ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನ

PM Robert Fico: ಕ್ಯಾಬಿನೆಟ್ ಸಭೆಯ ನಂತರ ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಇಂದು ಅನೇಕ ಬಾರಿ ಗುಂಡು ಹಾರಿಸಲಾಗಿದ್ದು, ಮಾರಣಾಂತಿಕ ಗಾಯಗಳಿಂದ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನ
ಗುಂಡೇಟಿನಿಂದ ಗಾಯಗೊಂಡ ರಾಬರ್ಟ್ ಫಿಕೊ ಅವರನ್ನು ಕಾರಿನಲ್ಲಿ ಕರೆದೊಯ್ಯುತ್ತಿರುವ ಸಿಬ್ಬಂದಿ
Follow us
ಸುಷ್ಮಾ ಚಕ್ರೆ
|

Updated on: May 15, 2024 | 10:37 PM

ನವದೆಹಲಿ: ಇಂದು ಮಧ್ಯಾಹ್ನ ನಡೆದ ಗುಂಡಿನ ದಾಳಿಯಲ್ಲಿ ಸ್ಲೋವಾಕಿಯಾದ (Slovakia) ಪ್ರಧಾನಿ ರಾಬರ್ಟ್ ಫಿಕೊ (Robert Fico) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮ್ಮ ಕ್ಯಾಬಿನೆಟ್ ಸದಸ್ಯರ ಜೊತೆ ಸಭೆ ನಡೆಸಲು ಬಂದಿದ್ದ ವೇಳೆ ಪ್ರಧಾನಿ ಮೇಲೆ ಈ ದಾಳಿ ನಡೆಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಒಬ್ಬ ಶಂಕಿತನನ್ನು ಬಂಧಿಸಲಾಗಿದೆ. ಪೊಲೀಸರು ಗುಂಡಿನ ದಾಳಿ ನಡೆದ ಸ್ಥಳವನ್ನು ಸೀಲ್ ಮಾಡಿದ್ದಾರೆ.

ಸ್ಲೋವಾಕಿಯನ್ ರಾಜಧಾನಿಯ ಈಶಾನ್ಯಕ್ಕೆ ಸುಮಾರು 150 ಕಿಲೋ ಮೀಟರ್ ದೂರದಲ್ಲಿರುವ ಹ್ಯಾಂಡ್ಲೋವಾ ಪಟ್ಟಣದ ಸಂಸ್ಕೃತಿಯ ಹೌಸ್ ಹೊರಗೆ 4 ಬಾರಿ ಗುಂಡುಗಳನ್ನು ಹಾರಿಸಲಾಗಿದೆ. ಇದರಿಂದ 59 ವರ್ಷದ ರಾಬರ್ಟ್ ಫಿಕೊ ಅವರ ಹೊಟ್ಟೆಗೆ ಗುಂಡೇಟಿನಿಂದ ಗಾಯವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಇದನ್ನೂ ಓದಿ: ರಾಹುಲ್ ಗಾಂಧಿ ಜೊತೆ ಬಿಜೆಪಿಯಿಂದ ಮೋದಿ ಬದಲು ಚರ್ಚೆಗೆ ಇಳಿಯಲಿರುವ ಅಭಿನವ್ ಪ್ರಕಾಶ್ ಯಾರು?

ಹ್ಯಾಂಡ್ಲೋವಾದಲ್ಲಿ 59 ವರ್ಷದ ಪ್ರಧಾನಿಗೆ ಗುಂಡು ಹಾರಿಸಲಾಗಿದೆ ಎಂಬ ಮಾಹಿತಿ ಬಂದ ನಂತರ ಅವರಿಗಾಗಿ ಹೆಲಿಕಾಪ್ಟರ್ ಕಳುಹಿಸಲಾಗಿದೆ ಎಂದು ತುರ್ತು ಸೇವೆಗಳು ತಿಳಿಸಿವೆ. ಫಿಕೊ ಅವರನ್ನು ಹ್ಯಾಂಡ್ಲೋವಾ ಪಟ್ಟಣದ ಆಸ್ಪತ್ರೆಗೆ ಕರೆದೊಯ್ಯುವಾಗ ಪ್ರಜ್ಞೆ ಇತ್ತು. ಬುಲೆಟ್​ನಿಂದಾದ ಗಾಯಗಳಿಗೆ ಚಿಕಿತ್ಸೆ ನೀಡಲಾಯಿತು ಎಂದು ಆಸ್ಪತ್ರೆಯ ವಕ್ತಾರರು ತಿಳಿಸಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ.

ಸ್ಲೋವಾಕಿಯಾದಲ್ಲಿ ಯುರೋಪಿಯನ್ ಪಾರ್ಲಿಮೆಂಟ್ ಚುನಾವಣೆಗಳಿಗೆ ಕೇವಲ 3 ವಾರಗಳು ಬಾಕಿ ಇವೆ. ಈ ವೇಳೆ ಈ ಗುಂಡಿನ ದಾಳಿ ನಡೆದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಜನರ ಕಷ್ಟ ಕೇಳುವುದಿಲ್ಲ, ಏನೇನೋ ಮಾತನಾಡುತ್ತಾರೆ; ಅಮೇಥಿಯಲ್ಲಿ ಪ್ರಿಯಾಂಕಾ ಗಾಂಧಿ ಟೀಕೆ

“ಇಂದು ಹ್ಯಾಂಡ್ಲೋವಾದಲ್ಲಿ ಸರ್ಕಾರದ ಸಭೆಯ ನಂತರ, ಸ್ಲೋವಾಕ್ ಗಣರಾಜ್ಯದ ಪ್ರಧಾನಿ ರಾಬರ್ಟ್ ಫಿಕೊ ಅವರ ಮೇಲೆ ಹತ್ಯೆಯ ಯತ್ನ ನಡೆದಿದೆ” ಎಂದು ಸರ್ಕಾರವು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ. ಪ್ರಸ್ತುತ ಅವರನ್ನು ಹೆಲಿಕಾಪ್ಟರ್ ಮೂಲಕ ಬನ್ಸ್ಕಾ ಬೈಸ್ಟ್ರಿಕಾಗೆ ಮಾರಣಾಂತಿಕ ಸ್ಥಿತಿಯಲ್ಲಿ ಸಾಗಿಸಲಾಗುತ್ತಿದೆ. ಏಕೆಂದರೆ ಬ್ರಾಟಿಸ್ಲಾವಾಕ್ಕೆ ಹೋಗಲು ತುಂಬಾ ಸಮಯ ತೆಗೆದುಕೊಳ್ಳುತ್ತದೆ” ಎಂದು ಪೋಸ್ಟ್​ನಲ್ಲಿ ತಿಳಿಸಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್