುಟಿನ್ ಬೇರೆಡೆಯಲ್ಲಿ ತೊಡಗಿಸಿಕೊಂಡಿದ್ದಾನೆ. ಅವರು ಅದರ ಬಗ್ಗೆ ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ರಾಸ್ಮುಸ್ಸೆನ್ ತಿಳಿಸಿದ್ದಾರೆ.

“ದಾಳಿ ನಡೆದ ಸುಮಾರು ನಾಲ್ಕು ಗಂಟೆಗಳ ನಂತರ ಬೆಂಕಿಯನ್ನು ನಂದಿಸಲಾಯಿತು. ನಂತರ ಅವಶೇಷಗಳನ್ನು ತೆರವುಗೊಳಿಸಲಾಯಿತು. ದುರದೃಷ್ಟವಶಾತ್ ಇಬ್ಬರ ಶವಗಳು ಪತ್ತೆಯಾಗಿವೆ. ಇನ್ನೂ 60 ಜನರ ಬಗ್ಗೆ ಯಾವುದೇ ಸುಳಿವು ಪತ್ತೆಯಾಗಿಲ್ಲ” ಎಂದು ಹೈದೈ ಟೆಲಿಗ್ರಾಮ್ ಮೆಸೇಜಿಂಗ್ ಅಪ್ಲಿಕೇಶನ್‌ನಲ್ಲಿ ಬರೆದಿದ್ದಾರೆ. ಅವಶೇಷಗಳಡಿಯಿಂದ ಮೂವತ್ತು ಜನರನ್ನು ಸ್ಥಳಾಂತರಿಸಲಾಗಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಕಟ್ಟಡಗಳ ಅವಶೇಷಗಳಡಿಯಲ್ಲಿ ಅರವತ್ತು ಜನರು ಸಾವನ್ನಪ್ಪಿರುವ ಸಾಧ್ಯತೆಯಿದೆ. ರಷ್ಯಾದ ಪಡೆಗಳು ನಾಗರಿಕರನ್ನು ಗುರಿಯಾಗಿಸಿಕೊಂಡಿವೆ ಎಂದು ಉಕ್ರೇನ್  ಆರೋಪಿಸಿದೆ ಆದರೆ, ಈ ಆರೋಪಗಳನ್ನು ರಷ್ಯಾ ತಿರಸ್ಕರಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಖೋ- ಖೋ ವಿಶ್ವಕಪ್: ಭಾರತ ಮಹಿಳಾ- ಪುರುಷ ತಂಡಗಳೇ ಚಾಂಪಿಯನ್ಸ್
ಖೋ- ಖೋ ವಿಶ್ವಕಪ್: ಭಾರತ ಮಹಿಳಾ- ಪುರುಷ ತಂಡಗಳೇ ಚಾಂಪಿಯನ್ಸ್
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ