AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಪವಾಡ; ದಾಖಲೆಯ ಅಧಿಕಾರಾವಧಿಗೆ ಮೋದಿಗೆ ಸ್ಲೋವಾಕಿಯಾ ಪ್ರಧಾನಿ ಅಭಿನಂದನೆ

ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಫ್ರಾನ್ಸ್ ಹಾಗೂ ಸ್ಲೋವಾಕಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಂದು ಜಾಗತಿಕ ಗೌರವ ಸಂದಿದೆ. ಸ್ಲೋವಾಕಿಯಾ ದೇಶದ ಪ್ರಧಾನ ಮಂತ್ರಿ ರಾಬರ್ಟ್ ಫಿಕೊ ಅವರು ಭಾರತದ ಪ್ರಚಂಡ ಆರ್ಥಿಕ ಅಭಿವೃದ್ಧಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಇದರ ಜೊತೆಗೆ, ಭಾರತದ ಇತಿಹಾಸದಲ್ಲೇ ಸತತವಾಗಿ ಸುದೀರ್ಘ ಅವಧಿಗೆ ಪ್ರಧಾನಿಯಾಗಿ ದಾಖಲೆ ನಿರ್ಮಿಸುತ್ತಿರುವ ನರೇಂದ್ರ ಮೋದಿ ಅವರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ರಾಜಕೀಯ ಪವಾಡ; ದಾಖಲೆಯ ಅಧಿಕಾರಾವಧಿಗೆ ಮೋದಿಗೆ ಸ್ಲೋವಾಕಿಯಾ ಪ್ರಧಾನಿ ಅಭಿನಂದನೆ
Slovakia Pm With ModiImage Credit source: x
ಸುಷ್ಮಾ ಚಕ್ರೆ
|

Updated on:Jun 15, 2026 | 6:43 PM

Share

ಬ್ರಾಟಿಸ್ಲಾವಾ, ಜೂನ್ 15: ಯುರೋಪ್ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ಅವರ ಜಾಗತಿಕ ನಾಯಕತ್ವಕ್ಕೆ ಮತ್ತೊಂದು ಮನ್ನಣೆ ಸಿಕ್ಕಿದೆ. ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ ಅವರು ಭಾರತವು ಪ್ರಸ್ತುತ ಸಾಧಿಸುತ್ತಿರುವ ಜಾಗತಿಕ ಆರ್ಥಿಕ ಪ್ರಗತಿಯನ್ನು ಶ್ಲಾಘಿಸಿದ್ದು, ಪ್ರಧಾನಿ ಮೋದಿಯವರ ಐತಿಹಾಸಿಕ ಅಧಿಕಾರಾವಧಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

1993ರಲ್ಲಿ ಸ್ಲೋವಾಕಿಯಾ ಸ್ವತಂತ್ರ ರಾಷ್ಟ್ರವಾದ ನಂತರ ಭಾರತದ ಪ್ರಧಾನಮಂತ್ರಿಯೊಬ್ಬರು ಆ ದೇಶಕ್ಕೆ ನೀಡುತ್ತಿರುವ ಮೊದಲ ಐತಿಹಾಸಿಕ ಭೇಟಿ ಇದಾಗಿದ್ದು, ಉಭಯ ದೇಶಗಳ ದ್ವಿಪಕ್ಷೀಯ ಬಾಂಧವ್ಯದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಯಾಗಿದೆ. ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಭಾರತದ ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ನಂತರ ಜಂಟಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭಾರತದ ಸಾಧನೆಯನ್ನು ಮುಕ್ತವಾಗಿ ಹೊಗಳಿದ್ದಾರೆ.

ಇದನ್ನೂ ಓದಿ: ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ

“ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತವು ಇಂದು ಜಾಗತಿಕ ಮಟ್ಟದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಶಕ್ತಿಯಾಗಿದೆ. ತಂತ್ರಜ್ಞಾನ, ರಕ್ಷಣೆ, ಮೂಲಸೌಕರ್ಯ ಮತ್ತು ಕೈಗಾರಿಕಾ ವಲಯದಲ್ಲಿ ಭಾರತ ಸಾಧಿಸುತ್ತಿರುವ ಅಭಿವೃದ್ಧಿ ಇಡೀ ಜಗತ್ತಿಗೆ ಮಾದರಿಯಾಗಿದೆ. ಇಷ್ಟು ದೊಡ್ಡ ದೇಶವನ್ನು ದೀರ್ಘಕಾಲದಿಂದ ಯಶಸ್ವಿಯಾಗಿ ಮುನ್ನಡೆಸುತ್ತಾ, ದಾಖಲೆಯ ಅವಧಿಗೆ ಪ್ರಧಾನಿಯಾಗಿ ಮುಂದುವರಿಯುತ್ತಿರುವ ನರೇಂದ್ರ ಮೋದಿ ಅವರ ನಾಯಕತ್ವ ನಿಜಕ್ಕೂ ಶ್ಲಾಘನೀಯ. ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು” ಎಂದು ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಹೇಳಿದ್ದಾರೆ.

ಭಾರತದ ಪ್ರಚಂಡ ಆರ್ಥಿಕ ಬೆಳವಣಿಗೆ, ಡಿಜಿಟಲ್ ಕ್ರಾಂತಿ ಮತ್ತು ಕೃತಕ ಬುದ್ಧಿಮತ್ತೆ (AI) ವಲಯದಲ್ಲಿನ ಅಭೂತಪೂರ್ವ ಪ್ರಗತಿಯನ್ನು ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಭಾರತವು ತಂತ್ರಜ್ಞಾನ ವಲಯದಲ್ಲಿ ಪಶ್ಚಿಮ ಯುರೋಪಿನ ಮುಂದುವರಿದ ರಾಷ್ಟ್ರಗಳನ್ನೇ ಹಿಂದಿಕ್ಕಿ ಜಾಗತಿಕ ನಾಯಕನಾಗಿ ಹೊರಹೊಮ್ಮಿದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ, ಭಾರತದಲ್ಲಿ ಸತತ 12 ವರ್ಷಗಳ ಕಾಲ ಪ್ರಧಾನಿಯಾಗಿ ಅತಿ ದೀರ್ಘಾವಧಿಯ ದಾಖಲೆ ನಿರ್ಮಿಸಿರುವ ನರೇಂದ್ರ ಮೋದಿ ಅವರ ರಾಜಕೀಯ ಪಯಣವನ್ನು ‘ರಾಜಕೀಯ ಪವಾಡ’ ಎಂದು ಬಣ್ಣಿಸಿದ್ದಾರೆ. ಅಲ್ಲದೆ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (UNSC) ಭಾರತದ ಖಾಯಂ ಸದಸ್ಯತ್ವಕ್ಕೆ ಸ್ಲೋವಾಕಿಯಾ ತನ್ನ ಸಂಪೂರ್ಣ ಬೆಂಬಲ ಘೋಷಿಸಿದೆ.

ಇದನ್ನೂ ಓದಿ: Video: ಸ್ಲೋವಾಕಿಯಾದಲ್ಲಿ ಬ್ರೆಡ್ ಮತ್ತು ಉಪ್ಪಿನೊಂದಿಗೆ ಪ್ರಧಾನಿ ಮೋದಿಗೆ ಸ್ವಾಗತ

ಸ್ಲೋವಾಕಿಯಾ ಪ್ರಧಾನಿಯವರ ಪ್ರಶಂಸೆಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ಮೋದಿ, ಮಧ್ಯ ಯುರೋಪಿಯನ್ ರಾಷ್ಟ್ರವಾದ ಸ್ಲೋವಾಕಿಯಾ ಜೊತೆಗಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲು ಭಾರತ ಬದ್ಧವಾಗಿದೆ ಎಂದು ತಿಳಿಸಿದರು. ಆಟೋಮೊಬೈಲ್ ಮತ್ತು ಡಿಫೆನ್ಸ್ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಸ್ಲೋವಾಕಿಯಾ ಕಂಪನಿಗಳು ಭಾರತದ ‘ಮೇಕ್ ಇನ್ ಇಂಡಿಯಾ’ ಯೋಜನೆಯಡಿ ಹೂಡಿಕೆ ಮಾಡಲು ಪ್ರಧಾನಿ ಮೋದಿ ಆಹ್ವಾನ ನೀಡಿದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 6:37 pm, Mon, 15 June 26

Follow Us
ನೋಡೋಕೆ ಸಮಾಜ ಸೇವೆ: ಆ್ಯಂಬುಲೆನ್ಸ್​ನಲ್ಲಿ ನಡೀತಿದ್ದಿದ್ದು ಡ್ರಗ್ಸ್ ದಂಧೆ!
ನೋಡೋಕೆ ಸಮಾಜ ಸೇವೆ: ಆ್ಯಂಬುಲೆನ್ಸ್​ನಲ್ಲಿ ನಡೀತಿದ್ದಿದ್ದು ಡ್ರಗ್ಸ್ ದಂಧೆ!
ಮಳೆ ಕೊರತೆ: ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ
ಮಳೆ ಕೊರತೆ: ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ