Saudi Arabia Visa Rules: ಸೌದಿ ಅರೇಬಿಯಾಕ್ಕೆ ತೆರಳಲು ಭಾರತೀಯರು ವೀಸಾ ಪಡೆಯುವುದು ಇನ್ಮುಂದೆ ಸುಲಭ, ಹೊಸ ನಿಯಮ ಹೀಗಿದೆ

ಭಾರತೀಯರು ಸೌದಿ ಅರೇಬಿಯಾ(Saudi Arabia) ಕ್ಕೆ ಭೇಟಿ ನೀಡುವುದು ಇನ್ನುಮುಂದೆ ಮತ್ತಷ್ಟು ಸುಲಭವಾಗಲಿದೆ. ಸೌದಿ ಅರೇಬಿಯಾ ಸರ್ಕಾರವು ಭಾರತೀಯರು ವೀಸಾ(Visa) ಪಡೆಯಲು ಪೊಲೀಸ್ ವೆರಿಫಿಕೇಶನ್ ಸರ್ಟಿಫಿಕೇಟ್ ಅಂದರೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ಅನ್ನು ಸಲ್ಲಿಸುವ ಅಗತ್ಯವಿರುವುದಿಲ್ಲ.

Saudi Arabia Visa Rules: ಸೌದಿ ಅರೇಬಿಯಾಕ್ಕೆ ತೆರಳಲು ಭಾರತೀಯರು ವೀಸಾ ಪಡೆಯುವುದು ಇನ್ಮುಂದೆ ಸುಲಭ, ಹೊಸ ನಿಯಮ ಹೀಗಿದೆ
Passport
Follow us
TV9 Web
| Updated By: ನಯನಾ ರಾಜೀವ್

Updated on:Nov 18, 2022 | 7:29 AM

ಭಾರತೀಯರು ಸೌದಿ ಅರೇಬಿಯಾ(Saudi Arabia) ಕ್ಕೆ ಭೇಟಿ ನೀಡುವುದು ಇನ್ನುಮುಂದೆ ಮತ್ತಷ್ಟು ಸುಲಭವಾಗಲಿದೆ. ಸೌದಿ ಅರೇಬಿಯಾ ಸರ್ಕಾರವು ಭಾರತೀಯರು ವೀಸಾ(Visa) ಪಡೆಯಲು ಪೊಲೀಸ್ ವೆರಿಫಿಕೇಶನ್ ಸರ್ಟಿಫಿಕೇಟ್ ಅಂದರೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ಅನ್ನು ಸಲ್ಲಿಸುವ ಅಗತ್ಯವಿರುವುದಿಲ್ಲ. ಸೌದಿ ಅರೇಬಿಯಾದ ರಾಯಭಾರ ಕಚೇರಿಯು ನವೆಂಬರ್ 17 ರ ಗುರುವಾರ ಈ ಘೋಷಣೆ ಮಾಡಿದೆ.

ರಾಯಭಾರ ಕಚೇರಿ ಹೊರಡಿಸಿದ ಹೇಳಿಕೆಯ ಪ್ರಕಾರ, ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಪ್ರಯತ್ನಗಳ ಭಾಗವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಸೌದಿ ರಾಯಭಾರ ಕಚೇರಿ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದೆ.

ಟ್ವೀಟ್‌ನಲ್ಲಿ, “ಸೌದಿ ಅರೇಬಿಯಾ ಮತ್ತು ಭಾರತದ ನಡುವಿನ ಬಲವಾದ ಬಾಂಧವ್ಯ ಮತ್ತು ಕಾರ್ಯತಂತ್ರದ ಪಾಲುದಾರಿಕೆಯ ದೃಷ್ಟಿಯಿಂದ, ಭಾರತೀಯ ನಾಗರಿಕರಿಗೆ ಪೊಲೀಸ್ ಪರಿಶೀಲನಾ ಪ್ರಮಾಣಪತ್ರವನ್ನು (ಪಿಸಿಸಿ) ಸಲ್ಲಿಸುವುದರಿಂದ ವಿನಾಯಿತಿ ನೀಡಲು ನಿರ್ಧರಿಸಿದೆ. ಭಾರತೀಯ ಪ್ರಜೆಗಳು ಸೌದಿ ಅರೇಬಿಯಾಕ್ಕೆ ಪ್ರಯಾಣಿಸಲು ವೀಸಾ ಪಡೆಯಲು ಪಿಸಿಸಿ ಅಗತ್ಯವಿರುವುದಿಲ್ಲ ಎಂದು ಅದು ಹೇಳುತ್ತದೆ.

ಸೌದಿ ಅರೇಬಿಯಾದಲ್ಲಿ ಶಾಂತಿಯುತವಾಗಿ ವಾಸಿಸುವ ಎರಡು ದಶಲಕ್ಷಕ್ಕೂ ಹೆಚ್ಚು ಭಾರತೀಯ ನಾಗರಿಕರ ಕೊಡುಗೆಯನ್ನು ಶ್ಲಾಘಿಸುವುದಾಗಿ ರಾಯಭಾರ ಕಚೇರಿ ಹೇಳಿದೆ.

ಹೊಸದಿಲ್ಲಿಯಲ್ಲಿರುವ ಸೌದಿ ರಾಯಭಾರ ಕಚೇರಿಯು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದೆ, “ಸೌದಿ ಅರೇಬಿಯಾ ಮತ್ತು ಭಾರತದ ನಡುವಿನ ಬಲವಾದ ಸಂಬಂಧಗಳು ಮತ್ತು ಕಾರ್ಯತಂತ್ರದ ಪಾಲುದಾರಿಕೆಯ ದೃಷ್ಟಿಯಿಂದ, ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಸಲ್ಲಿಸುವುದರಿಂದ ಭಾರತೀಯ ಪ್ರಜೆಗಳಿಗೆ ವಿನಾಯಿತಿ ನೀಡಲು ರಾಜ್ಯವು ನಿರ್ಧರಿಸಿದೆ.

ಪಿಸಿಸಿ ಎಂದರೇನು? ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವು ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪಾಸ್‌ಪೋರ್ಟ್ ವಿಭಾಗವು ಭಾರತೀಯ ಪಾಸ್‌ಪೋರ್ಟ್ ಅರ್ಜಿದಾರರಿಗೆ ನೀಡಿದ ಪ್ರಮಾಣಪತ್ರವಾಗಿದೆ. ಈ ಪ್ರಮಾಣಪತ್ರವನ್ನು ಹೊಂದಿರುವ ವ್ಯಕ್ತಿಯು ವಂಚನೆ, ಹಲ್ಲೆ, ಕೊಲೆ ಮುಂತಾದ ಯಾವುದೇ ರೀತಿಯ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಈ ಪ್ರಮಾಣಪತ್ರವು ಹೇಳುತ್ತದೆ. ಅಲ್ಲದೆ, ನ್ಯಾಯಾಲಯದಲ್ಲಿ ಯಾವುದೇ ರೀತಿಯ ಪ್ರಕರಣಗಳು ಬಾಕಿ ಉಳಿದಿಲ್ಲ.

Published On - 7:28 am, Fri, 18 November 22

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ