ಮಾಸ್ಕೋ ಬಾಂಬ್‌ ಸ್ಫೋಟದಲ್ಲಿ ರಷ್ಯಾದ ಪರಮಾಣು ರಕ್ಷಣಾ ಪಡೆ ಮುಖ್ಯಸ್ಥ ಸಾವು

ರಷ್ಯಾದ ಪರಮಾಣು, ಜೈವಿಕ ಮತ್ತು ರಾಸಾಯನಿಕ ರಕ್ಷಣಾ ಪಡೆಗಳ (ಎನ್‌ಬಿಸಿ) ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಇಂದು ವಸತಿ ಬ್ಲಾಕ್‌ನಿಂದ ತೆರಳುತ್ತಿದ್ದಾಗ ಸ್ಕೂಟರ್‌ನಲ್ಲಿ ಅಡಗಿಸಿಟ್ಟಿದ್ದ ಬಾಂಬ್ ಸ್ಫೋಟಗೊಂಡಿತು. ಇದರಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ತನಿಖಾ ಸಮಿತಿ ತಿಳಿಸಿದೆ. ಪಾದಚಾರಿ ಮಾರ್ಗದಲ್ಲಿ ಬಿದ್ದಿರುವ ಇಬ್ಬರು ಪುರುಷರ ಮೃತದೇಹಗಳು ಛಿದ್ರವಾಗಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಮಾಸ್ಕೋ ಬಾಂಬ್‌ ಸ್ಫೋಟದಲ್ಲಿ ರಷ್ಯಾದ ಪರಮಾಣು ರಕ್ಷಣಾ ಪಡೆ ಮುಖ್ಯಸ್ಥ ಸಾವು
ಜನರಲ್ ಇಗೊರ್ ಕಿರಿಲ್ಲೋವ್
Follow us
ಸುಷ್ಮಾ ಚಕ್ರೆ
|

Updated on: Dec 17, 2024 | 1:16 PM

ಮಾಸ್ಕೋ: ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಚ್ಚಿಟ್ಟಿದ್ದ ಬಾಂಬ್‌ ಸ್ಫೋಟದಿಂದ ಮಾಸ್ಕೋದಲ್ಲಿ ಪರಮಾಣು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ರಷ್ಯಾದ ಹಿರಿಯ ಜನರಲ್ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಇಂದು (ಮಂಗಳವಾರ) ಮೃತಪಟ್ಟಿದ್ದಾರೆ. ರಷ್ಯಾದ ಪರಮಾಣು, ಜೈವಿಕ ಮತ್ತು ರಾಸಾಯನಿಕ ಸಂರಕ್ಷಣಾ ಪಡೆಗಳ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಅವರು ಕ್ರೆಮ್ಲಿನ್‌ನಿಂದ ಆಗ್ನೇಯಕ್ಕೆ 7 ಕಿ.ಮೀ ದೂರದಲ್ಲಿರುವ ರಿಯಾಜಾನ್ಸ್ಕಿ ಪ್ರಾಸ್ಪೆಕ್ಟ್‌ನಲ್ಲಿರುವ ಅಪಾರ್ಟ್​ಮೆಂಟ್ ಕಟ್ಟಡದ ಬಳಿ ಬಾಂಬ್ ದಾಳಿಯಿಂದ ಮೃತರಾಗಿದ್ದಾರೆ.

ಜನರಲ್ ಕಿರಿಲ್ಲೋವ್ ಅವರ ಸಹಾಯಕ ಸಹ ಈ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ. ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ಸಮಯದಲ್ಲಿ ನಿಷೇಧಿತ ರಾಸಾಯನಿಕ ಅಸ್ತ್ರಗಳನ್ನು ಬಳಸಿದ್ದಕ್ಕಾಗಿ ಕಿರಿಲ್ಲೋವ್‌ಗೆ ಉಕ್ರೇನಿಯನ್ ನ್ಯಾಯಾಲಯ ಸೋಮವಾರ ಗೈರುಹಾಜರಿ ಶಿಕ್ಷೆ ವಿಧಿಸಿತ್ತು.

ಇದನ್ನೂ ಓದಿ: ಮಹಾಯುದ್ಧದ ಭೀತಿ; ಮೊಟ್ಟ ಮೊದಲ ಬಾರಿಗೆ ರಷ್ಯಾದಿಂದ ಉಕ್ರೇನ್ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ

ರಿಮೋಟ್‌ನಿಂದ ಸ್ಫೋಟಿಸಲಾದ ಸ್ಫೋಟಕ ಸಾಧನದ ಶಕ್ತಿಯು ಸುಮಾರು 300 ಗ್ರಾಂ ಟಿಎನ್‌ಟಿಯಷ್ಟಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆ ಟಿಎಎಸ್​ಎಸ್​ ವರದಿ ಮಾಡಿದೆ. ಉಕ್ರೇನ್ ವಿರುದ್ಧದ ಯುದ್ಧದಲ್ಲಿ ನಿಷೇಧಿತ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸಿದ್ದಕ್ಕಾಗಿ ಉಕ್ರೇನಿಯನ್ ಕೋರ್ಟ್​ ಜನರಲ್‌ ಕಿರಿಲ್ಲೋವ್​ ಅವರಿಗೆ ಗೈರುಹಾಜರಾಗಿದ್ದಕ್ಕೆ ಶಿಕ್ಷೆ ವಿಧಿಸಿತ್ತು. ಅದಾದ ಒಂದು ದಿನದ ನಂತರ ಕಿರಿಲ್ಲೋವ್ ಅವರ ಸಾವು ಸಂಭವಿಸಿದೆ. ಉಕ್ರೇನ್‌ನ ಭದ್ರತಾ ಸೇವೆಯ ಪ್ರಕಾರ, ಯುದ್ಧದ ಆರಂಭದಿಂದಲೂ ಕಿರಿಲ್ವ್ಲೋವ್ ಅವರ ಆದೇಶದ ಮೇರೆಗೆ ರಷ್ಯಾದ ರಾಸಾಯನಿಕ ಯುದ್ಧಸಾಮಗ್ರಿಗಳ ಬಳಕೆಯ 4,800 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ