AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ, ಪುಟಿನ್ ಸ್ನೇಹ; ಪ್ರೇಕ್ಷಕನಾಗಿ ನಿಂತು ನೋಡುತ್ತಿರುವ ಪಾಕ್ ಪ್ರಧಾನಿ; ಫೋಟೋ ವೈರಲ್

Pak PM Shehbaz Sharif watches as Modi and Putin passes by: ಎಸ್​ಸಿಒ ಶೃಂಗಸಭೆಯಲ್ಲಿ ಭಾರತ, ಚೀನಾ, ರಷ್ಯಾ ದೇಶಗಳು ಪರಸ್ಪರ ಕೈ ಹಿಡಿದು ಶಕ್ತಿ ಪ್ರದರ್ಶನ ತೋರಿವೆ. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ ಮೊದಲಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಪುಟಿನ್ ಮತ್ತು ಮೋದಿ ಅವರ ಮಧ್ಯೆ ಎಂದಿನಂತೆ ಆಪ್ತತೆ ಕಂಡಿತು. ಅವರಿಬ್ಬರು ಮಾತನಾಡುತ್ತಾ ಹಾದು ಹೋಗುವುದನ್ನು ಪಾಕ್ ಪ್ರಧಾನಿ ನೋಡುತ್ತಿರುವ ದೃಶ್ಯ ಕಾಣಿಸಿತು.

ಸುಗ್ಗನಹಳ್ಳಿ ವಿಜಯಸಾರಥಿ
|

Updated on:Sep 01, 2025 | 12:52 PM

Share

ಟಿಯಾಂಜಿನ್, ಸೆಪ್ಟೆಂಬರ್ 1: ಚೀನಾದ ಟಿಯಾಂಜಿನ್​ನಲ್ಲಿ ನಡೆಯುತ್ತಿರುವ ಎಸ್​ಸಿಒ ಶೃಂಗಸಭೆಯು (SCO summt) ಹಲವು ಕುತೂಹಲಕಾರಿ ಘಟನೆಗಳಿಗೆ ಸಾಕ್ಷಿಯಾಗಿವೆ. ಭಾರತ, ಚೀನಾ, ರಷ್ಯಾ ಈ ತ್ರಿಶಕ್ತಿಗಳ ಸಮಾಗಮಕ್ಕೆ ಈ ಸಭೆ ವೇದಿಕೆಯಾಗಿದೆ. ಹಲವು ವರ್ಷಗಳ ಬಳಿಕ ನರೇಂದ್ರ ಮೋದಿ (Narendra Modi) ಅವರು ಚೀನಾಗೆ ಭೇಟಿ ನೀಡಿದ್ದಾರೆ. ಅಮೆರಿಕದ ಟ್ಯಾರಿಫ್ ನೀತಿಗೆ ಪ್ರತಿರೋಧ ತೋರುತ್ತಿರುವ ಭಾರತವನ್ನು ತನ್ನೆಡೆ ಸೆಳೆಯಲು ಚೀನಾ ಮಾಡುತ್ತಿರುವ ಪ್ರಯತ್ನ ಸ್ಪಷ್ಟವಾಗಿದೆ. ಇದೇ ವೇಳೆ, ಎಸ್​ಸಿಒ ಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಆಪ್ತತೆ ಬಹಳ ಸ್ಪಷ್ಟವಾಗಿ ಗೋಚರವಾಯಿತು.

ವ್ಲಾದಿಮಿರ್ ಪುಟಿನ್ ಮತ್ತು ನರೇಂದ್ರ ಮೋದಿ ಮಾತನಾಡುತ್ತಾ ಹೋಗುವುದನ್ನು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ನಿಂತು ನೋಡುತ್ತಿದ್ದ ದೃಶ್ಯವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಹಂಚಿಕೆ ಆಗುತ್ತಿದೆ. ಭಾರತ, ಚೀನಾ, ರಷ್ಯಾ ಮುಖ್ಯಸ್ಥರು ಒಂದೆಡೆ ಗುಂಪುಗೂಡಿ ಹರಟೆ ಹೊಡೆಯುತ್ತಿರುವ ದೃಶ್ಯವೂ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಎಸ್​ಸಿಒ ಸಮಿಟ್​ನಲ್ಲಿ ಭಯೋತ್ಪಾದನೆ ವಿರುದ್ಧ ವ್ಯಕ್ತವಾದ ಖಂಡನೆ; ಭಾರತದ ನಿಲುವಿಗೆ ಬೆಂಬಲ, ಪಾಕಿಸ್ತಾನಕ್ಕೆ ಪರೋಕ್ಷ ಮುಖಭಂಗ

ಪ್ರಧಾನಿ ನರೇಂದ್ರ ಮೋದಿ ಅವರು ತಾವು ವ್ಲಾದಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿದ ಸಂದರ್ಭದ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಧ್ಯಕ್ಷ ಪುಟಿನ್ ಅವರನ್ನು ಭೇಟಿ ಮಾಡುವುದು ಖುಷಿ ನೀಡುತ್ತದೆ ಎಂದು ಮೋದಿ ಹೇಳಿದ್ದಾರೆ.

ನರೇಂದ್ರ ಮೋದಿ ಅವರ ಎಕ್ಸ್ ಪೋಸ್ಟ್

ಈ ಶಂಗಸಭೆಯ ಜೊತೆ ಜೊತೆಯಲ್ಲೇ ಭಾರತವು ಚೀನಾದೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದೆ. ನರೇಂದ್ರ ಮೋದಿ ಮತ್ತು ಷಿ ಜಿನ್​ಪಿಂಗ್ ಮಧ್ಯೆ ಮಾತುಕತೆ ನಡೆಯಿತು. ಇವತ್ತು ಎಸ್​ಸಿಒ ಸಮಿಟ್ ಬಳಿಕ ನರೇಂದ್ರ ಮೋದಿ ಮತ್ತು ಪುಟಿನ್ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ಸಭೆ ಬಳಿಕ ಈ ಮಾತುಕತೆಗೆ ಇಬ್ಬರೂ ಒಂದೇ ಕಾರಿನಲ್ಲಿ ಒಟ್ಟಿಗೆ ತೆರಳಿದರು.

ಇದನ್ನೂ ಓದಿ: ದ್ವಿಪಕ್ಷೀಯ ಮಾತುಕತೆಯಲ್ಲಿ ಭಾರತದಿಂದ ಭಯೋತ್ಪಾದನೆ ವಿಚಾರ; ಚೀನಾದಿಂದಲೂ ಬೆಂಬಲ

ಈ ಎಸ್​ಸಿಒ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆಯನ್ನು ಬಲವಾಗಿ ಖಂಡಿಸಿದರು. ಪಹಲ್ಗಾಂ ಉಗ್ರ ದಾಳಿ ಘಟನೆಯನ್ನು ಉಲ್ಲೇಖಿಸಿ, ಭಯೋತ್ಪಾದನೆ ವಿಚಾರದಲ್ಲಿ ವಿವಿಧ ರಾಷ್ಟ್ರಗಳ ದ್ವಂದ್ವ ನಿಲುವನ್ನು ಪ್ರಶ್ನಿಸಿದರು. ಈ ಸಮಿಟ್​ನಲ್ಲಿ ಭಾರತದ ಅಭಿಪ್ರಾಯಕ್ಕೆ ಸದಸ್ಯ ರಾಷ್ಟ್ರಗಳು ಬೆಂಬಲ ನೀಡಿವೆ. ಟಿಯಾಂಜಿನ್ ಡಿಕ್ಲರೇಶನ್​ನಲ್ಲಿ ಪಹಲ್ಗಾಂ ದಾಳಿ ಘಟನೆಯನ್ನು ಖಂಡಿಸಲಾಗಿದೆ. ಈ ದಾಳಿಗೆ ಬೆಂಬಲ ನೀಡಿದವರಿಗೆ ಶಾಸ್ತಿಯಾಗಬೇಕೆಂದು ಆಗ್ರಹಿಸಲಾಗಿದೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:37 pm, Mon, 1 September 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು