AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಕ್ಕಾ, ಮದೀನಾ ಗುರಿಯಾಗಿಸಿ ದಾಳಿ ಎಂದ ಸೌದಿ ಅರೇಬಿಯಾ: ಆರೋಪ ನಿರಾಕರಿಸಿದ ಹೌತಿಗಳು

ಮೆಕ್ಕಾ ಮತ್ತು ಮದೀನಾ ಪ್ರದೇಶಗಳತ್ತ ಬಂದ ಹೌತಿಗಳ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ತಡೆದಿರುವುದಾಗಿ ಸೌದಿ ಅರೇಬಿಯಾ ತಿಳಿಸಿದೆ. ಆದರೆ ಪವಿತ್ರ ನಗರಗಳನ್ನು ಗುರಿಯಾಗಿಸಿದ ಆರೋಪವನ್ನು ಹೌತಿಗಳು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಸಂಘರ್ಷ ತೀವ್ರಗೊಳ್ಳುತ್ತಿರುವ ನಡುವೆಯೇ, ಸೌದಿ ಬೆಂಬಲಿತ ಯೆಮನ್ ಸರ್ಕಾರವೂ ಶನಿವಾರ ಹೌತಿಗಳು ದಕ್ಷಿಣದ ಬಂದರು ನಗರ ಅಡೆನ್‌ನಲ್ಲಿರುವ ಕರಾವಳಿ ಕಾವಲು ಪಡೆಗಳ ನೆಲೆಗಳ ಮೇಲೆ ಮೂರು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದ್ದಾರೆ ಎಂದು ಆರೋಪಿಸಿದೆ.

ಮೆಕ್ಕಾ, ಮದೀನಾ ಗುರಿಯಾಗಿಸಿ ದಾಳಿ ಎಂದ ಸೌದಿ ಅರೇಬಿಯಾ: ಆರೋಪ ನಿರಾಕರಿಸಿದ ಹೌತಿಗಳು
ಸಾಂದರ್ಭಿಕ ಚಿತ್ರ
ಪ್ರಸನ್ನ ಹೆಗಡೆ
|

Updated on:Oct 25, 2026 | 8:03 AM

Share

ರಿಯಾದ್, ಅಕ್ಟೋಬರ್​​ 25: ಮೆಕ್ಕಾ ಅಲ್-ಮುಕರ್ರಮಾ ಮತ್ತು ಮದೀನಾ ಅಲ್-ಮುನವ್ವರಾ ಪ್ರದೇಶಗಳತ್ತ ಬರುತ್ತಿದ್ದ ಕ್ಷಿಪ್ಪಳಿಗಳನ್ನು ತಡೆದಿರೋದಾಗಿ ಸೌದಿ ಅರೇಬಿಯಾ ಹೇಳಿಕೊಂಡಿದೆ. ಯೆಮನ್‌ನ ಇರಾನ್ ಬೆಂಬಲಿತ ಹೌತಿಗಳು ಉಡಾಯಿಸಿದ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ತಡೆದ ಬಳಿಕ, ಅವುಗಳ ಅವಶೇಷಗಳು ಈ ಪ್ರದೇಶಗಳಲ್ಲಿ ಬಿದ್ದಿರುವ ಬಗ್ಗೆ ಕ್ರಮ ಕೈಗೊಂಡಿರುವುದಾಗಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ ಇಲಾಖೆ ಮಾಹಿತಿ ನೀಡಿದೆ. ಮೆಕ್ಕಾದ ಹೊರವಲಯದ ವಾದಿ ಮುಘಮಾಸ್, ಜೆಡ್ಡಾದ ಅಲ್-ನುಝಾ ಪ್ರದೇಶ, ತಾಯಿಫ್‌ನ ವಾದಿ ಜಲೀಲ್ ಮತ್ತು ರಾಬಿಘ್‌ನ ಜನವಸತಿಯಿಲ್ಲದ ಪ್ರದೇಶದಲ್ಲಿ ಕ್ಷಿಪಣಿಗಳ ಅವಶೇಷಗಳು ಬಿದ್ದಿವೆ ಎಂದು ಇಲಾಖೆ ತಿಳಿಸಿದೆ.

ಸೌದಿ ಅರೇಬಿಯಾ ಆರೋಪ ನಿರಾಕರಿಸಿದ ಹೌತಿಗಳು

ಆದರೆ, ಇಸ್ಲಾಂ ಧರ್ಮದ ಎರಡು ಪವಿತ್ರ ನಗರಗಳಾದ ಮೆಕ್ಕಾ ಮತ್ತು ಮದೀನಾವನ್ನು ಗುರಿಯಾಗಿಸಿಕೊಂಡಿರುವ ಆರೋಪವನ್ನು ಹೌತಿಗಳು ನಿರಾಕರಿಸಿದ್ದಾರೆ. ನಮ್ಮ ಪಡೆಗಳು ಮೆಕ್ಕಾ ಮತ್ತು ಮದೀನಾದ ಪವಿತ್ರ ಪ್ರದೇಶಗಳತ್ತ ದಾಳಿ ನಡೆಸಿವೆ ಎಂದು ಸೌದಿ ಶತ್ರು ರಾಷ್ಟ್ರ ಮಾಡುತ್ತಿರುವ ಪ್ರಚಾರ ಸಂಪೂರ್ಣ ಸುಳ್ಳು ಎಂದು ಹೌತಿ ಸೇನಾ ವಕ್ತಾರ ಯಾಹ್ಯಾ ಸರೀ ಹೇಳಿದ್ದಾರೆ.

ಇದನ್ನೂ ಓದಿ: ಸೌದಿ ಅರೇಬಿಯಾ ವಿಮಾನ ನಿಲ್ದಾಣ, ಅರಾಮ್ಕೊ ತೈಲ ಘಟಕದ ಮೇಲೂ ವೈಮಾನಿಕ ದಾಳಿ, 3 ಸಾವು, ಭಾರತೀಯರಿಗೆ ಗಾಯ

ಇದಕ್ಕೂ ಮುನ್ನ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ ಇಲಾಖೆ, ಮೆಕ್ಕಾ ಸೇರಿದಂತೆ ಪಶ್ಚಿಮದ ನಾಲ್ಕು ಪ್ರಾಂತ್ಯಗಳಲ್ಲಿ ಸಂಭಾವ್ಯ ಅಪಾಯದ ಬಗ್ಗೆ ಎಚ್ಚರಿಕೆ ನೀಡಿತ್ತು. ಈ ಪ್ರಾಂತ್ಯಗಳ ನಿವಾಸಿಗಳು ಸಮೀಪದ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿತ್ತು. ಶುಕ್ರವಾರ ಮತ್ತು ಶನಿವಾರ ಸೌದಿ ಅರೇಬಿಯಾದ ಹಲವು ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಹೌತಿಗಳು ಹೇಳಿದ ಕೆಲವೇ ಗಂಟೆಗಳ ಬಳಿಕ ಈ ಎಚ್ಚರಿಕೆ ಹೊರಬಿದ್ದಿತ್ತು. ಮೂರು ವಿಮಾನ ನಿಲ್ದಾಣಗಳು, ಎರಡು ತೈಲ ಘಟಕಗಳು, ಒಂದು ಪೈಪ್‌ಲೈನ್ ಮತ್ತು ವಾಯುನೆಲೆಯನ್ನು ಗುರಿಯಾಗಿಸಿಕೊಂಡಿರುವುದಾಗಿ ಹೌತಿಗಳು ಹೇಳಿಕೊಂಡಿದ್ದರು.

ಸಂಘರ್ಷ ತೀವ್ರಗೊಳ್ಳುತ್ತಿರುವ ನಡುವೆಯೇ, ಸೌದಿ ಬೆಂಬಲಿತ ಯೆಮನ್ ಸರ್ಕಾರವೂ ಶನಿವಾರ ಹೌತಿಗಳು ದಕ್ಷಿಣದ ಬಂದರು ನಗರ ಅಡೆನ್‌ನಲ್ಲಿರುವ ಕರಾವಳಿ ಕಾವಲು ಪಡೆಗಳ ನೆಲೆಗಳ ಮೇಲೆ ಮೂರು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದ್ದಾರೆ ಎಂದು ಆರೋಪಿಸಿದೆ. ಸೌದಿ ನೇತೃತ್ವದ ಮೈತ್ರಿಕೂಟವು ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಯೆಮನ್ ಸರ್ಕಾರವನ್ನು ಬೆಂಬಲಿಸುತ್ತಿದ್ದರೆ, ಹೌತಿಗಳು ಯೆಮನ್‌ನ ರಾಜಧಾನಿ ಸನಾವನ್ನು ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದಾರೆ ಎಂಬುದಿಲ್ಲಿ ಗಮನಾರ್ಹ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 8:01 am, Sun, 25 October 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ