AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Plane Crash: ನೇಪಾಳದಲ್ಲಿ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನ, 18 ಮಂದಿ ಸಾವು

ನೇಪಾಳದ ಕಠ್ಮಂಡುವಿನಲ್ಲಿ ಟೇಕ್​ ಆಪ್​ ಆಗುವ ವೇಳೆ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನಗೊಂಡಿದೆ.

Nepal Plane Crash: ನೇಪಾಳದಲ್ಲಿ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನ, 18 ಮಂದಿ ಸಾವು
ವಿಮಾನ ಪತನ
ನಯನಾ ರಾಜೀವ್
|

Updated on:Jul 24, 2024 | 1:02 PM

Share

ನೇಪಾಳದ ಕಠ್ಮಂಡುವಿನಲ್ಲಿ ಟೇಕ್​ ಆಪ್​ ಆಗುವ ವೇಳೆ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನಗೊಂಡಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಇಲ್ಲಿಯವರೆಗಿನ ಮಾಹಿತಿ ಪ್ರಕಾರ, ಸೂರ್ಯ ಏರ್‌ಲೈನ್ಸ್ ವಿಮಾನವು ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪೊಖರಾಗೆ ಹಾರುತ್ತಿತ್ತು. 18 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ವಿಮಾನದಲ್ಲಿ ಸಾಮಾನ್ಯ ಪ್ರಯಾಣಿಕರು ಇರಲಿಲ್ಲ, ಆದರೆ ತಾಂತ್ರಿಕ ತಂಡದ 19 ಸದಸ್ಯರು ವಿಮಾನದಲ್ಲಿದ್ದರು. ಸಾವು ನೋವುಗಳ ಬಗ್ಗೆ ಇನ್ನೂ ಮಾಹಿತಿ ಬಂದಿಲ್ಲ. ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ.

ಪತನದ ನಂತರ ವಿಮಾನದಿಂದ ಹೊಗೆ ಬರುತ್ತಿರುವುದು ಕಂಡುಬಂದಿದೆ ಎಂದು ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮಾಹಿತಿ ಅಧಿಕಾರಿ ಜ್ಞಾನೇಂದ್ರ ಭುಲ್ ಹೇಳಿರುವುದಾಗಿ ಕಠ್ಮಂಡು ಪೋಸ್ಟ್ ವರದಿ ಮಾಡಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

ನೇಪಾಳದ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಶೌರ್ಯ ಏರ್‌ಲೈನ್ಸ್ ವಿಮಾನ ಟೇಕಾಫ್ ಆಗುವ ವೇಳೆ ಪತನಗೊಂಡಿದೆ.

ಬೆಳಗ್ಗೆ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ ಪೋಖರಾ ವಿಮಾನದಲ್ಲಿ ವಿಮಾನ ಸಿಬ್ಬಂದಿ ಸೇರಿದಂತೆ 19 ಮಂದಿ ಇದ್ದರು ಎಂದು ಟಿಐಎ ವಕ್ತಾರ ಪ್ರೇಮನಾಥ್ ಠಾಕೂರ್ ತಿಳಿಸಿದ್ದಾರೆ. ಅಪಘಾತ ಸ್ಥಳದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:50 am, Wed, 24 July 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​