ಹಜ್ ಯಾತ್ರಿಕರಿದ್ದ ಬಸ್ ಅಪಘಾತಕ್ಕೀಡಾಗಿ 20 ಮಂದಿ ಮೃತಪಟ್ಟಿದ್ದು, 29ಕ್ಕೂ ಹೆಚ್ಚಿನ ಜನರು ಗಾಯಗೊಂಡಿರುವ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ. ಮುಸ್ಲಿಮರಿಗೆ ಮೆಕ್ಕಾ ಮದೀನಾ ಅತ್ಯಂತ ಪವಿತ್ರ ಸ್ಥಳವಾಗಿದೆ. ಪ್ರತಿ ವರ್ಷ ಲಕ್ಷಾಂತರ ಜನರು ಇಲ್ಲಿಗೆ ಹೋಗುತ್ತಾರೆ. ಸೋಮವಾರ (ಮಾರ್ಚ್ 27) ಪವಿತ್ರ ನಗರವಾದ ಮೆಕ್ಕಾಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಸೇತುವೆಗೆ ಡಿಕ್ಕಿ ಹೊಡೆದಿದೆ ಎಂದು ಸೌದಿ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.
ಘರ್ಷಣೆಯ ನಂತರ, ಬಸ್ಗೆ ಬೆಂಕಿ ಹೊತ್ತಿಕೊಂಡಿತ್ತು, ಇದರಲ್ಲಿ 20 ಜನರು ಸಾವನ್ನಪ್ಪಿದ್ದರು ಮತ್ತು ಎರಡು ಡಜನ್ಗಿಂತ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಇಸ್ಲಾಂ ಧರ್ಮದ ಪವಿತ್ರ ನಗರಗಳಾದ ಮೆಕ್ಕಾ ಮತ್ತು ಮದೀನಾಕ್ಕೆ ಯಾತ್ರಾರ್ಥಿಗಳನ್ನು ಕೊಂಡೊಯ್ಯುತ್ತಿರುವಾಗ ದಕ್ಷಿಣ ಪ್ರಾಂತ್ಯದ ಅಸಿರ್‌ನಲ್ಲಿ ಈ ಘಟನೆ ಸಂಭವಿಸಿದೆ.
ಸಾವಿನ ಸಂಖ್ಯೆ 20 ಕ್ಕೆ ತಲುಪಿದೆ
ರಂಜಾನ್ ತಿಂಗಳಿನಲ್ಲಿ ಸಾಮಾನ್ಯವಾಗಿ ಮುಸ್ಲಿಮರು ಹಜ್ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಈ ಅಪಘಾತದಲ್ಲಿ ಸಾವಿನ ಸಂಖ್ಯೆ 20 ಕ್ಕೆ ತಲುಪಿದೆ ಮತ್ತು ಒಟ್ಟು ಗಾಯಗೊಂಡವರ ಸಂಖ್ಯೆ ಸುಮಾರು 29 ಎಂದು ರಾಜ್ಯ-ಸಂಯೋಜಿತ ಅಲ್-ಎಖ್ಬರಿಯಾ ಚಾನೆಲ್ ತಿಳಿಸಿದೆ. ವರದಿಯ ಪ್ರಕಾರ, ಬಸ್ ಅಪಘಾತದಲ್ಲಿ ಮೃತಪಟ್ಟವರು ವಿವಿಧ ದೇಶಗಳ ನಿವಾಸಿಗಳಾಗಿದ್ದಾರೆ.
ಅಪಘಾತ ಹೇಗೆ ಸಂಭವಿಸಿತು
ಒಂದು ಚಾನೆಲ್ ತನ್ನ ವರದಿಯಲ್ಲಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಿದರೆ, ಇನ್ನೊಂದು ಚಾನೆಲ್ ಒಕಾಜ್ ಬ್ರೇಕ್ ವೈಫಲ್ಯದಿಂದ ಅಪಘಾತ ಸಂಭವಿಸಿದೆ ಎಂದು ಹೇಳಿದೆ. ಸೇತುವೆಗೆ ಡಿಕ್ಕಿ ಹೊಡೆದ ನಂತರ ಬಸ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ.
ಅಕ್ಟೋಬರ್ 2019 ರಲ್ಲಿ, ಮದೀನಾದಲ್ಲಿ ಬಸ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಸುಮಾರು 35 ವಿದೇಶಿಗರು ಸಾವನ್ನಪ್ಪಿದ್ದರು ಮತ್ತು ನಾಲ್ವರು ಗಾಯಗೊಂಡಿದ್ದರು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ