AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರು, ಸಹೋದರಿಯನ್ನು ಕೊಂದು ವಾರಗಳ ಕಾಲ ರಕ್ತಸಿಕ್ತ ದೇಹಗಳ ಜತೆ ಕಾಲ ಕಳೆದ ಬಾಲಕ

16 ವರ್ಷದ ಬಾಲಕನೊಬ್ಬ ಪೋಷಕರು ಹಾಗೂ ಸಹೋದರಿಯನ್ನು ಕೊಂದು ವಾರಗಳ ಕಾಲ ರಕ್ತಸಿಕ್ತ ದೇಹಗಳ ಜತೆ ಕಳೆದಿರುವ ಭಯಾನಕ ಘಟನೆ ಸಾವೊ ಪಾಲೊದಲ್ಲಿ ನಡೆದಿದೆ.

ಪೋಷಕರು, ಸಹೋದರಿಯನ್ನು ಕೊಂದು ವಾರಗಳ ಕಾಲ ರಕ್ತಸಿಕ್ತ ದೇಹಗಳ ಜತೆ ಕಾಲ ಕಳೆದ ಬಾಲಕ
ಪೊಲೀಸ್​
ನಯನಾ ರಾಜೀವ್
|

Updated on: May 23, 2024 | 12:14 PM

Share

ತನ್ನ ಕೈಯಿಂದ ಫೋನ್​ ಕಸಿದುಕೊಂಡಿದ್ದಕ್ಕಾಗಿ ಪೋಷಕರು ಹಾಗೂ ಅಕ್ಕನನ್ನು ಗುಂಡಿಕ್ಕಿ ಹತ್ಯೆ ಮಾಡಿ ವಾರಗಳ ಕಾಲ ಮೃತದೇಹಗಳ ಜತೆ ಬಾಲಕನೊಬ್ಬ ಕಾಲ ಕಳೆದಿರುವ ಘಟನೆ ಸಾವೊ ಪಾಲೊದಲ್ಲಿ ನಡೆದಿದೆ. ಸೋಮವಾರ ಬಾಲಕನೇ ಪೊಲೀಸರಿಗೆ ಕರೆ ಮಾಡಿ ತಪ್ಪೊಪ್ಪಿಕೊಂಡಿದ್ದಾನೆ. ಮಕ್ಕಳಿಬ್ಬರು ಮೊಬೈಲ್​ಗಾಗಿ ಜಗಳವಾಡುತ್ತಿದ್ದರು ಆಗ ಪೋಷಕರು ಮೊಬೈಲ್​ನ್ನು ಕಿತ್ತುಕೊಂಡಿದ್ದಕ್ಕೆ ಕೋಪಗೊಂಡ ಬಾಲಕ ಪೋಷಕರು ಹಾಗೂ ಸಹೋದರಿಯನ್ನು ಹತ್ಯೆ ಮಾಡಿದ್ದ.

ಮುನ್ಸಿಪಲ್ ಪೊಲೀಸ್​ ಆಗಿದ್ದ ತಂದೆಯ ಸರ್ವೀಸ್​ ಗನ್​ ಹಿಡಿದು ಮನಬಂದಂತೆ ಗುಂಡು ಹಾರಿಸಿದ್ದಾಗಿ ಆತನೇ ತಿಳಿಸಿದ್ದಾನೆ. ಸಹೋದರಿಯ ಮುಖಕ್ಕೂ ಗುಂಡು ಹಾರಿಸಿದ್ದಾನೆ, ಹಲವು ಗಂಟೆಗಳ ಬಳಿಕ ತಾಯಿ ಮನೆಗೆ ಬಂದಾಗ ಅದೇ ರಿವಾಲ್ವರ್​ನಿಂದ ಆಕೆಯನ್ನೂ ಕೊಂದಿದ್ದಾನೆ.

ಆತನಿಗೆ ಮಾನಸಿಕ ಸಮಸ್ಯೆ ಏನಾದರೂ ಇತ್ತೇ ಎಂಬುದನ್ನು ಕಂಡುಹಿಡಿಯಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕ ಯಾರೊಂದಿಗಾದರೂ ಮಾತನಾಡಿದ್ದಾನೆಯೇ ಯಾರಾದರೂ ಈ ಹತ್ಯೆಯಲ್ಲಿ ಭಾಗಿಯಾಗಿದ್ದಾರೆಯೇ ಎಂಬುದನ್ನು ಕಂಡುಹಿಡಿಯಬೇಕಿದೆ.

ಮತ್ತಷ್ಟು ಓದಿ: ಕಾರು ಅಪಘಾತ; ಗಾಯಗೊಂಡ ಸ್ಥಿತಿಯಲ್ಲೇ ಸೆಲ್ಫಿಗೆ ಪೋಸ್ ನೀಡಿದ ಯುವತಿಯರು

ಆತ ಒಂದು ವಾರದವರೆಗೆ ರಕ್ತಸಿಕ್ತ ದೇಹಗಳ ಜತೆಗೆ ಮನೆಯಲ್ಲೇ ಇದ್ದ. ತಾಯಿಯ ಶವವನ್ನು ಚಾಕುವಿನಿಂದ ಇರಿದಿದ್ದಾನೆ. ಆತನನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?