ಸಿಧು ಮೂಸೆ ವಾಲಾ ಹತ್ಯೆ ಪ್ರಕರಣ: ಗ್ಯಾಂಗ್​ಸ್ಟರ್​ಗೆ ಶಸ್ತ್ರಾಸ್ತ್ರ ಪೂರೈಸಿದ್ದ ವ್ಯಕ್ತಿಯ ಬಂಧನ

Dharmanjot Singh Kahlon: ಪಂಜಾಬ್‌ನ ಖ್ಯಾತ ಗಾಯಕ ಸಿಧು ಮೂಸೆವಾಲಾ(Sidhu Moose Wala )ಹತ್ಯೆ ಪ್ರಕರಣದಲ್ಲಿ ಇದೀಗ ವಾಂಟೆಡ್ ಶಸ್ತ್ರಾಸ್ತ್ರ ವ್ಯಾಪಾರಿಯನ್ನು ಬಂಧಿಸಲಾಗಿದ್ದು, ಮೂಸೆವಾಲಾ ಹತ್ಯೆಗೆ ಆತನೇ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಿಧು ಮೂಸೆ ವಾಲಾ ಹತ್ಯೆ ಪ್ರಕರಣ: ಗ್ಯಾಂಗ್​ಸ್ಟರ್​ಗೆ ಶಸ್ತ್ರಾಸ್ತ್ರ ಪೂರೈಸಿದ್ದ ವ್ಯಕ್ತಿಯ ಬಂಧನ
ಧರ್ಮಂಜೋತ್ ಸಿಂಗ್ ಕಹ್ಲೋನ್
Follow us
ನಯನಾ ರಾಜೀವ್
|

Updated on: Aug 10, 2023 | 10:26 AM

ಪಂಜಾಬ್‌ನ ಖ್ಯಾತ ಗಾಯಕ ಸಿಧು ಮೂಸೆವಾಲಾ(Sidhu Moose Wala )ಹತ್ಯೆ ಪ್ರಕರಣದಲ್ಲಿ ಇದೀಗ ವಾಂಟೆಡ್ ಶಸ್ತ್ರಾಸ್ತ್ರ ವ್ಯಾಪಾರಿಯನ್ನು ಬಂಧಿಸಲಾಗಿದ್ದು, ಮೂಸೆವಾಲಾ ಹತ್ಯೆಗೆ ಆತನೇ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಶಸ್ತ್ರಾಸ್ತ್ರ ವ್ಯಾಪಾರಿಯನ್ನು ಅಮೆರಿಕದಲ್ಲಿ ಪೊಲೀಸರು ಬಂಧಿಸಿದ್ದಾರೆ, ಅವರನ್ನು ಭಾರತಕ್ಕೆ ಕರೆತರಬಹುದು ಎಂದು ಹೇಳಲಾಗುತ್ತಿದೆ.

ಧರ್ಮಂಜೋತ್ ಸಿಂಗ್ ಕಹ್ಲೋನ್ ಎಂಬ ದೊಡ್ಡ ಶಸ್ತ್ರಾಸ್ತ್ರ ವ್ಯಾಪಾರಿಯನ್ನು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ, ಈತ ಗ್ಯಾಂಗ್​ಸ್ಟರ್ ​​ಲಾರೆನ್ಸ್ ಬಿಷ್ಣೋಯ್ ಅವರಿಗೆ ತುಂಬಾ ನಿಕಟವಾಗಿದ್ದ ಎಂದು ಹೇಳಲಾಗಿದೆ. ಆತನ ಸೂಚನೆಯ ಮೇರೆಗೆ ಮೂಸೇವಾಲ ಅವರನ್ನು ಹತ್ಯೆ ಮಾಡಲಾಗಿತ್ತು. ಲಾರೆನ್ಸ್ ಬಿಷ್ಣೋಯ್ ಕಳೆದ ಹಲವಾರು ವರ್ಷಗಳಿಂದ ಜೈಲಿನಲ್ಲಿದ್ದ, ಅಲ್ಲಿಂದ ಅವರು ತಮ್ಮ ಗ್ಯಾಂಗ್‌ನೊಂದಿಗೆ ಸಂಪರ್ಕದಲ್ಲಿದ್ದ.

ಮತ್ತಷ್ಟು ಓದಿ: ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದ ಆರೋಪಿ ಸಚಿನ್ ಬಿಷ್ಣೋಯಿ ಅಜರ್‌ಬೈಜಾನ್‌ನಿಂದ ಭಾರತಕ್ಕೆ ಹಸ್ತಾಂತರ

ಅಮೆರಿಕದಲ್ಲಿ ಬಂಧನಕ್ಕೊಳಗಾಗಿರುವ ಶಸ್ತ್ರಾಸ್ತ್ರ ವ್ಯಾಪಾರಿ ಕಹ್ಲೋನ್, ಸಿಧು ಮುಸೆವಾಲಾ ಅವರನ್ನು ಕೊಂದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದ. ಶೀಘ್ರದಲ್ಲೇ ಭಾರತೀಯ ಏಜೆನ್ಸಿಗಳು ಎಫ್‌ಬಿಐ ಅನ್ನು ಸಂಪರ್ಕಿಸಲಿವೆ ಎಂದು ಹೇಳಲಾಗುತ್ತಿದೆ, ನಂತರ ಕಹ್ಲೋನ್ ಅನ್ನು ಭಾರತಕ್ಕೆ ಕರೆತರಲು ಸಿದ್ಧತೆಗಳು ಪ್ರಾರಂಭವಾಗುತ್ತವೆ.

ಪಂಜಾಬ್‌ನ ಅಮೃತಸರದಲ್ಲಿ ವಾಸಿಸುತ್ತಿರುವ ಈ ಶಸ್ತ್ರಾಸ್ತ್ರ ವ್ಯಾಪಾರಿ ಎಕೆ-47 ರೈಫಲ್‌ಗಳು ಮತ್ತು ಇತರ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಣೆ ಮಾಡಿದ ಆರೋಪ ಹೊತ್ತಿದ್ದಾನೆ.

ಲಾರೆನ್ಸ್ ಬಿಷ್ಣೋಯ್ ಅವರ ಸಹಚರ ಸಚಿನ್ ಬಿಷ್ಣೋಯ್ ಅವರನ್ನು ಅಜೆರ್ಬೈಜಾನ್‌ನಿಂದ ಭಾರತಕ್ಕೆ ಕರೆತರಲಾಯಿತು.  ಸಚಿನ್ ಕೂಡ ಬಿಷ್ಣೋಯ್ ಗ್ಯಾಂಗ್‌ನ ಗ್ಯಾಂಗ್​ಸ್ಟರ್ ಆಗಿದ್ದ, ಇವರ ಹಸ್ತಾಂತರಕ್ಕಾಗಿ ದೀರ್ಘಕಾಲ ಪ್ರಯತ್ನಿಸಲಾಯಿತು. ಇದೇ ಸಚಿನ್ ಬಿಷ್ಣೋಯ್ ಅಮೆರಿಕದಲ್ಲಿ ಡೀಲರ್ ಹೇಗೆ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದ ಎಂಬುದನ್ನು ಏಜೆನ್ಸಿಗಳಿಗೆ ತಿಳಿಸಿದ್ದರು.

ಈತ ಲಾರೆನ್ಸ್ ಬಿಷ್ಣೋಯ್ ಮತ್ತು ಬಾಂಬಿಹಾ ಗ್ಯಾಂಗ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದ ಎಂದು ಹೇಳಿದ್ದಾನೆ. ಸಚಿನ್ ಬಿಷ್ಣೋಯ್ ಲಾರೆನ್ಸ್ ಬಿಷ್ಣೋಯ್ ಅವರ ಸೋದರಸಂಬಂಧಿ.

ಕಳೆದ ವರ್ಷ ಮೇ 29 ರಂದು ಪಂಜಾಬ್‌ನ ಮಾನ್ಸಾದಲ್ಲಿ 28 ವರ್ಷದ ಗಾಯಕ ಮತ್ತು ಯುವ ನಾಯಕ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಹತ್ಯೆಯ ಒಂದು ದಿನದ ಮೊದಲು ಅವರ ಭದ್ರತೆಯನ್ನು ತೆಗೆದುಹಾಕಲಾಗಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಖೋ- ಖೋ ವಿಶ್ವಕಪ್: ಭಾರತ ಮಹಿಳಾ- ಪುರುಷ ತಂಡಗಳೇ ಚಾಂಪಿಯನ್ಸ್
ಖೋ- ಖೋ ವಿಶ್ವಕಪ್: ಭಾರತ ಮಹಿಳಾ- ಪುರುಷ ತಂಡಗಳೇ ಚಾಂಪಿಯನ್ಸ್
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ