Joe Biden: ಅಮೆರಿಕದ ಅಧ್ಯಕ್ಷ ಜೋ ಬೈಡನ್​ಗಿತ್ತು ಕ್ಯಾನ್ಸರ್, ಶಸ್ತ್ರ ಚಿಕಿತ್ಸೆ ಬಳಿಕ ಸಂಪೂರ್ಣ ಗುಣಮುಖ

ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಇದೀಗ ಕ್ಯಾನ್ಸರ್​ನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕ್ಯಾನ್ಸರ್ ಅನ್ನು ತೆಗೆದುಹಾಕಲಾಗಿದೆ.

Joe Biden: ಅಮೆರಿಕದ ಅಧ್ಯಕ್ಷ ಜೋ ಬೈಡನ್​ಗಿತ್ತು ಕ್ಯಾನ್ಸರ್, ಶಸ್ತ್ರ ಚಿಕಿತ್ಸೆ ಬಳಿಕ ಸಂಪೂರ್ಣ ಗುಣಮುಖ
ಜೋ ಬೈಡನ್
Follow us
ನಯನಾ ರಾಜೀವ್
|

Updated on: Mar 04, 2023 | 11:05 AM

ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಇದೀಗ ಕ್ಯಾನ್ಸರ್​ನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕ್ಯಾನ್ಸರ್ ಅನ್ನು ತೆಗೆದುಹಾಕಲಾಗಿದೆ. ಅವರು ಇದೀಗ ಗುಣಮುಖರಾಗಿದ್ದು, ಹೆಚ್ಚಿನ ಚಿಕಿತ್ಸೆಯ ಅಗತ್ಯವಿಲ್ಲ ಎಂದು ಶ್ವೇತಭವನದ ವೈದ್ಯ ಕೆವಿನ್ ಓ ಕಾನರ್ ತಿಳಿಸಿದ್ದಾರೆ. 80 ವರ್ಷ ವಯಸ್ಸಿನ ಅಮೆರಿಕ ಅಧ್ಯಕ್ಷರಿಗೆ (US President) ಎದೆಯಲ್ಲಿ ಚರ್ಮದ ಕ್ಯಾನ್ಸರ್ (Cancer) ಕಾಣಿಸಿಕೊಂಡಿತ್ತು, ಅದನ್ನು ಫೆಬ್ರವರಿ ತಿಂಗಳಿನಲ್ಲಿ ತೆಗೆದುಹಾಕಲಾಗಿದೆ. ಬೈಡನ್‌ಗೆ ಇದ್ದಿದ್ದ ಎಲ್ಲಾ ಕ್ಯಾನ್ಸರ್ ಅಂಗಾಂಶಗಳನ್ನು ಯಶಸ್ವಿಯಾಗಿ ತೆಗೆದುಹಾಕಲಾಗಿದೆ.

ಅವರ ಆರೋಗ್ಯದ ರಕ್ಷಣೆಯ ಭಾಗವಾಗಿ ಅವರ ಮೇಲೆ ನಿಗಾ ಇರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಸಣ್ಣ ಗಾಯವನ್ನು ಬಾಸಲ್ ಸೆಲ್ ಕಾರ್ಸಿನೋಮ ಎಂದು ಕರೆಯಲಾಗುತ್ತದೆ. ಇದು ಕ್ಯಾನ್ಸರ್ ರೂಪವನ್ನು ತೆಗೆದುಕೊಳ್ಳಬಹುದು. ಯುಎಸ್ ಅಧ್ಯಕ್ಷ ಬೈಡನ್ ಈಗ ಆರೋಗ್ಯವಾಗಿದ್ದಾರೆ ಮತ್ತು ಹೆಚ್ಚಿನ ಚಿಕಿತ್ಸೆಯ ಅಗತ್ಯವಿಲ್ಲ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಹುಳಿ ಮತ್ತು ಖಾರವನ್ನು ಸಿಹಿಮಾಡುವ ಶಕ್ತಿ ಈ ಹಣ್ಣಿಗಿದೆ, ಯಾವುದು ಈ ಹಣ್ಣು?

ಈ ಕ್ಯಾನ್ಸರ್​ಗಳು ಇತರ ಕ್ಯಾನ್ಸರ್​ಗಳಂತೆ ಹರಡುವುದಿಲ್ಲ ಆದರೆ ಗಾತ್ರದಲ್ಲಿ ಹೆಚ್ಚಾಗಬಹುದು, ಅದಕ್ಕಾಗಿಯೇ ಅವುಗಳನ್ನು ತೆಗೆದುಹಾಕಲಾಗುತ್ತದೆ. ಬೈಡನ್ ಅವರ ಎದೆಯಿಂದ ಅದನ್ನು ತೆಗೆದುಹಾಕಲಾಗಿದೆ ಮತ್ತು ಅವರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ.

ಫೆಬ್ರವರಿ 16ರಂದು ಬೈಡನ್ ಅವರ ವಾರ್ಷಿಕ ವೈದ್ಯಕೀಯ ತಪಾಸಣೆಯ ವೇಳೆ ಎದೆಯ ಮೇಲಿದ್ದ ಗಾಯವನ್ನು ತೆಗೆದುಹಾಕಲಾಗಿತ್ತು. ಜೋ ಬೈಡನ್ ಅವರು 2024ರಲ್ಲಿ 2ನೇ ಬಾರಿ ಅಧ್ಯಕ್ಷರಾಗುವ ನಿರೀಕ್ಷೆಯಲ್ಲಿ ತಯಾರಿ ನಡೆಸುತ್ತಿದ್ದಾರೆ. ಆದರೂ ಅವರ ಪತ್ನಿ ಜಿಲ್ ಬೈಡನ್ ಸ್ಪರ್ಧಿಸಲು ಯೋಜಿಸಿದ್ದಾರೆ ಎನ್ನಲಾಗಿದೆ. ಆದರೆ ಈ ಬಗೆಗಿನ ನಿರ್ಧಾರವನ್ನು ಅಧಿಕೃತವಾಗಿ ಘೋಷಣೆ ಮಾಡಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು