SCO Summit 2022: ಪ್ರಧಾನಿ ಮೋದಿಯನ್ನು ಸ್ವಾಗತಿಸಿದ ಉಜ್ಬೆಕ್ ಅಧ್ಯಕ್ಷ, ವಿಶ್ವ ನಾಯಕರ ಜತೆ ಮೋದಿ ಮಹತ್ವದ ಸಭೆ
SCO Summit: ಎಸ್‌ಸಿಒ ಶೃಂಗಸಭೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉಜ್ಬೆಕ್ ಅಧ್ಯಕ್ಷ ಶವ್ಕತ್ ಮಿರ್ಜಿಯೋವ್ ಸ್ವಾಗತಿಸಿದರು. ಉಜ್ಬೇಕಿಸ್ತಾನ್‌ನ ಸಮರ್‌ಕಂಡ್‌ನಲ್ಲಿ ಇಂದು ಪ್ರಾರಂಭವಾಗುವ ಮೊದಲು ವಾಯು ಗಸ್ತು ನಡೆಸಲಾಗುತ್ತಿದೆ. SCO ಶೃಂಗಸಭೆಗಾಗಿ ಪ್ರಧಾನಿ ಮೋದಿ ನಿನ್ನೆ ರಾತ್ರಿ ಉಜ್ಬೇಕಿಸ್ತಾನ್‌ನ ಸಮರ್‌ಕಂಡ್‌ಗೆ ಬಂದಿಳಿದರು.
ಉಜ್ಬೇಕಿಸ್ತಾನ್: ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉಜ್ಬೆಕ್ ಅಧ್ಯಕ್ಷ ಶವ್ಕತ್ ಮಿರ್ಜಿಯೋವ್ ಸ್ವಾಗತಿಸಿದರು. ಉಜ್ಬೇಕಿಸ್ತಾನ್‌ನ ಸಮರ್‌ಕಂಡ್‌ನಲ್ಲಿ ಇಂದು ಪ್ರಾರಂಭವಾಗುವ ಮೊದಲು ವಾಯು ಗಸ್ತು ನಡೆಸಲಾಗುತ್ತಿದೆ. SCO ಶೃಂಗಸಭೆಗಾಗಿ ಪ್ರಧಾನಿ ಮೋದಿ ನಿನ್ನೆ ರಾತ್ರಿ ಉಜ್ಬೇಕಿಸ್ತಾನ್‌ನ ಸಮರ್‌ಕಂಡ್‌ಗೆ ಬಂದಿಳಿದರು.
SCO ಶೃಂಗಸಭೆಯು ಪ್ರಾದೇಶಿಕ ಭದ್ರತಾ ಸವಾಲುಗಳು, ವ್ಯಾಪಾರ ಮತ್ತು ಇಂಧನ ಪೂರೈಕೆಗಳನ್ನು ಉತ್ತೇಜಿಸುವುದು, ಇತರ ವಿಷಯಗಳ ಬಗ್ಗೆ ಮಾತುಕತೆ ನಡೆಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು SCO ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು ಉಜ್ಬೇಕಿಸ್ತಾನ್ ಅಧ್ಯಕ್ಷರು ಮತ್ತು ಶೃಂಗಸಭೆಯಲ್ಲಿ ಭಾಗವಹಿಸುವ ಇತರ ಕೆಲವು ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
PM @narendramodi receives a warm welcome at the Congress Centre, Samarkand, Uzbekistan#SCOSummit2022 pic.twitter.com/yBAHsaqIvr
— PIB India (@PIB_India) September 16, 2022
ಪ್ರಾದೇಶಿಕ ಶಾಂತಿ ಮತ್ತು ಭದ್ರತೆ, ವ್ಯಾಪಾರ ಮತ್ತು ಸಂಪರ್ಕ, ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸೇರಿದಂತೆ ಪ್ರಾದೇಶಿಕ ಮತ್ತು ಅಂತರಾಷ್ಟ್ರೀಯ ವಿಷಯಗಳ ಕುರಿತು ಚರ್ಚೆಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ SCO ಸದಸ್ಯ ರಾಷ್ಟ್ರಗಳ ನಾಯಕರ ಚರ್ಚಿಸಲಿದ್ದಾರೆ ಎಂದು MEA ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.
Published On - 12:09 pm, Fri, 16 September 22