ಬಾಂಗ್ಲಾದೇಶದಲ್ಲಿ ಚಿನ್ಮಯ್ ದಾಸ್ ಬಂಧನಕ್ಕೆ ಮಾಜಿ ಪ್ರಧಾನಿ ಶೇಖ್ ಹಸೀನಾ ಖಂಡನೆ; ಶೀಘ್ರ ಬಿಡುಗಡೆಗೆ ಆಗ್ರಹ

ಬಾಂಗ್ಲಾದೇಶದ ಹಿಂದೂ ಆಧ್ಯಾತ್ಮಿಕ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರ ಬಂಧನವನ್ನು ಖಂಡಿಸಿದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಚಿನ್ಮಯ್ ದಾಸ್ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ದೇಶದ್ರೋಹದ ಆರೋಪದ ಮೇಲೆ ಈ ವಾರದ ಆರಂಭದಲ್ಲಿ ಚಿನ್ಮಯ್ ದಾಸ್ ಅವರನ್ನು ಬಂಧಿಸಲಾಗಿತ್ತು.

ಬಾಂಗ್ಲಾದೇಶದಲ್ಲಿ ಚಿನ್ಮಯ್ ದಾಸ್ ಬಂಧನಕ್ಕೆ ಮಾಜಿ ಪ್ರಧಾನಿ ಶೇಖ್ ಹಸೀನಾ ಖಂಡನೆ; ಶೀಘ್ರ ಬಿಡುಗಡೆಗೆ ಆಗ್ರಹ
ಶೇಖ್ ಹಸೀನಾ
Follow us
ಸುಷ್ಮಾ ಚಕ್ರೆ
|

Updated on: Nov 28, 2024 | 8:38 PM

ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಹಿಂದೂ ಆಧ್ಯಾತ್ಮಿಕ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರ ಬಂಧನವನ್ನು ಇಂದು ಖಂಡಿಸಿದ್ದಾರೆ. ಹಿಂದೂ ನಾಯಕ ಚಿನ್ಮಯ್ ದಾಸ್​ನನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಅವರು ಹೇಳಿದ್ದಾರೆ. ದೇಶದ್ರೋಹದ ಆರೋಪದ ಮೇಲೆ ಈ ವಾರದ ಆರಂಭದಲ್ಲಿ ಚಿನ್ಮಯ್ ದಾಸ್ ಅವರನ್ನು ಬಂಧಿಸಲಾಯಿತು.

“ಸನಾತನ ಧಾರ್ಮಿಕ ಸಮುದಾಯದ ಹಿರಿಯ ನಾಯಕನನ್ನು ಅನ್ಯಾಯವಾಗಿ ಬಂಧಿಸಲಾಗಿದೆ. ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು” ಎಂದು ಶೇಖ್ ಹಸೀನಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚಿತ್ತಗಾಂಗ್‌ನಲ್ಲಿ ದೇವಸ್ಥಾನವನ್ನು ಸುಟ್ಟು ಹಾಕಲಾಗಿದೆ. ಈ ಹಿಂದೆ ಅಹ್ಮದೀಯ ಸಮುದಾಯದ ಮಸೀದಿಗಳು, ಮಂದಿರಗಳು, ಚರ್ಚ್‌ಗಳು, ಮಠಗಳು ಮತ್ತು ಮನೆಗಳ ಮೇಲೆ ದಾಳಿ, ಧ್ವಂಸ, ಲೂಟಿ ಮಾಡಿ ಬೆಂಕಿ ಹಚ್ಚಲಾಗಿತ್ತು. ಧಾರ್ಮಿಕ ಸ್ವಾತಂತ್ರ್ಯ ಮತ್ತು ಎಲ್ಲಾ ಸಮುದಾಯಗಳ ಜನರ ಜೀವನ ಮತ್ತು ಆಸ್ತಿಯ ಸುರಕ್ಷತೆಯನ್ನು ಖಾತ್ರಿ ಪಡಿಸಬೇಕು ಎಂದು ಮಾಜಿ ಪ್ರಧಾನಿ ಶೇಖ್ ಹಸೀನಾ ಅವಾಮಿ ಲೀಗ್‌ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಚಿನ್ಮಯ್ ದಾಸ್ ಬಂಧನ: ಅಧಿಕಾರಿಗಳು, ನಿವೃತ್ತ ನ್ಯಾಯಮೂರ್ತಿಗಳಿಂದ ಪ್ರಧಾನಿ ಮೋದಿಗೆ ಪತ್ರ

ವಿವಾದಾತ್ಮಕ ಉದ್ಯೋಗ ಕೋಟಾ ವ್ಯವಸ್ಥೆಗೆ ಸಂಬಂಧಿಸಿದಂತೆ ಅವರ ಅವಾಮಿ ಲೀಗ್ ನೇತೃತ್ವದ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಂತರ ಶೇಖ್ ಹಸೀನಾ ಆಗಸ್ಟ್ 5ರಂದು ಭಾರತಕ್ಕೆ ಪಲಾಯನ ಮಾಡಿದರು. ಅದಾದ ಮೂರು ದಿನಗಳ ನಂತರ, ನೊಬೆಲ್ ಪ್ರಶಸ್ತಿ ವಿಜೇತ ಮಹಮ್ಮದ್ ಯೂನಸ್ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ಅಧಿಕಾರ ವಹಿಸಿಕೊಂಡರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
"ಇಸ್ಪೀಟ್ ಆಟ ಆಡಲೇಬೇಕಾ ಸರ್​"? ಪೊಲೀಸರಿಗೆ ಮಕ್ಕಳ ಪ್ರಶ್ನೆ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?
ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?
ವಿಜಯೇಂದ್ರ ಹೊಂದಾಣಿಕೆ ರಾಜಕಾರಣ ಮಾಡಬಾರದು: ಬಸನಗೌಡ ಯತ್ನಾಳ್
ವಿಜಯೇಂದ್ರ ಹೊಂದಾಣಿಕೆ ರಾಜಕಾರಣ ಮಾಡಬಾರದು: ಬಸನಗೌಡ ಯತ್ನಾಳ್
ದೆಹಲಿಯಲ್ಲಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿದ್ದೇನೆ: ರೇವಣ್ಣ
ದೆಹಲಿಯಲ್ಲಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿದ್ದೇನೆ: ರೇವಣ್ಣ