ರಷ್ಯಾದ ಮಿಲಿಟರಿ ವಿಮಾನ ಪತನ; 6 ಜನ ಸಾವು

ರಷ್ಯಾದ ದೂರಪೂರ್ವ ಪ್ರದೇಶವಾದ ಅಮುರ್ ಪ್ರಾಂತ್ಯದಲ್ಲಿ ಸೈನಿಕ ವಿಮಾನವೊಂದು ಪತನಗೊಂಡು 6 ಜನರು ಮೃತಪಟ್ಟಿದ್ದಾರೆ. ವಿಮಾನ ಪತನಕ್ಕೆ ತಾಂತ್ರಿಕ ದೋಷವೇ ಅಥವಾ ಪ್ರತಿಕೂಲ ವಾತಾವರಣವೇ ಕಾರಣವೇ ಎಂಬುದರ ಕುರಿತು ರಷ್ಯಾದ ಮಿಲಿಟರಿ ತನಿಖಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ವಿಮಾನವು ನೆಲಕ್ಕೆ ಅಪ್ಪಳಿಸಿದ ತಕ್ಷಣವೇ ಅದರ ಇಂಧನ ಟ್ಯಾಂಕ್‌ಗಳು ಸ್ಫೋಟಗೊಂಡಿವೆ ಎನ್ನಲಾಗಿದೆ. ಇದರಿಂದಾಗಿ ಇಡೀ ವಿಮಾನಕ್ಕೆ ಭಾರಿ ಪ್ರಮಾಣದ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾಗಿದೆ.

ರಷ್ಯಾದ ಮಿಲಿಟರಿ ವಿಮಾನ ಪತನ; 6 ಜನ ಸಾವು
Russian Military Plane Crash
Image Credit source: TV9

Updated on: Sep 29, 2026 | 8:07 PM

ಮಾಸ್ಕೋ, ಸೆಪ್ಟೆಂಬರ್ 29: ರಷ್ಯಾದ ಅಮುರ್ ಪ್ರಾಂತ್ಯದಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದ ರಷ್ಯನ್ ಮಿಲಿಟರಿಯ ‘ತುಪೊಲೆವ್ ಟು-95’ ಬಾಂಬರ್ ವಿಮಾನ ಇಂದು ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿದ್ದ 6 ಮಂದಿ ಸಿಬ್ಬಂದಿ ಮೃತಪಟ್ಟು, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರಷ್ಯಾ ರಕ್ಷಣಾ ಸಚಿವಾಲಯ ತಿಳಿಸಿದೆ.  ಕ್ರಾಸ್ನೊಯಾರೋವೊ ಗ್ರಾಮದ ಬಳಿಯ ಜನವಸತಿಯಿಲ್ಲದ ಪ್ರದೇಶದಲ್ಲಿ, ವಿಮಾನವು ಪಶ್ಚಿಮಕ್ಕೆ ಜಿಗಿದು ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಈ ದುರಂತ ಸಂಭವಿಸಿದೆ.

ಈ ವಿಮಾನದಲ್ಲಿ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು. ವಿಮಾನ ಅಪಘಾತದಲ್ಲಿ 6 ಮಂದಿ ದುರಂತ ಅಂತ್ಯ ಕಂಡಿದ್ದಾರೆ. ಈ ಪೈಕಿ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಬದುಕುಳಿದ ಏಕೈಕ ಸಿಬ್ಬಂದಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇದನ್ನೂ ಓದಿ: ಕಾಂಗೋದ ವಸತಿ ಪ್ರದೇಶದ ಮೇಲೆ ಅಪ್ಪಳಿಸಿ ಧಗಧಗನೆ ಹೊತ್ತಿ ಉರಿದ ವಿಮಾನ: ಮಗು ಸೇರಿ 17 ಮಂದಿ ಸಾವು

“ಸೆಪ್ಟೆಂಬರ್ 29ರಂದು ಅಮುರ್ ಪ್ರಾಂತ್ಯದಲ್ಲಿ ತರಬೇತಿ ಹಾರಾಟದ ವೇಳೆ ಟು-95 ವಿಮಾನ ಪತನಗೊಂಡಿದೆ. ಜನವಾಸವಿಲ್ಲದ ಪ್ರದೇಶದಲ್ಲಿ ವಿಮಾನ ಬಿದ್ದಿದ್ದು, ಪ್ರಾಥಮಿಕ ಮಾಹಿತಿಯಂತೆ 6 ಮಂದಿ ಸಿಬ್ಬಂದಿ ಮೃತಪಟ್ಟಿದ್ದಾರೆ. ಗಾಯಗೊಂಡ ಮತ್ತೊಬ್ಬರನ್ನು ತಕ್ಷಣವೇ ವೈದ್ಯಕೀಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ” ಎಂದು ರಷ್ಯಾದ ರಕ್ಷಣಾ ಸಚಿವಾಲಯವು ಪ್ರಭುತ್ವದ ‘ಟಾಸ್’ ಸುದ್ದಿ ಸಂಸ್ಥೆಗೆ ತಿಳಿಸಿದೆ.


ಇದನ್ನೂ ಓದಿ: ಬಾಂಗ್ಲಾದೇಶಕ್ಕೆ ಅಣು ಇಂಧನ ಸಾಗಿಸುತ್ತಿದ್ದ ರಷ್ಯಾ ವಿಮಾನಕ್ಕೆ ವಾಯುಮಾರ್ಗ ಬಂದ್ ಮಾಡಿದ ಪಾಕಿಸ್ತಾನ!

ವಿಮಾನವು ನೆಲಕ್ಕೆ ಅಪ್ಪಳಿಸಿದ ತಕ್ಷಣವೇ ಅದರ ಇಂಧನ ಟ್ಯಾಂಕ್‌ಗಳು ಸ್ಫೋಟಗೊಂಡಿವೆ ಎನ್ನಲಾಗಿದೆ. ಇದರಿಂದಾಗಿ ಇಡೀ ವಿಮಾನಕ್ಕೆ ಭಾರಿ ಪ್ರಮಾಣದ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾಗಿದೆ. ಪ್ರಸ್ತುತ ಈ ವಿಮಾನ ಪತನಕ್ಕೆ ನಿಖರ ಕಾರಣ ಏನೆಂಬುದನ್ನು ರಕ್ಷಣಾ ಇಲಾಖೆ ಇನ್ನೂ ಬಹಿರಂಗಪಡಿಸಿಲ್ಲ. ಘಟನೆಗೆ ಸಂಬಂಧಿಸಿದಂತೆ ರಷ್ಯಾ ಮಿಲಿಟರಿ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದು, ತಾಂತ್ರಿಕ ದೋಷವೇ ಅಥವಾ ಮಾನವ ಸಹಜ ತಪ್ಪೇ ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Loading...
Unable to load recommendations.
Follow Us