Sign In

By signing in or creating an account, you agree with Associated Broadcasting Company's Terms & Conditions and Privacy Policy.

Shehbaz Sharif: ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಅವಿರೋಧ ಆಯ್ಕೆ

Pakistan Prime Minister: ಅವಿಶ್ವಾಸ ನಿರ್ಣಯದ ಬಳಿಕ ಪದಚ್ಯುತಗೊಂಡ ಇಮ್ರಾನ್ ಖಾನ್ ಅವರ ಉತ್ತರಾಧಿಕಾರಿಯಾಗಿ ಶೆಹಬಾಜ್ ಷರೀಫ್ ಪಾಕಿಸ್ತಾನದ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

Shehbaz Sharif: ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಅವಿರೋಧ ಆಯ್ಕೆ
ಶೆಹಬಾಜ್ ಷರೀಫ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Apr 11, 2022 | 5:16 PM

ಇಸ್ಲಮಾಬಾದ್: ಪಾಕಿಸ್ತಾನದ ಪ್ರಧಾನಮಂತ್ರಿ ಪಟ್ಟದಿಂದ ಇಮ್ರಾನ್ ಖಾನ್ ಈಗಾಗಲೇ ಕೆಳಗಿಳಿದಿದ್ದಾರೆ. ಇದೀಗ ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶನಿವಾರ ಅವಿಶ್ವಾಸ ನಿರ್ಣಯದ ಬಳಿಕ ಪದಚ್ಯುತಗೊಂಡ ಇಮ್ರಾನ್ ಖಾನ್ ಅವರ ಉತ್ತರಾಧಿಕಾರಿಯಾಗಿ ಶೆಹಬಾಜ್ ಷರೀಫ್ (Shehbaz Sharif) ಪಾಕಿಸ್ತಾನದ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಪಾಕಿಸ್ತಾನದ 23ನೇ ಪ್ರಧಾನಿಯಾಗಿ 70 ವರ್ಷದ ಶೆಹಬಾಜ್ ಷರೀಫ್ ಆಯ್ಕೆಯಾಗಿದ್ದು, ಇಂದು ರಾತ್ರಿ 8 ಗಂಟೆಗೆ ಶೆಹಬಾಜ್ ಷರೀಫ್ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಪಾಕಿಸ್ತಾನದ ಪ್ರಧಾನ ಮಂತ್ರಿಯಾಗಿದ್ದ ಇಮ್ರಾನ್ ಖಾನ್ ಅವರನ್ನು ಪದಚ್ಯುತಿಗೊಳಿಸುವುದರಲ್ಲಿ ಯಶಸ್ವಿ ಆಗಿದ್ದ ಪಾಕಿಸ್ತಾನದ ವಿರೋಧ ಪಕ್ಷದ ನಾಯಕ ಶೆಹಬಾಜ್ ಷರೀಫ್ ಇಂದು ಪಾಕಿಸ್ತಾನದ ನೂತನ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ರಾತ್ರಿ ಪ್ರಮಾಣವಚನ ಸ್ವೀಕರಿಸಲು ಎಲ್ಲಾ ಸಿದ್ಧತೆಗಳು ನಡೆದಿವೆ. ಇಮ್ರಾನ್ ಖಾನ್ ಪದಚ್ಯುತಿ ನಂತರ ಜಂಟಿ ವಿರೋಧ ಪಕ್ಷದ ನಾಯಕ ಶಹಬಾಜ್ ಷರೀಫ್ ಪ್ರಧಾನಿ ಸ್ಥಾನಕ್ಕೆ ಸ್ಪರ್ಧಿಸಲು ರಾಷ್ಟ್ರೀಯ ಅಸೆಂಬ್ಲಿ ಸೆಕ್ರೆಟರಿಯೇಟ್‌ನಲ್ಲಿ ನಾಮಪತ್ರ ಸಲ್ಲಿಸಿದ್ದರು.

ಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿಯ ಮ್ಯಾಜಿಕ್ ನಂಬರ್ 172 ಆಗಿದ್ದು, ಶೆಹಬಾಜ್ ಷರೀಫ್ ಅವಿರೋಧವಾಗಿ ಪ್ರಧಾನಮಂತ್ರಿಯಾಗಿದ್ದಾರೆ. ಪಾಕಿಸ್ತಾನ ಮುಸ್ಲಿಂ ಲೀಗ್ ಅಧ್ಯಕ್ಷ ಹಾಗೂ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರರಾಗಿರುವ ಶಹಬಾಜ್ ಷರೀಫ್ ಇಂದು ರಾತ್ರಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಇದನ್ನೂ ಓದಿ: ನಾವು ಪಾಕಿಸ್ತಾನದ ಮುಸ್ಲಿಮರಲ್ಲ, ಸಹಬಾಳ್ವೆಗೆ ನಮ್ಮ ಮೊದಲ ಆದ್ಯತೆ: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್

ಯಾರಾಗ್ತಾರೆ ಪಾಕಿಸ್ತಾನದ ಮುಂದಿನ ಪ್ರಧಾನಿ?- ರೇಸ್​​ನಲ್ಲಿದ್ದಾರೆ ಶೆಹಬಾಜ್​ ಶರೀಫ್​- ಶಾ ಮೊಹಮ್ಮದ್​ ಖುರೇಶಿ

Published On - 5:06 pm, Mon, 11 April 22

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್