ಕೆನಡಾದಲ್ಲಿ ಭಾರತದ ರಾಷ್ಟ್ರಧ್ವಜ ಸುಟ್ಟು, ಮೋದಿ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಸಿಖ್ಖರ ಪ್ರತಿಭಟನೆ

Hardeep Singh Nijjar: ಕೆನಡಾದ ಸಿಖ್ಖರು ಒಟ್ಟಾವಾ, ಟೊರೊಂಟೊ ಮತ್ತು ವ್ಯಾಂಕೋವರ್‌ನಲ್ಲಿರುವ ಭಾರತೀಯ ರಾಜತಾಂತ್ರಿಕ ಕಚೇರಿ ಮುಂದೆ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಪ್ರತಿಭಟನೆ ವೇಳೆ ಭಾರತದ ರಾಷ್ಟ್ರಧ್ವಜವನ್ನು ಸುಟ್ಟು ಹಾಕಿದ್ದು, ಪ್ರಧಾನಿ ಮೋದಿ ಅವರ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ.

ಕೆನಡಾದಲ್ಲಿ ಭಾರತದ ರಾಷ್ಟ್ರಧ್ವಜ ಸುಟ್ಟು, ಮೋದಿ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಸಿಖ್ಖರ ಪ್ರತಿಭಟನೆ
ಕೆನಡಾದಲ್ಲಿ ಭಾರತದ ವಿರುದ್ಧ ಸಿಖ್ಖ್​​ ಪ್ರತಿಭಟನೆ
Follow us
|

Updated on: Sep 26, 2023 | 12:54 PM

ಖಾಲಿಸ್ತಾನ್  (Khalistan) ಉಗ್ರನ ಹತ್ಯೆ ನಂತರ ಕೆನಡಾ ಮತ್ತು ಭಾರತದ ನಡುವೆ ಮುಸುಕಿನ ಗುದ್ದಾಟ ಮುಂದುವರಿದೆ. ಇದೀಗ ಈ ಕೆನಡಾದ ಸಿಖ್ಖರು ಒಟ್ಟಾವಾ, ಟೊರೊಂಟೊ ಮತ್ತು ವ್ಯಾಂಕೋವರ್‌ನಲ್ಲಿರುವ ಭಾರತೀಯ ರಾಜತಾಂತ್ರಿಕ ಕಚೇರಿ ಮುಂದೆ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಪ್ರತಿಭಟನೆ ವೇಳೆ ಭಾರತದ ರಾಷ್ಟ್ರಧ್ವಜವನ್ನು ಸುಟ್ಟು ಹಾಕಿದ್ದು, ಪ್ರಧಾನಿ ಮೋದಿ ಅವರ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಟೊರೊಂಟೊದಲ್ಲಿ ಸುಮಾರು 100 ಜನ ಹಾಗೂ ವ್ಯಾಂಕೋವರ್‌ನಲ್ಲಿ ಸುಮಾರು 200 ಪ್ರತಿಭಟನಾಕಾರರು ಭಾಗವಹಿಸಿದ್ದರು ಎಂದು ವರದಿ ಹೇಳಿದೆ. ಇಂದು ಬೆಳಿಗ್ಗೆ ಟೊರೊಂಟೊದಲ್ಲಿರುವ ಭಾರತೀಯ ಹೈಕಮಿಷನರ್ ಕಚೇರಿಯ ಮುಂದೆ ಪ್ರತಿಭಟನೆ ಮಾಡಲು ಶುರು ಮಾಡಿದ್ದಾರೆ. ಈ ಸಮಯದಲ್ಲಿ , “ಖಾಲಿಸ್ತಾನ್” ಧ್ವಜಗಳನ್ನು ಹಾರಿಸಿದ್ದಾರೆ. ಇದು ಭಾರತದಲ್ಲಿರುವ ಸಿಖ್ಖರಿಗೆ ಪ್ರತ್ಯೇಕ ರಾಜ್ಯದ ನೀಡುವ ಹೋರಾಟಕ್ಕೆ ಬೆಂಬಲದ ಸಂಕೇತವಾಗಿದೆ ಎಂದು ಹೇಳಲಾಗಿದೆ.

ಈ ಪ್ರತಿಭಟನೆ ಸಮಯದಲ್ಲಿ ಖಾಲಿಸ್ತಾನಿಗಳ ಪರವಾಗಿ ನಿಂತ ಕೆನಡಾದ ಪ್ರಧಾನಿ ಜಸ್ಟಿನ್​​ ಟ್ರುಡೊ ಅವರಿಗೆ ಧನ್ಯವಾದ ತಿಳಿಸಿದರು. ಇನ್ನು ಹತ್ಯೆ ಆಗಿರುವ ಖಾಲಿಸ್ತಾನಿಗಳಿಗೆ ನ್ಯಾಯ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದರಲ್ಲಿ ಒಬ್ಬ ಪ್ರತಿಭಟನಕಾರ ಕೆನಡಾದ ಪ್ರಧಾನಿ ಜಸ್ಟಿನ್​​ ಟ್ರುಡೊ ಅವರಿಗೆ ಕೃತಜ್ಞರಾಗಿರುತ್ತೇವೆ. ಇಂತಹ ಹೇಡಿತನದ ಕೃತ್ಯಕ್ಕೆ ಸರಿಯಾದ ಉತ್ತರ ನೀಡಬೇಕು ಎಂದು ಹೇಳಿದ್ದಾರೆ.

ಕೆನಡಾದ ಸಿಖ್ ಪ್ರತ್ಯೇಕತಾವಾದಿ ನಾಯಕನ ಹತ್ಯೆ ನಂತರ ಕೆನಡಾ ಮತ್ತು ಭಾರತದ ನಡುವಿನ ರಾಜತಾಂತ್ರಿಕ ಸಂಬಂಧದಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿದೆ. ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಸಾವಿಗೆ ಭಾರತವೇ ಕಾರಣ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿದ್ದಾರೆ. ಆದರೆ ಭಾರತ ಇದು ಆಧಾರ ರಹಿತ ಆರೋಪ ಎಂದು ಹೇಳಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಸರ್ಕಾರ ಗುಪ್ತಚರ ಸಂಸ್ಥೆ ಮೂಲಕ ತನಿಖೆಯನ್ನು ನಡೆಸುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: ಭಾರತ-ಕೆನಡಾ ಸಂಬಂಧದಲ್ಲಿ ಬಿರುಕು; ಮಸೂರ್ ಬೇಳೆ ವ್ಯಾಪಾರಿಗಳಿಗೆ ಆತಂಕ

ಉಭಯ ರಾಷ್ಟ್ರಗಳ ನಡುವಿನ ಉದ್ವಿಗ್ನತೆಯಿಂದ, ಎರಡು ರಾಷ್ಟ್ರಗಳ ವ್ಯಾಪರ ವಹಿವಾಟುಗಳ ಮೇಲೆ ಪರಿಣಾಮ ಉಂಟು ಮಾಡಿದೆ. ಇನ್ನು ಎರಡು ರಾಷ್ಟ್ರಗಳ ಹಿರಿಯ ರಾಜತಾಂತ್ರಿಕರನ್ನು ವಾಪಸ್ಸು ಕರೆಸಿಕೊಂಡಿದೆ, ಇದರ ಜತೆಗೆ ಕೆನಡಿಯನ್ನರಿಗೆ ವೀಸಾಗಳನ್ನು ಭಾರತವು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಉತ್ತರ ನೀಡಬೇಕು ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಹೇಳಿದ್ದಾರೆ. ಆದರೆ ಭಾರತ ಜಸ್ಟಿನ್ ಟ್ರುಡೊ ಅವರದ್ದು “ಅಸಂಬದ್ಧ” ಹೇಳಿಕೆ ಎಂದು ಹೇಳಿದೆ. ಕೆನಡಾದಲ್ಲಿ ಭಾರತ ವಿರೋಧಿ ಚಟುವಟಿಕೆಗಳು ನಡೆಯುತ್ತಿದೆ ಎಂದು ಹೇಳಿದೆ. ನಾವು ಯಾವುದೇ ತನಿಖೆಗೂ ತಯಾರಾಗಿದ್ದೇವೆ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ