AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲೈಮೌತ್​ ನಗರದಲ್ಲಿ ಸಾಮೂಹಿಕ ಗುಂಡಿನ ದಾಳಿ; ಮಗು ಸೇರಿ 6 ಮಂದಿ ಸಾವು

ಈ ಘಟನೆ ಬಗ್ಗೆ ಮಾಹಿತಿ ನೀಡಿರುವ ಡೆವೋನ್​ ಮತ್ತು ಕಾರ್ನ್​ವಾಲ್​ ಪೊಲೀಸರು 6 ಮಂದಿ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. 10 ವರ್ಷದೊಳಗಿನ ಒಂದು ಮಗುವನ್ನೂ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ತಿಳಿಸಿದ್ದಾರೆ.

ಪ್ಲೈಮೌತ್​ ನಗರದಲ್ಲಿ ಸಾಮೂಹಿಕ ಗುಂಡಿನ ದಾಳಿ; ಮಗು ಸೇರಿ 6 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Updated By: Skanda|

Updated on: Aug 13, 2021 | 9:08 AM

Share

ಇಂಗ್ಲೆಂಡ್​ ದೇಶದ ಪ್ಲೈಮೌತ್​ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಂದು ಮಗುವೂ ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ. ನೈರುತ್ಯ ಇಂಗ್ಲೆಂಡ್​ ಪ್ರಾಂತ್ಯದ ಪ್ಲೈಮೌತ್​ನಲ್ಲಿ ಗುರುವಾರ ಸಂಜೆ ದುರ್ಘಟನೆ ನಡೆದಿದ್ದು, ಇಬ್ಬರು ಮಹಿಳೆಯರು, ಮೂವರು ಪುರುಷರು ಸ್ಥಳದಲ್ಲೇ ಬಲಿಯಾಗಿದ್ದಾರೆ. ಈ ಪೈಕಿ ಸಾವಿಗೀಡಾದ ಓರ್ವನನ್ನು ಗುಂಡಿನ ದಾಳಿಗೈದ ಆಗಂತುಕನೇ ಇರಬೇಕು ಎಂದು ಶಂಕಿಸಲಾಗಿದೆ. ಮತ್ತೊಬ್ಬರು ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಈ ಘಟನೆ ಬಗ್ಗೆ ಮಾಹಿತಿ ನೀಡಿರುವ ಡೆವೋನ್​ ಮತ್ತು ಕಾರ್ನ್​ವಾಲ್​ ಪೊಲೀಸರು 6 ಮಂದಿ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. 10 ವರ್ಷದೊಳಗಿನ ಒಂದು ಮಗುವನ್ನೂ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನು ಅತ್ಯಂತ ಗಂಭೀರ ಹಾಗೂ ಚಿಂತನೀಯ ವಿಷಯ ಎಂದು ಕರೆದಿರುವ ಅವರು, ಇದು ಉಗ್ರಗಾಮಿಗಳ ಕೃತ್ಯವಲ್ಲ ಎಂದೂ ಹೇಳಿದ್ದಾರೆ.

ಸಾಧಾರಣವಾಗಿ ಆ ಭಾಗದಲ್ಲಿ ಇಂತಹ ಕೃತ್ಯಗಳು ಕಡಿಮೆಯಾಗಿದ್ದು, ಬರೋಬ್ಬರಿ 11 ವರ್ಷಗಳ ನಂತರ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಅಲ್ಲಿನ ಹೋಮ್​ ಸೆಕ್ರೆಟರಿ ಪ್ರೀತಿ ಪಟೇಲ್, ಪ್ಲೈಮೌತ್​ನಲ್ಲಿ ನಡೆದ ದುರ್ಘಟನೆ ಅತ್ಯಂತ ಆತಂಕಕಾರಿಯಾಗಿದ್ದು, ಅದಕ್ಕಾಗಿ ವಿಷಾದಿಸುತ್ತೇನೆ. ಗುಂಡಿನ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ಮನೆಯವರಿಗೆ ಸಾಂತ್ವಾನ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಈ ಘಟನೆಯನ್ನು ಕಣ್ಣಾರೆ ಕಂಡ ಶಾರೋನ್​ ಟರ್ನರ್ (57 ವರ್ಷ) ಅಲ್ಲಿ ಏನೇನು ನಡೆಯಿತು ಎನ್ನುವುದನ್ನು ಹಂಚಿಕೊಂಡಿದ್ದಾರೆ. ಶಸ್ತ್ರ ಹಿಡಿದುಕೊಂಡು ಬಂದಿದ್ದ ವ್ಯಕ್ತಿ ಬಾಗಿಲನ್ನು ಒದ್ದು ಒಳಗೆ ಪ್ರವೇಶಿಸಿ ತಕ್ಷಣ ಗುಂಡಿನ ಮಳೆ ಸುರಿಸಿದ. ಮನೆಯೊಳಗಿದ್ದ ತಾಯಿ, ಮಗುವನ್ನು ಗುಂಡಿಕ್ಕಿ ಕೊಂದ. ಆತ ಕಪ್ಪು ಮತ್ತು ಬೂದು ಬಣ್ಣದ ಧಿರಿಸು ತೊಟ್ಟಿದ್ದ ಎಂದು ಹೇಳಿದ್ದಾರೆ. ಬಳಿಕ ಅಲ್ಲಿಂದ ಹೊರಬಂದ ಆತ ಮತ್ತಿಬ್ಬರಿಗೆ ಗುಂಡಿಕ್ಕಿದ್ದಾನೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಮುಂದುವರೆದಿದ್ದು, ದುರ್ಘಟನೆ ನಡೆದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಸುಮಾರು 11 ವರ್ಷಗಳ ನಂತರ ಈ ಬಗೆಯ ಘಟನೆ ನಡೆದಿರುವುದರಿಂದ ಸಹಜವಾಗಿಯೇ ಅಲ್ಲಿನ ನಿವಾಸಿಗಳು ಭಯಭೀತರಾಗಿದ್ದಾರೆ.

(Shocking Incident Six people killed in mass shooting in England Plymouth)

ಇದನ್ನೂ ಓದಿ: ಬಿಗಿ ಉಡುಪು ಧರಿಸಿದ್ದಕ್ಕೆ ಯುವತಿಯ ಹತ್ಯೆ; ಕೊಲೆ ಮಾಡಿದ್ದು ನಾವಲ್ಲ ಎಂದ ತಾಲಿಬಾನ್ ಉಗ್ರರು

ಬಿಜೆಪಿ ಕಿಸಾನ್​ ಮೋರ್ಚಾ ಅಧ್ಯಕ್ಷ ಮತ್ತವರ ಪತ್ನಿಯ ಹತ್ಯೆ; ಉಗ್ರರ ಗುಂಡಿಗೆ ಇಬ್ಬರೂ ಬಲಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು