AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್‌ಗೆ ಭಾರಿ ಹಿನ್ನಡೆ; ಜನ್ಮಸಿದ್ಧ ಪೌರತ್ವ ಕಾಯ್ದೆ ಎತ್ತಿಹಿಡಿದ ಅಮೆರಿಕದ ಸುಪ್ರೀಂ ಕೋರ್ಟ್

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 'ಜನ್ಮಸಿದ್ಧ ಪೌರತ್ವ'ವನ್ನು ನಿರ್ಬಂಧಿಸಲು ನಡೆಸಿದ್ದ ಪ್ರಯತ್ನವನ್ನು ಯುಎಸ್ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದರೊಂದಿಗೆ ಟ್ರಂಪ್ ಅವರ ಪ್ರಮುಖ ವಲಸೆ ನೀತಿಗಳಲ್ಲಿ ಒಂದಕ್ಕೆ ಭಾರಿ ಕಾನೂನು ಹಿನ್ನಡೆಯಾಗಿದೆ. ಇಂದು ನೀಡಿದ 6-3ರ ಬಹುಮತದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ. ಪೋಷಕರಿಬ್ಬರಲ್ಲಿ ಯಾರೂ ಅಮೆರಿಕದ ನಾಗರಿಕರಲ್ಲದಿದ್ದರೆ ಅಥವಾ ಅಲ್ಲಿನ ಕಾನೂನುಬದ್ಧ ಖಾಯಂ ನಿವಾಸಿಗಳಲ್ಲದಿದ್ದರೆ ಅಂಥವರ ಮಕ್ಕಳು ಅಮೆರಿಕದಲ್ಲಿ ಜನಿಸಿದರೂ ಅವರಿಗೆ ಪೌರತ್ವವನ್ನು ನೀಡದಂತೆ ಫೆಡರಲ್ ಏಜೆನ್ಸಿಗಳಿಗೆ ನಿರ್ದೇಶನ ನೀಡಿದ್ದ ಟ್ರಂಪ್ ಅವರ ಆದೇಶವನ್ನು ಕೆಳ ನ್ಯಾಯಾಲಯ ತಡೆಹಿಡಿದಿತ್ತು. ಆ ತಡೆಯಾಜ್ಞೆಯನ್ನು ಈಗ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

ಟ್ರಂಪ್‌ಗೆ ಭಾರಿ ಹಿನ್ನಡೆ; ಜನ್ಮಸಿದ್ಧ ಪೌರತ್ವ ಕಾಯ್ದೆ ಎತ್ತಿಹಿಡಿದ ಅಮೆರಿಕದ ಸುಪ್ರೀಂ ಕೋರ್ಟ್
Donald Trump Image Credit source: AP
ಸುಷ್ಮಾ ಚಕ್ರೆ
|

Updated on: Jun 30, 2026 | 10:26 PM

Share

ಮುಖ್ಯಾಂಶಗಳು

  • ಟ್ರಂಪ್​ಗೆ ಮತ್ತೊಮ್ಮೆ ಮುಖಭಂಗ
  • ಅಮೆರಿಕದಲ್ಲಿ ಹುಟ್ಟಿದ ಮಕ್ಕಳಿಗೆ ಪೌರತ್ವ ಎತ್ತಿಹಿಡಿದ ಸುಪ್ರೀಂ ಕೋರ್ಟ್
  • ಅನಿವಾಸಿ ಭಾರತೀಯರು ನಿರಾಳ

ವಾಷಿಂಗ್ಟನ್, ಜೂನ್ 30: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆದೇಶಕ್ಕೆ ತೀವ್ರ ಹಿನ್ನಡೆ ಉಂಟುಮಾಡುವ ಮಹತ್ವದ ತೀರ್ಪನ್ನು ಯುಎಸ್ ಸುಪ್ರೀಂ ಕೋರ್ಟ್ ನೀಡಿದ್ದು, ‘ಜನ್ಮಸಿದ್ಧ ಪೌರತ್ವ’ವನ್ನು (Birthright Citizenship) ಎತ್ತಿಹಿಡಿದಿದೆ. ಈ ಮೂಲಕ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಲಸೆ ವಿರೋಧಿ ನೀತಿಗಳಿಗೆ ಯುಎಸ್ ಸುಪ್ರೀಂ ಕೋರ್ಟ್ ಭಾರಿ ಹೊಡೆತ ನೀಡಿದೆ. ಅಮೆರಿಕದ ಮಣ್ಣಿನಲ್ಲಿ ಜನಿಸುವ ಮಕ್ಕಳಿಗೆ ಅಲ್ಲಿನ ಪೌರತ್ವ ನೀಡುವ ದಶಕಗಳ ಹಳೆಯ ‘ಜನ್ಮಸಿದ್ಧ ಪೌರತ್ವ’ ಹಕ್ಕನ್ನು ರದ್ದುಗೊಳಿಸಲು ಟ್ರಂಪ್ ಹೊರಡಿಸಿದ್ದ ಕಾರ್ಯಕಾರಿ ಆದೇಶವನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.

ಅಮೆರಿಕ ಸಂವಿಧಾನದ ಆಧಾರ ಸ್ತಂಭಗಳಲ್ಲಿ ಒಂದಾದ ಈ ನಿಯಮವನ್ನು ಸರ್ವೋಚ್ಚ ನ್ಯಾಯಾಲಯವು ಎತ್ತಿಹಿಡಿದಿರುವುದು ವಲಸಿಗರು, ಅದರಲ್ಲೂ ವಿಶೇಷವಾಗಿ ಭಾರತೀಯ ಮೂಲದ ಲಕ್ಷಾಂತರ ಜನರಿಗೆ ದೊಡ್ಡ ಸಮಾಧಾನ ತಂದಿದೆ.

ಏನಿದು ಪ್ರಕರಣ?:

ಅಮೆರಿಕದಲ್ಲಿ ಕಾನೂನುಬದ್ಧವಾಗಿ ಅಥವಾ ಕಾನೂನುಬಾಹಿರವಾಗಿ ವಾಸಿಸುತ್ತಿರುವ ವಿದೇಶಿಯರ ಮಕ್ಕಳು ಅಮೆರಿಕದ ಮಣ್ಣಿನಲ್ಲಿ ಜನಿಸಿದರೆ, ಅವರಿಗೆ ಸಂವಿಧಾನದ ಪ್ರಕಾರ ‘ಜನ್ಮಸಿದ್ಧ ಪೌರತ್ವ’ ಸಿಗುತ್ತದೆ. ಇದನ್ನು ತಡೆಯಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾರ್ಯಕಾರಿ ಆದೇಶವೊಂದನ್ನು ಹೊರಡಿಸಿದ್ದರು. ಅನಧಿಕೃತ ವಲಸಿಗರು ಮತ್ತು ತಾತ್ಕಾಲಿಕ ವೀಸಾಗಳ ಮೇಲೆ ಬಂದಿರುವವರ ಮಕ್ಕಳಿಗೆ ಈ ಹಕ್ಕನ್ನು ನಿರಾಕರಿಸುವುದು ಅವರ ಉದ್ದೇಶವಾಗಿತ್ತು.

ಇದನ್ನೂ ಓದಿ: Birthright Citizenship: ಅಮೆರಿಕ: ಹುಟ್ಟಿನಿಂದಲೇ ಸಿಗುವ ಪೌರತ್ವ ಕೊನೆಗೊಳಿಸುವ ಆದೇಶಕ್ಕೆ ಕೋರ್ಟ್​ ತಡೆ

ಟ್ರಂಪ್ ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಹಲವಾರು ಮಾನವ ಹಕ್ಕುಗಳ ಸಂಘಟನೆಗಳು ಮತ್ತು ನಾಗರಿಕ ಹಕ್ಕುಗಳ ಒಕ್ಕೂಟಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದವು. ಅಮೆರಿಕ ಸಂವಿಧಾನದ 14ನೇ ತಿದ್ದುಪಡಿಯು ಆ ದೇಶದಲ್ಲಿ ಜನಿಸುವ ಪ್ರತಿಯೊಬ್ಬರಿಗೂ ಪೌರತ್ವದ ಹಕ್ಕನ್ನು ಖಾತರಿಪಡಿಸುತ್ತದೆ. ಹೀಗಾಗಿ, ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ, “ಸಂವಿಧಾನದ ಈ ಆಶಯವನ್ನು ಬದಲಾಯಿಸುವ ಅಥವಾ ನಿರ್ಬಂಧಿಸುವ ಅಧಿಕಾರ ಅಧ್ಯಕ್ಷರ ಕಾರ್ಯಕಾರಿ ಆದೇಶಕ್ಕೆ ಇಲ್ಲ” ಎಂದು ಸ್ಪಷ್ಟಪಡಿಸಿದೆ.

ನ್ಯಾಯಾಲಯವು 1898ರ ಐತಿಹಾಸಿಕ ‘ಯುನೈಟೆಡ್ ಸ್ಟೇಟ್ಸ್ ವಿರುದ್ಧ ವಾಂಗ್ ಕಿಮ್ ಆರ್ಕ್’ ಪ್ರಕರಣವನ್ನು ಉಲ್ಲೇಖಿಸಿದೆ. ಆ ತೀರ್ಪಿನಲ್ಲೂ ಚೀನೀ ಪೋಷಕರಿಗೆ ಅಮೆರಿಕದಲ್ಲಿ ಜನಿಸಿದ ಮಗುವಿಗೆ ಪೌರತ್ವವನ್ನು ಇದೇ 14ನೇ ತಿದ್ದುಪಡಿಯ ಅಡಿಯಲ್ಲಿ ಎತ್ತಿಹಿಡಿಯಲಾಗಿತ್ತು.

ಇದನ್ನೂ ಓದಿ: ಇರಾನ್ ಮನವಿ ಮಾಡಿದ್ದರಿಂದ ನಾಳೆ ದೋಹಾದಲ್ಲಿ ಮಾತುಕತೆ; ಅಮೆರಿಕ ಅಧ್ಯಕ್ಷ ಟ್ರಂಪ್ ಮಾಹಿತಿ

ಭಾರತೀಯರಿಗೆ ಇದರಿಂದ ಆಗುವ ಲಾಭವೇನು?:

ಅಮೆರಿಕದಲ್ಲಿ ಎಚ್-1ಬಿ (H-1B), ಎಲ್-1 (L-1) ನಂತಹ ತಾತ್ಕಾಲಿಕ ಕೆಲಸದ ವೀಸಾಗಳ ಮೇಲೆ ವಾಸಿಸುತ್ತಿರುವ ಸಾವಿರಾರು ಭಾರತೀಯ ಐಟಿ ಉದ್ಯೋಗಿಗಳಿಗೆ ಈ ತೀರ್ಪು ನಿರಾಳತೆ ತಂದಿದೆ. ಅವರ ಗ್ರೀನ್ ಕಾರ್ಡ್ ಪ್ರಕ್ರಿಯೆಯು ಬಾಕಿ ಉಳಿದಿದ್ದರೂ, ಅಮೆರಿಕದಲ್ಲಿ ಜನಿಸುವ ಅವರ ಮಕ್ಕಳಿಗೆ ಸಿಗುವ ಪೌರತ್ವದ ಹಕ್ಕಿಗೆ ಈಗ ಯಾವುದೇ ಕಾನೂನು ತೊಂದರೆ ಉಂಟಾಗುವುದಿಲ್ಲ.

ಟ್ರಂಪ್ ಸರ್ಕಾರದ ಪ್ರತಿಕ್ರಿಯೆ:

ಸುಪ್ರೀಂ ಕೋರ್ಟ್ ತೀರ್ಪಿಗೆ ಡೊನಾಲ್ಡ್ ಟ್ರಂಪ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಿಯಮದಿಂದಾಗಿ ಬೇರೆ ದೇಶಗಳ ಜನರು ಕೇವಲ ಪೌರತ್ವ ಪಡೆಯುವ ಉದ್ದೇಶದಿಂದಲೇ ಅಮೆರಿಕಕ್ಕೆ ಬರುತ್ತಿದ್ದಾರೆ ಎಂದು ಅವರು ವಾದಿಸಿದ್ದಾರೆ. ಈ ತೀರ್ಪಿನ ವಿರುದ್ಧ ಸಂಸತ್ತಿನಲ್ಲಿ ಕಾನೂನು ತರಲು ರಿಪಬ್ಲಿಕನ್ ಪಕ್ಷದ ಮೂಲಕ ಪ್ರಯತ್ನಿಸುವುದಾಗಿ ಶ್ವೇತಭವನದ ಮೂಲಗಳು ತಿಳಿಸಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ