AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಯಾಟಲ್ ಫುಡ್ ಫೆಸ್ಟಿವಲ್‌ನಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿ: ಇಬ್ಬರು ಸಾವು, ಐವರಿಗೆ ಗಂಭೀರ ಗಾಯ

ವಾಷಿಂಗ್ಟನ್‌ನ ಸಿಯಾಟಲ್ ಆಹಾರ ಉತ್ಸವದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟು, ಐವರಿಗೆ ಗಂಭೀರ ಗಾಯಗಳಾಗಿವೆ. 'ಬೈಟ್ ಆಫ್ ಸಿಯಾಟಲ್' ಉತ್ಸವದ ವೇಳೆ ಈ ದುರಂತ ಸಂಭವಿಸಿದ್ದು, ಸಾರ್ವಜನಿಕರಲ್ಲಿ ಭೀತಿ ಮೂಡಿಸಿದೆ. ಅಮೆರಿಕದಲ್ಲಿ ಗನ್ ಹಿಂಸೆ ಪ್ರಕರಣಗಳು ಹೆಚ್ಚುತ್ತಿದ್ದು, ಬಂದೂಕು ನಿಯಂತ್ರಣ ಕಾನೂನುಗಳನ್ನು ಬಲಪಡಿಸುವಂತೆ ಸಾರ್ವಜನಿಕರಿಂದ ಒತ್ತಡ ಹೆಚ್ಚುತ್ತಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಿಯಾಟಲ್ ಫುಡ್ ಫೆಸ್ಟಿವಲ್‌ನಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿ: ಇಬ್ಬರು ಸಾವು, ಐವರಿಗೆ ಗಂಭೀರ ಗಾಯ
ಗುಂಡಿನ ದಾಳಿ
ನಯನಾ ರಾಜೀವ್
|

Updated on: Jul 27, 2026 | 10:31 AM

Share

ವಾಷಿಂಗ್ಟನ್, ಜುಲೈ 27: ಅಮೆರಿಕದ ವಾಷಿಂಗ್ಟನ್ ರಾಜ್ಯದ ಸಿಯಾಟಲ್ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಸಿದ್ಧ ಆಹಾರ ಉತ್ಸವದಲ್ಲಿಸಂಭವಿಸಿದ ಸಾಮೂಹಿಕ ಗುಂಡಿನ ದಾಳಿ(Firing) ಕನಿಷ್ಠ ಇಬ್ಬರು ಮೃತಪಟ್ಟು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ. ನಗರದ ಪ್ರಖ್ಯಾತ ಪ್ರವಾಸಿ ತಾಣವಾದ ‘ಸ್ಪೇಸ್ ನೀಡಲ್’ ಬಳಿಯ ಸಿಯಾಟಲ್ ಸೆಂಟರ್‌ನಲ್ಲಿ ಈ ದುರಂತ ಸಂಭವಿಸಿದೆ.

ವಾರ್ಷಿಕವಾಗಿ ನಡೆಯುವ ‘ಬೈಟ್ ಆಫ್ ಸಿಯಾಟಲ್’ ಆಹಾರ ಉತ್ಸವದ ವೇಳೆ ಸಂಜೆ ಸುಮಾರು 6 ಗಂಟೆಗೆ ಈ ಗುಂಡಿನ ಚಕಮಕಿ ನಡೆದಿದೆ. ಉತ್ಸವದಲ್ಲಿ ನೂರಾರು ಅಡುಗೆ ಮಳಿಗೆಗಳು ಹಾಗೂ ಸಂಗೀತ ಕಾರ್ಯಕ್ರಮಗಳು ನಡೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ 7 ರಿಂದ 8 ಸುತ್ತು ಗುಂಡಿನ ಸದ್ದು ಕೇಳಿಬಂದಿದೆ. ಇದರಿಂದ ಗಾಬರಿಗೊಂಡ ಸಾರ್ವಜನಿಕರು ಪ್ರಾಣಭಯದಿಂದ ಚೆಲ್ಲಾಪಿಲ್ಲಿಯಾಗಿ ಓಡಲಾರಂಭಿಸಿದರು. ಈ ವೇಳೆ ಕಾಲ್ತುಳಿತವೂ ಸಂಭವಿಸಿ ತೀವ್ರ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ಹತ್ತಿರದ ಹಾರ್ಬರ್‌ವ್ಯೂ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಸಿಯಾಟಲ್ ಪೊಲೀಸ್ ಇಲಾಖೆಯು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದು, ಸಾರ್ವಜನಿಕರು ಆ ಪ್ರದೇಶಕ್ಕೆ ತೆರಳದಂತೆ ಸೂಚಿಸಿದೆ. ದಾಳಿಕೋರನ ಸುಳಿವು ಅಥವಾ ಬಂಧನದ ಕುರಿತು ಪೊಲೀಸರು ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ.

ಬೈಟ್ ಆಫ್ ಸಿಯಾಟಲ್ ಇತಿಹಾಸ: 1982 ರಲ್ಲಿ ಪ್ರಾರಂಭವಾದ ಈ ಆಹಾರ ಉತ್ಸವವು ಅಮೆರಿಕದ ಅತ್ಯಂತ ಹಳೆಯ ಮತ್ತು ದೊಡ್ಡ ಆಹಾರ ಮೇಳಗಳಲ್ಲಿ ಒಂದಾಗಿದೆ. ಪ್ರತಿ ವರ್ಷ ಮೂರು ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಸುಮಾರು 3.5 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುತ್ತಾರೆ.

ಮತ್ತಷ್ಟು ಓದಿ: ಕೆನಡಾದ ಬೃಹತ್ ಬೀದಿ ಉತ್ಸವದಲ್ಲಿ ರಕ್ತಪಾತ: ಮನಬಂದಂತೆ ಗುಂಡು ಹಾರಿಸಿದ ದುಷ್ಕರ್ಮಿ, ಇಬ್ಬರು ಸಾವು, ಹಲವರಿಗೆ ಗಾಯ

ಅಮೆರಿಕದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ನಡೆಯುವ ಸಾಮೂಹಿಕ ಗುಂಡಿನ ದಾಳಿಗಳು ನಿರಂತರವಾಗಿ ಕಳವಳ ಮೂಡಿಸುತ್ತಿವೆ. ‘ಗನ್ ವೈಯಲೆನ್ಸ್ ಆರ್ಕೈವ್’ ಪ್ರಕಾರ, ಪ್ರಸಕ್ತ ವರ್ಷದಲ್ಲೇ ಅಮೆರಿಕದಲ್ಲಿ ನೂರಾರು ಸಾಮೂಹಿಕ ಗುಂಡಿನ ದಾಳಿಗಳು ವರದಿಯಾಗಿವೆ. ಸಾರ್ವಜನಿಕ ಹಬ್ಬಗಳು ಹಾಗೂ ಸಭೆ-ಸಮಾವೇಶಗಳಲ್ಲಿ ಬಂದೂಕು ಹಿಡಿದು ಬರುವುದನ್ನು ತಡೆಯಲು ಮತ್ತು ಬಂದೂಕು ನಿಯಂತ್ರಣ ಕಾಯ್ದೆಗಳನ್ನು ಮತ್ತಷ್ಟು ಬಿಗಿಗೊಳಿಸಲು ಯುಎಸ್ ಸರ್ಕಾರಕ್ಕೆ ಸಾರ್ವಜನಿಕರಿಂದ ಒತ್ತಡ ಹೆಚ್ಚಾಗುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ