ಪಾಕಿಸ್ತಾನದ ನೆಲದಲ್ಲಿ ಉಗ್ರವಾದದ ವಿರುದ್ಧ ಗುಡುಗಿದ ಜೈಶಂಕರ್

ಇಸ್ಲಾಮಾಬಾದ್‌ನಲ್ಲಿ ನಡೆದ ಎಸ್‌ಸಿಒ ಶೃಂಗಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಬುಧವಾರ ಪಾಕಿಸ್ತಾನದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದು, ಗಡಿಯಾಚೆಗಿನ ಚಟುವಟಿಕೆಗಳು ಭಯೋತ್ಪಾದನೆ, ಉಗ್ರವಾದ ಮತ್ತು ಪ್ರತ್ಯೇಕತಾವಾದ ದಿಂದ ಕೂಡಿದ್ದರೆ ವ್ಯಾಪಾರವನ್ನು ಉತ್ತೇಜಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪಾಕಿಸ್ತಾನದ ನೆಲದಲ್ಲಿ ಉಗ್ರವಾದದ ವಿರುದ್ಧ ಗುಡುಗಿದ ಜೈಶಂಕರ್
ಎಸ್ ಜೈಶಂಕರ್ Image Credit source: India Today
Follow us
ನಯನಾ ರಾಜೀವ್
|

Updated on:Oct 16, 2024 | 12:48 PM

ಎರಡು ರಾಷ್ಟ್ರಗಳ ನಡುವಿನ ಗಡಿಯಾಚೆಗಿನ ಚಟುವಟಿಕೆಗಳು ಉಗ್ರವಾದ ಮತ್ತು ಪ್ರತ್ಯೇಕತಾವಾದದಿಂದ ಕೂಡಿದ್ದರೆ, ಅದು ದ್ವಿಪಕ್ಷೀಯ ವ್ಯಾಪಾರ, ಸಂಬಂಧಗಳಿಗೆ ಸಹಕಾರಿಯಲ್ಲ ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್ ಹೇಳಿದ್ದಾರೆ. ಪಾಕಿಸ್ತಾನದಲ್ಲಿ ನಡೆಯುತ್ತಿರುವ ಎಸ್​ಸಿಒ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಭಿವೃದ್ಧಿ ಮತ್ತು ಬೆಳವಣಿಗೆಗೆ ಶಾಂತಿ ಮತ್ತು ಸ್ಥಿರತೆಯ ಅಗತ್ಯವಿದೆ ಎಂಬುದು ಮೂಲತತ್ವವಾಗಿದೆ ಎಂದರು.

ಏಕಪಕ್ಷೀಯ ಅಜೆಂಡಾಗಳ ಮೂಲಕ ಸಂಬಂಧಗಳು ಪ್ರಗತಿ ಹೊಂದಲು ಸಾಧ್ಯವಿಲ್ಲ, ಅಭಿವೃದ್ಧಿ ಮತ್ತು ಪ್ರಗತಿಗೆ ಶಾಂತಿ ಮತ್ತು ಸ್ಥಿರತೆ ಅಗತ್ಯ ಎಂಬುದರಲ್ಲಿ ಸಂದೇಹವಿಲ್ಲ ಎಂದು ಹೇಳಿದರು. ಈ ಕೆಲಸಗಳು ಆಗದಿದ್ದರೆ ಅಭಿವೃದ್ಧಿಯ ಮಾತೇ ಇಲ್ಲ ಎಂದು ಹೇಳಿದರು.

ಎರಡು ದೇಶಗಳ ನಡುವೆ ವಿಶ್ವಾಸದ ಕೊರತೆಯಿದ್ದರೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಜೈಶಂಕರ್ ಒತ್ತಿ ಹೇಳಿದರು. ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಘರ್ಷಣೆಗಳು ಮತ್ತು ಮಧ್ಯಪ್ರಾಚ್ಯ ಉದ್ವಿಗ್ನತೆಯ ಬಗ್ಗೆ ಮಾತನಾಡಿದ ಅವರು, ಎಸ್‌ಸಿಒ ಸಭೆಯು ವಿಶ್ವ ವ್ಯವಹಾರಗಳಲ್ಲಿ ಕಠಿಣ ಸಮಯದಲ್ಲಿ ನಡೆಯುತ್ತಿದೆ ಎಂದು ಹೇಳಿದರು.

ಮತ್ತಷ್ಟು ಓದಿ: ಇಸ್ಲಮಾಬಾದ್​ನಲ್ಲಿ ಎಸ್​ಸಿಒ​ ಶೃಂಗಸಭೆ; ಭಾರತದ ಸಚಿವ ಜೈಶಂಕರ್​ ಕೈ ಕುಲುಕಿದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್

ಜೈಶಂಕರ್ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದು, 9 ವರ್ಷಗಳ ನಂತರ ಭಾರತದ ವಿದೇಶಾಂಗ ಸಚಿವರೊಬ್ಬರ ಮೊದಲ ಭೇಟಿಯಾಗಿದೆ. ಜೈಶಂಕರ್ ಮಂಗಳವಾರ ಸಂಜೆ ಇಸ್ಲಾಮಾಬಾದ್​ಗೆ ಹೋಗಿದ್ದರು. SCO ಸಭೆಯ ಆಹ್ವಾನಿತ ಗಣ್ಯರಿಗೆ ಮಂಗಳವಾರ ರಾತ್ರಿ ಶೆಹಬಾಜ್ ಷರೀಪ್ ಅವರು ತಮ್ಮ ನಿವಾಸದಲ್ಲಿ ಔತಣಕೂಟದ ಏರ್ಪಡಿಸಿದ್ದರು.

ಈ ವೇಳೆ ಷರೀಪ್ ಹಾಗೂ ಜೈಶಂಕರ್ ಅವರು ಔಪಚಾರಿಕವಾಗಿ ಅಷ್ಟೇ ಮಾತುಕತೆ ನಡೆಸಿದರು. ಸುಷ್ಮಾ ಸ್ವರಾಜ್ ಅವರು ವಿದೇಶಾಂಗ ಸಚಿವರಾಗಿದ್ದಾಗ 2015ರ ಡಿಸೆಂಬರ್‌ನಲ್ಲಿ ಇಸ್ಲಾಮಾಬಾದ್‌ಗೆ ಭೇಟಿ ನೀಡಿದ್ದರು. ರಷ್ಯಾ ಮತ್ತು ಚೀನಾ 1996 ಮತ್ತು 2001ರ ನಡುವೆ ನ್ಯಾಟೊಗೆ ಪ್ರತಿಯಾಗಿ ಕಾರ್ಯತಂತ್ರದ ಭಾಗವಾಗಿ ಕಾರ್ಯನಿರ್ವಹಿಸಲು ಎಸ್‌ಸಿಒ ಪ್ರಾರಂಭಿಸಿದವು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:47 pm, Wed, 16 October 24

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ