ನೀರಿನ ಹಕ್ಕು ಕಸಿದರೆ ಸುಮ್ಮನಿರಲ್ಲ: ಭಾರತದ ವಿರುದ್ಧ ಮತ್ತೆ ವಿಷ ಕಾರಿದ ಶೆಹಬಾಜ್ ಷರೀಫ್

ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ ಕುರಿತು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. 'ಪ್ರತಿ ಹನಿಯೂ ರೆಡ್ ಲೈನ್' ಎಂದ ಅವರು, ಭಾರತವು ನೀರಿನ ಹಕ್ಕಿಗೆ ಧಕ್ಕೆ ತಂದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು. ಅಮೆರಿಕ ಮಧ್ಯಸ್ಥಿಕೆಯ ಯುದ್ಧವಿರಾಮದ ಬಗ್ಗೆ ಟ್ರಂಪ್ ಅನ್ನು ಶ್ಲಾಘಿಸಿದರು. ಭಾರತವು ಸಿಂಧೂ ನದಿ ಒಪ್ಪಂದವನ್ನು ಅಮಾನತಿನಲ್ಲಿಟ್ಟಿದ್ದರೂ, ಪಾಕಿಸ್ತಾನ ಅದನ್ನು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪ್ರಶ್ನಿಸುತ್ತಿದೆ.

ನೀರಿನ ಹಕ್ಕು ಕಸಿದರೆ ಸುಮ್ಮನಿರಲ್ಲ: ಭಾರತದ ವಿರುದ್ಧ ಮತ್ತೆ ವಿಷ ಕಾರಿದ ಶೆಹಬಾಜ್ ಷರೀಫ್
ಸಾಂದರ್ಭಿಕ ಚಿತ್ರ

Updated on: Aug 14, 2026 | 8:32 AM

ಇಸ್ಲಾಮಾಬಾದ್, ಆ.14: ಸಿಂಧೂ ನದಿ ನೀರು ಹಂಚಿಕೆ ಒಪ್ಪಂದಕ್ಕೆ (Indus Waters Treaty) ಸಂಬಂಧಿಸಿದಂತೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಭಾರತಕ್ಕೆ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. “ಪಾಕಿಸ್ತಾನಕ್ಕೆ ಸೇರಬೇಕಾದ ನೀರಿನ ಪ್ರತಿಯೊಂದು ಹನಿಯೂ ನಮಗೆ ‘ರೆಡ್ ಲೈನ್’ಿದ್ದಂತೆ. ನಮ್ಮ ನೀರಿನ ಹಕ್ಕನ್ನು ಕಸಿಯಲು ಯತ್ನಿಸಿದರೆ ನೇರ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

ಗುರುವಾರ ಇಸ್ಲಾಮಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಷರೀಫ್, ಪಾಕಿಸ್ತಾನವು ಶಾಂತಿಯನ್ನು ಬಯಸುತ್ತದೆ. ಆದರೆ ದೇಶದ ಸಾರ್ವಭೌಮತೆಗೆ ಧಕ್ಕೆ ತರುವ ಯಾವುದೇ ಪ್ರಯತ್ನ ನಡೆದರೂ ಪ್ರತ್ಯುತ್ತರ ನೀಡಲಾಗುವುದು ಎಂದು ಹೇಳಿದ್ದಾರೆ. 2025ರ ಮೇ ತಿಂಗಳಿನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಏರ್ಪಟ್ಟಿದ್ದ ಸೀಜ್‌ಫೈರ್ (ಯುದ್ಧವಿರಾಮ) ಒಪ್ಪಂದದಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಶೆಹಬಾಜ್ ಷರೀಫ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ರಾಜತಾಂತ್ರಿಕ ಮಾತುಕತೆಗಳ ನಂತರ ಭಾರತ ಹಾಗೂ ಪಾಕಿಸ್ತಾನ ತಕ್ಷಣದ ಯುದ್ಧವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಮೇ 2025ರಲ್ಲಿ ಟ್ರಂಪ್ ಘೋಷಿಸಿದ್ದರು. ಅಮೆರಿಕದ ನಾಯಕತ್ವ ಮತ್ತು ಸಕ್ರಿಯ ಪಾತ್ರಕ್ಕೆ ಷರೀಫ್ ಧನ್ಯವಾದ ಅರ್ಪಿಸಿದ್ದರು. ಆದರೆ ಭಾರತವು ಮೂರನೇ ವ್ಯಕ್ತಿ ಅಥವಾ ದೇಶದ ಮಧ್ಯಸ್ಥಿಕೆಯನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ. ಎರಡೂ ದೇಶಗಳ ಮಿಲಿಟರಿ ಸೇನೆಗಳ ನಡುವಿನ ನೇರ ಮಾತುಕತೆಯ ಮೂಲಕವೇ ಯುದ್ಧವಿರಾಮ ತೀರ್ಮಾನಕ್ಕೆ ಬರಲಾಗಿದೆ ಎಂದು ಭಾರತ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಜೈಲಿನಲ್ಲಿದ್ದ ಇಮ್ರಾನ್ ಖಾನ್ ನಿಜವಾಗಿಯೂ ಸತ್ತಿದ್ದಾರಾ? ಕೊನೆಗೂ ಮೌನ ಮುರಿದ ಪಾಕಿಸ್ತಾನ

ಕಾಶ್ಮೀರ ವಿಷಯ ಹಾಗೂ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಷರೀಫ್ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಭಾರತವು 2025ರ ಏಪ್ರಿಲ್‌ನಲ್ಲಿ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ತಡೆಹಿಡಿಯಲಾಗಿದೆ (in abeyance) ಎಂದು ಅಧಿಕೃತವಾಗಿ ಪ್ರಕಟಿಸಿತ್ತು. ಆದರೆ ಪಾಕಿಸ್ತಾನವು ಈ ಒಪ್ಪಂದವು ಕಾನೂನುಬದ್ಧವಾಗಿ ಇಂದಿಗೂ ಜಾರಿಯಲ್ಲಿದೆ ಎಂದು ವಾದಿಸುತ್ತಿದ್ದು, ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಈ ವಿಷಯವನ್ನು ಎತ್ತುತ್ತಲೇ ಬಂದಿದೆ.

ವಿದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us