AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬೀರಿಯಾದಲ್ಲಿ ರಷ್ಯಾದ ಸೇನಾ ವಿಮಾನ ಪತನ; 17 ಪ್ರಯಾಣಿಕರು ಸಾವು

ರಷ್ಯಾದ ನೈಋತ್ಯ ಸೈಬೀರಿಯಾದ (ದಕ್ಷಿಣ ರಷ್ಯಾ) ಕೆಮೆರೊವೊ ಪ್ರದೇಶದಲ್ಲಿ ಇಂದು ರಷ್ಯಾದ An-12 ಸೇನಾ ಸಾರಿಗೆ ವಿಮಾನವೊಂದು ಪತನಗೊಂಡಿದ್ದು, ವಿಮಾನದಲ್ಲಿದ್ದ ಎಲ್ಲಾ 17 ಮಂದಿ ಮೃತಪಟ್ಟಿದ್ದಾರೆ. ಈ ವಿಮಾನವು ಸೈಬೀರಿಯಾದ ನೊವೊಸಿಬಿರ್ಸ್ಕ್‌ನಿಂದ ಕ್ರಾಸ್ನೊಯಾರ್ಸ್ಕ್ ಕ್ರೈನ ಕಾನ್ಸ್ಕ್ ಕಡೆಗೆ ಪ್ರಯಾಣಿಸುತ್ತಿತ್ತು. ಮಾರ್ಗಮಧ್ಯೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೊನೆಯ ಕ್ಷಣದವರೆಗೂ ವಿಮಾನದ ಸಿಬ್ಬಂದಿ ಉರಿಯುತ್ತಿದ್ದ ವಿಮಾನವನ್ನು ಜನವಸತಿ ಕಟ್ಟಡಗಳಿಂದ ದೂರಕ್ಕೆ ತಿರುಗಿಸಲು ಪ್ರಯತ್ನಿಸಿದರು.

ಸೈಬೀರಿಯಾದಲ್ಲಿ ರಷ್ಯಾದ ಸೇನಾ ವಿಮಾನ ಪತನ; 17 ಪ್ರಯಾಣಿಕರು ಸಾವು
ರಷ್ಯಾದಲ್ಲಿ ಸೇನಾ ವಿಮಾನ ಪತನ
ಸುಷ್ಮಾ ಚಕ್ರೆ
|

Updated on: Nov 17, 2026 | 10:08 PM

Share

ಮಾಸ್ಕೋ, ನವೆಂಬರ್ 17: ರಷ್ಯಾದ An-12 ಸೇನಾ ಸಾರಿಗೆ ವಿಮಾನವೊಂದು ಇಂದು ಪತನಗೊಂಡಿದ್ದು, ವಿಮಾನದಲ್ಲಿದ್ದ ಎಲ್ಲಾ 17 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮತ್ತು ರಷ್ಯಾದ ಸರ್ಕಾರಿ ನಿಯಂತ್ರಿತ ಮಾಧ್ಯಮ ‘ರೆನ್ ಟಿವಿ’ ದೃಢಪಡಿಸಿದೆ. ನೈಋತ್ಯ ಸೈಬೀರಿಯಾದ ಕೆಮೆರೊವೊ ಒಬ್ಲಾಸ್ಟ್‌ನ ಯಾಗುನೊವೊ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ಸ್ಥಳೀಯ ಕಾಲಮಾನ ರಾತ್ರಿ 9.30ರ ಸುಮಾರಿಗೆ ವಿಮಾನ ಪತನಗೊಂಡಿದೆ.

ಈ ದುರ್ಘಟನೆ ನಡೆದ ಸ್ಥಳದಲ್ಲಿ ತುರ್ತು ಪ್ರತಿಕ್ರಿಯೆ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ವೈದ್ಯಕೀಯ ಸಿಬ್ಬಂದಿ, ಪೊಲೀಸರು, ತುರ್ತು ಸೇವಾ ತಂಡಗಳು ಮತ್ತು ನ್ಯಾಷನಲ್ ಗಾರ್ಡ್ ಪಡೆಗಳನ್ನು ನಿಯೋಜಿಸಲಾಗಿದೆ. ಈ ವಿಮಾನವು ಸೈಬೀರಿಯಾದ ನೊವೊಸಿಬಿರ್ಸ್ಕ್‌ನಿಂದ ಕ್ರಾಸ್ನೊಯಾರ್ಸ್ಕ್ ಕ್ರೈನ ಕಾನ್ಸ್ಕ್ ಕಡೆಗೆ ಪ್ರಯಾಣಿಸುತ್ತಿತ್ತು. ಮಾರ್ಗಮಧ್ಯೆ ಬೆಂಕಿ ಹೊತ್ತಿಕೊಂಡಿದ್ದ ವಿಮಾನವನ್ನು ಜನವಸತಿ ಕಟ್ಟಡಗಳಿಂದ ದೂರಕ್ಕೆ ತಿರುಗಿಸಲು ಸಿಬ್ಬಂದಿ ಕೊನೆಯ ಕ್ಷಣದವರೆಗೂ ಪ್ರಯತ್ನಿಸಿದರು ಎಂದು ‘ರೆನ್ ಟಿವಿ’ ವರದಿ ಮಾಡಿದೆ. ವಿಮಾನ ಪತನಕ್ಕೆ ನಿಖರ ಕಾರಣ ಏನೆಂಬುದು ಇನ್ನೂ ಬಹಿರಂಗವಾಗಿಲ್ಲ.

ಇದನ್ನೂ ಓದಿ: ಬೆಂಗಳೂರಿನ ಐವರ ದುರಂತ ಅಂತ್ಯ; ಉತ್ತರಾಖಂಡದ ಹೆಲಿಕಾಪ್ಟರ್ ಪತನದ ವೇಳೆ ಏನೇನಾಯ್ತು?

ಆಂಟೊನೊವ್ An-12 ವಿಮಾನದ ಹಿನ್ನೆಲೆ:

ಪತನಗೊಂಡ ಆಂಟೊನೊವ್ An-12 (Antonov An-12) ವಿಮಾನವು 1950ರ ದಶಕದಲ್ಲಿ ಸೋವಿಯತ್ ಒಕ್ಕೂಟದಿಂದ ವಿನ್ಯಾಸಗೊಳಿಸಲಾದ 4 ಎಂಜಿನ್ ಟರ್ಬೊಪ್ರಾಪ್ ಸೇನಾ ಸಾರಿಗೆ ವಿಮಾನವಾಗಿದೆ. ಸೈನಿಕರು, ಮಿಲಿಟರಿ ಉಪಕರಣಗಳು ಮತ್ತು ಸರಕುಗಳನ್ನು ಸಾಗಿಸಲು ಇದನ್ನು ಬಳಸಲಾಗುತ್ತದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
‘ಶಂಕರಾಭರಣ’ ಬಸ್ ಸಿಕ್ಕ ಬಳಿಕ ಶೈನ್ ಶೆಟ್ಟಿ ಬದುಕಿನಲ್ಲಿ ಚಮತ್ಕಾರ
‘ಶಂಕರಾಭರಣ’ ಬಸ್ ಸಿಕ್ಕ ಬಳಿಕ ಶೈನ್ ಶೆಟ್ಟಿ ಬದುಕಿನಲ್ಲಿ ಚಮತ್ಕಾರ
ಯಲ್ಲಮ್ಮ ದೇಗುಲದ ಗೋಡೆ ಮೇಲೆ ಅಶ್ಲೀಲ ಚಿಹ್ನೆ ಬಿಡಿಸಿ ವಿಕೃತಿ
ಯಲ್ಲಮ್ಮ ದೇಗುಲದ ಗೋಡೆ ಮೇಲೆ ಅಶ್ಲೀಲ ಚಿಹ್ನೆ ಬಿಡಿಸಿ ವಿಕೃತಿ
ಶಿವಣ್ಣನ ಜೊತೆ ಶಬರಿಮಲೆಗೆ ಹೋದ ಘಟನೆ ನೆನಪಿಸಿಕೊಂಡ ಪ್ರೇಮ್ ಪುತ್ರಿ ಅಮೃತಾ
ಶಿವಣ್ಣನ ಜೊತೆ ಶಬರಿಮಲೆಗೆ ಹೋದ ಘಟನೆ ನೆನಪಿಸಿಕೊಂಡ ಪ್ರೇಮ್ ಪುತ್ರಿ ಅಮೃತಾ
ಚಿಕಿತ್ಸೆಗೆ 5 ಸಾವಿರ ರೂ. ಕಡಿಮೆ ಇದ್ದಿದ್ದಕ್ಕೆ ಮೊಬೈಲ್ ನೀಡುವಂತೆ ಒತ್ತಾಯ
ಚಿಕಿತ್ಸೆಗೆ 5 ಸಾವಿರ ರೂ. ಕಡಿಮೆ ಇದ್ದಿದ್ದಕ್ಕೆ ಮೊಬೈಲ್ ನೀಡುವಂತೆ ಒತ್ತಾಯ
ದೇವಸ್ಥಾನದೊಳಗೆ ಹೋಗದಂತೆ ನಿಖಿಲ್​​ಗೆ​​ ಅಡ್ಡಿ: ಕ್ಷಮೆಯಾಚಿಸಿದ ಕೈ ಮುಖಂಡ!
ದೇವಸ್ಥಾನದೊಳಗೆ ಹೋಗದಂತೆ ನಿಖಿಲ್​​ಗೆ​​ ಅಡ್ಡಿ: ಕ್ಷಮೆಯಾಚಿಸಿದ ಕೈ ಮುಖಂಡ!
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್
ಮೀನು ರಪ್ತು ವಾಹನದಲ್ಲಿ ಸಾಗಿಸುತ್ತಿದ್ದ 35 ಲಕ್ಷ ಮೌಲ್ಯದ ಲಿಕ್ಕರ್​ ಜಪ್ತಿ
ಮೀನು ರಪ್ತು ವಾಹನದಲ್ಲಿ ಸಾಗಿಸುತ್ತಿದ್ದ 35 ಲಕ್ಷ ಮೌಲ್ಯದ ಲಿಕ್ಕರ್​ ಜಪ್ತಿ