AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SCO Summit 2023: ಪಾಕಿಸ್ತಾನ ಪಿಎಂ ಸಮ್ಮುಖದಲ್ಲೇ ಭಯೋತ್ಪಾದನೆ ಬಗ್ಗೆ ಪ್ರಸ್ತಾಪಿಸಿ ಪ್ರಧಾನಿ ಮೋದಿ ಟಾಂಗ್

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾಷಣ ಕೇಳುತ್ತಿದ್ದಂತೆಯೇ, ಭಯೋತ್ಪಾದನೆ ವಿಚಾರ ಪ್ರಸ್ತಾಪಿಸಿದ ಮೋದಿ, ಉಗ್ರವಾದಕ್ಕೆ ಹಣಕಾಸು ನೆರವು ಒದಗಿಸುವುದನ್ನು ಎದುರಿಸಲು ನಿರ್ಣಾಯಕ ಕ್ರಮದ ಅಗತ್ಯವಿದೆ ಎಂದು ಹೇಳಿದ್ದಾರೆ.

SCO Summit 2023: ಪಾಕಿಸ್ತಾನ ಪಿಎಂ ಸಮ್ಮುಖದಲ್ಲೇ ಭಯೋತ್ಪಾದನೆ ಬಗ್ಗೆ ಪ್ರಸ್ತಾಪಿಸಿ ಪ್ರಧಾನಿ ಮೋದಿ ಟಾಂಗ್
ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮಾತನಾಡಿದರು
Ganapathi Sharma
|

Updated on: Jul 04, 2023 | 10:59 PM

Share

ಹೊಸದಿಲ್ಲಿ: ಗಡಿಯಾಚೆಗಿನ ಭಯೋತ್ಪಾದನೆಯನ್ನು ಬೆಂಬಲಿಸುವ ದೇಶಗಳನ್ನು ಎಲ್ಲ ದೇಶಗಳು ಒಟ್ಟಾಗಿ ವಿರೋಧಿಸಬೇಕಿದೆ. ಭಯೋತ್ಪಾದನೆ ವಿರುದ್ಧ ಎಲ್ಲಾ ದೇಶಗಳು ಒಟ್ಟಾಗಿ ಹೋರಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು. ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸಿ ಮಾತನಾಡಿದ ಅವರು, ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಎದುರೇ ಈ ಮಾತುಗಳನ್ನಾಡಿದ್ದಾರೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾಷಣ ಕೇಳುತ್ತಿದ್ದಂತೆಯೇ, ಭಯೋತ್ಪಾದನೆ ವಿಚಾರ ಪ್ರಸ್ತಾಪಿಸಿದ ಮೋದಿ, ಉಗ್ರವಾದಕ್ಕೆ ಹಣಕಾಸು ನೆರವು ಒದಗಿಸುವುದನ್ನು ಎದುರಿಸಲು ನಿರ್ಣಾಯಕ ಕ್ರಮದ ಅಗತ್ಯವಿದೆ ಎಂದು ಹೇಳಿದ್ದಾರೆ.

ಭಯೋತ್ಪಾದನೆಯು ಪ್ರಾದೇಶಿಕ ಮತ್ತು ಜಾಗತಿಕ ಶಾಂತಿಗೆ ಅಪಾಯವನ್ನು ಉಂಟುಮಾಡುತ್ತದೆ. ಇಂತಹ ಬೆದರಿಕೆಯನ್ನು ಎದುರಿಸಲು ಪರಸ್ಪರ ಸಹಕಾರವನ್ನು ವಿಸ್ತರಣೆ ಮಾಡಬೇಕಿದೆ ಎಂದು ಪ್ರಧಾನಿ ಕರೆ ನೀಡಿದ್ದಾರೆ.

ಭಯೋತ್ಪಾದನೆಯ ವಿರುದ್ಧ ನಾವು ಒಟ್ಟಾಗಿ ಹೋರಾಡಬೇಕು. ಅದು ಯಾವುದೇ ರೂಪದಲ್ಲಿ ಇರಬಹುದು ಮತ್ತು ಯಾವುದೇ ಅಭಿವ್ಯಕ್ತಿಯಾಗಿರಬಹುದು ಎಂದು ಅವರು ಹೇಳಿದ್ದಾರೆ. ಭಯೋತ್ಪಾದನೆ ವಿರುದ್ಧ ಹೋರಾಡುವಲ್ಲಿ ಯಾವುದೇ ದ್ವಂದ್ವ ನೀತಿ ಇರಬಾರದು ಎಂದು ಪ್ರತಿಪಾದಿಸಿದ್ದಾರೆ.

ಮೋದಿ ಅವರು ಪಾಕಿಸ್ತಾನದ ಹೆಸರನ್ನು ನೇರವಾಗಿ ಹೇಳದಿದ್ದರೂ, ನೆರೆಯ ದೇಶವನ್ನೇ ಉದ್ದೇಶಿಸಿ ಹೇಳಿದ್ದು ಸ್ಪಷ್ಟವಾಗಿತ್ತು.

ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಆಹಾರ, ಇಂಧನ ಮತ್ತು ರಸಗೊಬ್ಬರ ಪೂರೈಕೆಗೆ ಜಾಗತಿಕ ಸವಾಲುಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಅಫ್ಘಾನಿಸ್ತಾನದ ಪರಿಸ್ಥಿತಿಯ ಕುರಿತು ಉಲ್ಲೇಖಿಸಿ, ಆ ದೇಶದ ಬಗ್ಗೆ ಭಾರತದ ಕಾಳಜಿ ಮತ್ತು ನಿರೀಕ್ಷೆಗಳು ಹೆಚ್ಚಿನ ಶಾಂಘೈ ಸಹಕಾರ ಒಕ್ಕೂಟ ಸದಸ್ಯ ದೇಶಗಳಂತೆಯೇ ಇದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: SCO Summit 2023: ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಎಸ್​ಸಿಒ ಶೃಂಗಸಭೆ, ಒಕ್ಕೂಟಕ್ಕೆ ಮತ್ತೊಂದು ದೇಶದ ಸೇರ್ಪಡೆ

ಭಾರತದ ಅಧ್ಯಕ್ಷತೆಯಲ್ಲಿ ನಡೆದ ವರ್ಚುವಲ್ ಶೃಂಗಸಭೆಯಲ್ಲಿ ಕಜಕಿಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್, ಉಜ್ಬೇಕಿಸ್ತಾನ್ ಮತ್ತು ಇರಾನ್ ನಾಯಕರು ಭಾಗವಹಿಸಿದ್ದರು.

ಶಾಂಘೈ ಸಹಕಾರ ಸಂಸ್ಥೆಯು ಪೂರ್ವ ಏಷ್ಯಾದಿಂದ ಹಿಂದೂ ಮಹಾಸಾಗರದವರೆಗಿನ ಪಾಶ್ಚಿಮಾತ್ಯ ಮೈತ್ರಿಗಳನ್ನು ಎದುರಿಸಲು ರಷ್ಯಾ ಮತ್ತು ಚೀನಾ ಸ್ಥಾಪಿಸಿದ ಭದ್ರತಾ ಒಕ್ಕೂಟವಾಗಿದೆ. ಈ ಗುಂಪು ನಾಲ್ಕು ಮಧ್ಯ ಏಷ್ಯಾದ ರಾಷ್ಟ್ರಗಳಾದ ಕಜಕಿಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್, ರಷ್ಯಾದ ಪ್ರಭಾವವು ಆಳವಾಗಿರುವ ಎಲ್ಲಾ ಹಿಂದಿನ ಸೋವಿಯತ್ ಗಣರಾಜ್ಯಗಳನ್ನು ಒಳಗೊಂಡಿದೆ. ಪಾಕಿಸ್ತಾನ 2017 ರಲ್ಲಿ ಸದಸ್ಯತ್ವ ಪಡೆದಿತ್ತು.

ಎಸ್​​​ಸಿಒಕ್ಕೆ ಇರಾನ್ ಸೇರ್ಪಡೆ

ಇರಾನ್ ದೇಶವು ಮಂಗಳವಾರ ಅಧಿಕೃತವಾಗಿ ಶಾಂಘೈ ಸಹಕಾರ ಒಕ್ಕೂಟಕ್ಕೆ ಸೇರ್ಪಡೆಯಾಗಿದೆ. ಇದಕ್ಕಾಗಿ ಇರಾನ್ ದೇಶವನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ