Russia Ukraine War: ಉಕ್ರೇನ್​ನ ಶಾಪಿಂಗ್ ಮಾಲ್ ಮೇಲೆ ರಷ್ಯಾ ಕ್ಷಿಪಣಿ ದಾಳಿ, 16 ಮಂದಿ ಸಾವು

ಶಾಪಿಂಗ್ ಮಾಲ್ ಮೇಲೆ ನಡೆಸಿರುವ ದಾಳಿಯನ್ನು ವಿಶ್ವ ಸಮುದಾಯ ತೀವ್ರವಾಗಿ ಖಂಡಿಸಿದೆ.

Russia Ukraine War: ಉಕ್ರೇನ್​ನ ಶಾಪಿಂಗ್ ಮಾಲ್ ಮೇಲೆ ರಷ್ಯಾ ಕ್ಷಿಪಣಿ ದಾಳಿ, 16 ಮಂದಿ ಸಾವು
ರಷ್ಯಾದ ಕ್ಷಿಪಣಿ ದಾಳಿಯಿಂದ ಕುಸಿದು ಬಿದ್ದಿರುವ ಶಾಪಿಂಗ್ ಮಾಲ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 28, 2022 | 8:58 AM

ಕೀವ್: ಉಕ್ರೇನ್​ನ ಕ್ರೆಮೆನ್​ಚುಕ್​ನಲ್ಲಿರುವ ಶಾಪಿಂಗ್​ ಮಾಲ್ ಒಂದರ ಮೇಲೆ ರಷ್ಯಾ ಕ್ಷಿಪಣಿ ದಾಳಿ (Russia Missile Attack) ನಡೆಸಿದೆ. ದಾಳಿ ನಡೆದಾಗ ಮಾಲ್​ನಲ್ಲಿ ಸುಮಾರು 1,000 ಮಂದಿ ಇದ್ದರು. ಬಾಂಬ್ ಸ್ಫೋಟಿಸಿದಾಗ ಸುಮಾರು 16 ಮಂದಿ ಸ್ಥಳದಲ್ಲಿಯೇ ಮೃತಪಟ್ಟರು, ನೂರಾರು ಮಂದಿಗೆ ಗಾಯಗಳಾಗಿವೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್​ಸ್ಕಿ (Ukraine President Volodymyr Zelensky ಹೇಳಿದ್ದಾರೆ. ಶಾಪಿಂಗ್ ಮಾಲ್ ಮೇಲೆ ನಡೆಸಿರುವ ದಾಳಿಯನ್ನು ವಿಶ್ವ ಸಮುದಾಯ ತೀವ್ರವಾಗಿ ಖಂಡಿಸಿದೆ.

‘ಮುಗ್ಧ ನಾಗರಿಕರ ಮೇಲೆ ಮನಬಂದಂತೆ ದಾಳಿ ನಡೆಸುವುದು ಯುದ್ಧಾಪರಾಧವಾಗುತ್ತದೆ. ರಷ್ಯಾದ ಈ ದಾಳಿಗೆ ಕ್ಷಮೆಗೆ ಅರ್ಹವಾದುದಲ್ಲ’ ಎಂದು ಜಿ7 ದೇಶಗಳ ಒಕ್ಕೂಟ ಕಟುವಾಗಿ ಟೀಕಿಸಿದೆ. ಪೂರ್ವ ಉಕ್ರೇನ್​ನ ಲುಹಾನ್​ಸ್ಕ್​ ಪ್ರಾಂತ್ಯದ ಲಿಸಿಚನ್​ಸ್ಕ್​ ಎನ್ನುವಲ್ಲಿಯೂ ನೀರು ಹಿಡಿಯುತ್ತಿದ್ದ ಜನರ ಮೇಲೆ ರಷ್ಯಾ ಪಡೆಗಳು ಗುಂಡು ಹಾರಿಸಿದ್ದ 8 ಮಂದಿ ಮೃತಪಟ್ಟಿದ್ದಾರೆ. ಖಾರ್ಕಿವ್ ನಗರದಲ್ಲಿ ರಷ್ಯಾ ಪಡೆಗಳ ಶೆಲ್ ದಾಳಿಗೆ ಐವರು ಮೃತಪಟ್ಟಿದ್ದಾರೆ. ಮಕ್ಕಳು ಸೇರಿದಂತೆ 22 ಮಂದಿ ಗಾಯಗೊಂಡಿದ್ದಾರೆ.

ಉಕ್ರೇನ್​ಗೆ ಹೊಸದಾಗಿ ಹಲವು ನೆರವು ಮತ್ತು ಯುದ್ಧೋಪಕರಣಗಳನ್ನು ಒದಗಿಸುವುದಾಗಿ ಅಮೆರಿಕ ಘೋಷಿಸಿದೆ. ಅತ್ಯಾಧುನಿಕ ವಾಯುರಕ್ಷಣಾ ವ್ಯವಸ್ಥೆ ನೀಡಲಾಗುವುದು ಎಂದು ಅಮೆರಿಕ ಭರವಸೆ ನೀಡಿದೆ. ಸಂಭಾವ್ಯ ಸಂಘರ್ಷಕ್ಕೆ ನ್ಯಾಟೊ ಸಹ ಸಿದ್ಧತೆ ಆರಂಭಿಸಿದ್ದು, ಕ್ಷಿಪ್ರ ಕಾರ್ಯಪಡೆಗೆ ಸನ್ನದ್ಧ ಸ್ಥಿತಿಯಲ್ಲಿರುವ ಸೈನಿಕರ ಸಂಖ್ಯೆಯನ್ನು 3 ಲಕ್ಷಕ್ಕೆ ಹೆಚ್ಚಿಸಿದೆ.

ಗೆಲುವು ಮರೀಚಿಕೆ

ಉಕ್ರೇನ್​ನ ಪೂರ್ವ ಭಾಗದ ಬಹುತೇಕ ಪ್ರದೇಶಗಳನ್ನು ರಷ್ಯಾ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆಯಾದರೂ, ಉಕ್ರೇನ್​ ಸೇನಾಪಡೆಗಳು ಹೋರಾಟ ನಿಲ್ಲಿಸಿಲ್ಲ. ಹಲವು ಪ್ರದೇಶಗಳ ನಿಯಂತ್ರಣ ಎರಡೂ ಸೇನೆಗಳ ನಡುವೆ ಕೈಬದಲಿಯಾಗುತ್ತಿದೆ. ಯುದ್ಧದಿಂದಾಗಿ 10 ಲಕ್ಷಕ್ಕೂ ಹೆಚ್ಚು ಮಂದಿ ನಿರಾಶ್ರಿತರಾಗಿದ್ದಾರೆ. ಚಳಿಗಾಲದ ಒಳಗೆ ಯುದ್ಧ ಅಂತ್ಯಗೊಳ್ಳದಿದ್ದರೆ ಜನಜೀವನ ಮತ್ತಷ್ಟು ಸಂಕಷ್ಟ ಅನುಭವಿಸಬೇಕಾಗುತ್ತದೆ.

Published On - 8:58 am, Tue, 28 June 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್