Trump swearing in Ceremony: ಡೊನಾಲ್ಡ್​ ಟ್ರಂಪ್​ ಪ್ರಮಾಣ ವಚನ ಸಮಾರಂಭದಲ್ಲಿ ಎಸ್​ ಜೈಶಂಕರ್ ಭಾಗಿ

ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭಾರತವನ್ನೂ ಆಹ್ವಾನಿಸಲಾಗಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಹ್ವಾನದ ಮೇರೆಗೆ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಜೈಶಂಕರ್ ಅವರು 47 ನೇ ಅಧ್ಯಕ್ಷರಾಗಿ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾರತ ಸರ್ಕಾರವನ್ನು ಪ್ರತಿನಿಧಿಸಲಿದ್ದಾರೆ. ಈ ಭೇಟಿಯ ವೇಳೆ ವಿದೇಶಾಂಗ ಸಚಿವರು ಅಮೆರಿಕಕ್ಕೆ ಭೇಟಿ ನೀಡುತ್ತಿರುವ ಇತರ ಕೆಲವು ಗಣ್ಯರನ್ನು ಭೇಟಿಯಾಗಲಿದ್ದಾರೆ.

Trump swearing in Ceremony: ಡೊನಾಲ್ಡ್​ ಟ್ರಂಪ್​ ಪ್ರಮಾಣ ವಚನ ಸಮಾರಂಭದಲ್ಲಿ ಎಸ್​ ಜೈಶಂಕರ್ ಭಾಗಿ
ಡೊನಾಲ್ಡ್​ ಟ್ರಂಪ್
Follow us
ನಯನಾ ರಾಜೀವ್
|

Updated on: Jan 12, 2025 | 11:39 AM

ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಜನವರಿ 20 ರಂದು ಅಮೆರಿಕದಲ್ಲಿ ನಡೆಯಲಿರುವ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಟ್ರಂಪ್ ಜನವರಿ 20 ರಂದು ಅಮೆರಿಕದ 47 ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ 312 ಎಲೆಕ್ಟೋರಲ್ ಮತಗಳನ್ನು ಮತ್ತು ಹ್ಯಾರಿಸ್ 226 ಎಲೆಕ್ಟೋರಲ್ ಮತಗಳನ್ನು ಪಡೆದಿದ್ದರು. ಚುನಾವಣೆಯಲ್ಲಿ ಬಹುಮತ ಪಡೆಯಲು ಅಭ್ಯರ್ಥಿಗೆ 270 ಚುನಾವಣಾ ಮತಗಳ ಅಗತ್ಯವಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ವಾಷಿಂಗ್ಟನ್‌ಗೆ ಭೇಟಿ ನೀಡುವ ಸಂದರ್ಭದಲ್ಲಿ, ಜೈಶಂಕರ್ ಅವರು ಅಮೆರಿಕದ ಟ್ರಂಪ್ ಆಡಳಿತದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷರಾಗಿ ಆಯ್ಕೆಯಾದ ಅಧ್ಯಕ್ಷ ಡೊನಾಲ್ಡ್ ಜೆ. ಟ್ರಂಪ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಜೈಶಂಕರ್ ಭಾರತ ಸರ್ಕಾರವನ್ನು ಪ್ರತಿನಿಧಿಸಲಿದ್ದಾರೆ.

ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ ನಂತರ ಆಯೋಜಿಸಲಾಗುವ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಭಾರತೀಯ ಅಮೆರಿಕನ್ ಧೋಲ್ ಬ್ಯಾಂಡ್​ಗೆಗೆ ಆಹ್ವಾನ ನೀಡಲಾಗಿದೆ.

ಮತ್ತಷ್ಟು ಓದಿ: Donald Trump income: ಬಿಸಿನೆಸ್ ಹಿನ್ನೆಲೆಯ ಡೊನಾಲ್ಡ್ ಟ್ರಂಪ್ ಬಳಿ ಇರೋ ಆಸ್ತಿ ಎಷ್ಟು? ಇಲ್ಲಿದೆ ಡೀಟೇಲ್ಸ್

ಈ ಮೆರವಣಿಗೆಯನ್ನು ಕ್ಯಾಪಿಟಲ್ ಹಿಲ್‌ನಿಂದ ಶ್ವೇತಭವನಕ್ಕೆ ಕರೆದೊಯ್ಯಲಾಗುತ್ತದೆ. ವಿದೇಶಾಂಗ ಸಚಿವ ಎಸ್. ಭಾರೀ ಚರ್ಚೆಗೆ ಗ್ರಾಸವಾಗಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಗೆಲುವಿನ ಕುರಿತು ಜೈಶಂಕರ್ ವಿಶೇಷ ಹೇಳಿಕೆ ನೀಡಿದ್ದರು.

ಅಧ್ಯಕ್ಷೀಯ ಚುನಾವಣೆಯ ನಂತರ ಅನೇಕ ದೇಶಗಳು ಅಮೆರಿಕದ ಬಗ್ಗೆ ಆತಂಕಗೊಂಡಿವೆ, ಆದರೆ ಭಾರತವನ್ನು ಆ ದೇಶಗಳ ಪಟ್ಟಿಯಲ್ಲಿ ಸೇರಿಸಲಾಗಿಲ್ಲ ಎಂದು ಜೈಶಂಕರ್ ಹೇಳಿದ್ದರು.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಜಯಗಳಿಸಿದ ಸುಮಾರು ಎರಡು ವಾರಗಳ ನಂತರ ಜನವರಿ 20 ರಂದು ಪ್ರಮಾಣ ವಚನ ಸಮಾರಂಭ ನಡೆಯಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ