Shinzo Abe: ಮಾಜಿ ಪ್ರಧಾನಿ ಶಿಂಜೋ ಅಬೆ ಸ್ಥಿತಿ ಚಿಂತಾಜನಕ, ಜೀವ ಉಳಿಸಲು ವೈದ್ಯರ ಶತಪ್ರಯತ್ನ; ಜಪಾನ್ ಪಿಎಂ ಮಾಹಿತಿ

ಶಿಂಜೋ ಅಬೆ ಅವರ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದೆ. ಅವರನ್ನು ಉಳಿಸಲು ವೈದ್ಯರು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ. ಅವರು ಬದುಕಬಹುದೆಂಬ ಭರವಸೆಯಿದೆ ಎಂದು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಹೇಳಿದ್ದಾರೆ.

Shinzo Abe: ಮಾಜಿ ಪ್ರಧಾನಿ ಶಿಂಜೋ ಅಬೆ ಸ್ಥಿತಿ ಚಿಂತಾಜನಕ, ಜೀವ ಉಳಿಸಲು ವೈದ್ಯರ ಶತಪ್ರಯತ್ನ; ಜಪಾನ್ ಪಿಎಂ ಮಾಹಿತಿ
ಜಪಾನ್ ಮಾಜಿ ಪ್ರಧಾನಿಗೆ ಗುಂಡೇಟುImage Credit source: Indian Express
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 08, 2022 | 1:02 PM

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಮೇಲೆ ಇಂದು ಗುಂಡಿನ ದಾಳಿಯಾಗಿದೆ. ಜಪಾನ್​ನ ನಾರಾ ಸಿಟಿಯಲ್ಲಿ ಬೆಳಗ್ಗೆ 11.30ರ ಸುಮಾರಿಗೆ (ಜಪಾನ್ ಕಾಲಮಾನ) ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ವೇಳೆ ಶಿಂಜೋ ಅಬೆ (Shinzo Abe) ಅವರ ಮೇಲೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದಾನೆ. ತಕ್ಷಣ ಕುಸಿದು ಬಿದ್ದ ಅಬೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ನೀಡಿರುವ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ, ಶಿಂಜೋ ಅಬೆ ಅವರ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದೆ. ಅವರನ್ನು ಉಳಿಸಲು ವೈದ್ಯರು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ. ಅವರು ಬದುಕಬಹುದೆಂಬ ಭರವಸೆಯಿದೆ ಎಂದು ಹೇಳಿದ್ದಾರೆ.

“ಶಿಂಜೋ ಅಬೆ ಈ ಅಗ್ನಿಪರೀಕ್ಷೆಯಿಂದ ಬದುಕುಳಿಯಲಿ ಎಂದು ನಾನು ಹೃದಯಪೂರ್ವಕವಾಗಿ ಪ್ರಾರ್ಥಿಸುತ್ತಿದ್ದೇನೆ. ಚುನಾವಣೆ ಹಿನ್ನೆಲೆಯಲ್ಲೇ ಈ ಹಿಂಸಾತ್ಮಕ ಕೃತ್ಯ ನಡೆದಿದೆ ಎಂಬುದನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಜಪಾನ್ ಪ್ರಧಾನಿ ಕಿಶಿಡಾ ಹೇಳಿದ್ದಾರೆ.

ಇದನ್ನೂ ಓದಿ: Shinjo Abe: ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ

ಗುಂಡಿನ ದಾಳಿಯಿಂದ ತೀವ್ರ ರಕ್ತಸ್ರಾವವಾಗಿ ಕುಸಿದ ಸ್ಥಳದಲ್ಲಿಯೇ ಕುಸಿದುಬಿದ್ದ ಶಿಂಜೊ ಅಬೆಯವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪೊಲೀಸರು ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮುಂದಿನ ಭಾನುವಾರ (ಜುಲೈ 10) ಜಪಾನ್ ಸಂಸತ್​ನ ಮೇಲ್ಮನೆಗೆ ಚುನಾವಣೆ ನಡೆಯಲಿದ್ದು, ಶಿಂಜೋ ಅಬೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಲಾಗಿದೆ.

ಜಪಾನ್​ನಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಶಿಂಜೋ ಅಬೆ ಅವರ ಮೇಲೆ ಪಶ್ಚಿಮ ಜಪಾನ್‌ನ ನಾರಾ ನಗರದಲ್ಲಿ ಚುನಾವಣಾ ಪ್ರಚಾರದ ವೇಳೆ ಗುಂಡು ಹಾರಿಸಲಾಗಿದೆ. ಅವರನ್ನು ಉಳಿಸಲು ವೈದ್ಯರು ತಮ್ಮ ಕೈಲಾದಷ್ಟು ಶ್ರಮಿಸುತ್ತಿದ್ದಾರೆ ಎಂದು ಹಾಲಿ ಪ್ರಧಾನಿ ಫ್ಯೂಮಿಯೊ ಕಿಶಿಡಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 67 ವರ್ಷದ ಶಿಂಜೋ ಅಬೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮೊದಲು ಅವರಿಗೆ ಹೃದಯ ಸ್ತಂಭನವಾಗಿತ್ತು.

ಇದನ್ನೂ ಓದಿ: ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ, ಅಸ್ಪತ್ರೆಗೆ ದಾಖಲು

ನಾರಾ ಸಿಟಿಯ ನಿವಾಸಿ ಎನ್ನಲಾದ 41 ವರ್ಷದ ಟೆಟ್ಸುಯಾ ಯಮಗಾಮಿ ಎಂಬಾತನನ್ನು ಶಿಂಜೋ ಅಬೆ ಮೇಲೆ ಗುಂಡಿಕ್ಕಿ ಕೊಲೆ ಯತ್ನದ ಶಂಕೆಯ ಮೇಲೆ ಬಂಧಿಸಲಾಗಿದೆ. ಟಿವಿಯಲ್ಲಿ ಪ್ರಸಾರವಾದ ದೃಶ್ಯಗಳಲ್ಲಿ, ಶಿಂಜೋ ಅಬೆ ಗುಂಡೇಟಿನಿಂದ ಕುಸಿದು ಬೀಳುತ್ತಿರುವುದನ್ನು ಕಾಣಬಹುದು. ತಕ್ಷಣ ಹಲವಾರು ಭದ್ರತಾ ಸಿಬ್ಬಂದಿ ಅವರ ಕಡೆಗೆ ಓಡಿದ್ದಾರೆ. ಅಬೆ ಕುಸಿದು ಬಿದ್ದಾಗ ಅವರು ತಮ್ಮ ಎದೆಯನ್ನು ಗಟ್ಟಿಯಾಗಿ ಒತ್ತಿ ಹಿಡಿದಿರುವುದನ್ನು ನೋಡಬಹುದು. ಅವರ ಶರ್ಟ್​ ಪೂರ್ತಿ ರಕ್ತದಿಂದ ತೊಯ್ದುಹೋಗಿತ್ತು.

Published On - 12:57 pm, Fri, 8 July 22

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ