AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Somalia Bomb Blast: ಸೊಮಾಲಿಯಾದ ಲೋವರ ಪ್ರದೇಶದಲ್ಲಿ ಬಾಂಬ್‌ ಸ್ಫೋಟ: 27 ಸಾವು

Somalia conflict: ಸೊಮಾಲಿಯ ಲೋವರ್ ಶಾಬೆಲ್ ಪ್ರದೇಶದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದಾರೆ. ಇದರಲ್ಲಿ ಹೆಚ್ಚಿನವರು ಮಕ್ಕಳಾಗಿದ್ದಾರೆ.

Somalia Bomb Blast: ಸೊಮಾಲಿಯಾದ ಲೋವರ ಪ್ರದೇಶದಲ್ಲಿ ಬಾಂಬ್‌ ಸ್ಫೋಟ: 27 ಸಾವು
ಸೊಮಾಲಿಯಾದ ಲೋವರ ಪ್ರದೇಶದಲ್ಲಿ ಬಾಂಬ್‌ ಸ್ಫೋಟImage Credit source: Reuters
Rakesh Nayak Manchi
|

Updated on:Jun 10, 2023 | 10:59 PM

Share

ಮೊಗಾದಿಶು (ಸೊಮಾಲಿಯಾ): ಲೋವರ್ ಶಾಬೆಲ್ ಪ್ರದೇಶದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ (Bomb Blast) ಕನಿಷ್ಠ 27 ಮಂದಿ ಸಾವನ್ನಪ್ಪಿದ್ದಾರೆ. ಇದರಲ್ಲಿ ಹೆಚ್ಚಿನವರು ಮಕ್ಕಳಾಗಿದ್ದಾರೆ ಎಂದು ಸಿಎನ್​ಎನ್​ ವರದಿ ಮಾಡಿದೆ. ಸೊಮಾಲಿ ಸರ್ಕಾರಿ ರಾಷ್ಟ್ರೀಯ ಸುದ್ದಿ ಸಂಸ್ಥೆಯನ್ನು ಉಲ್ಲೇಖಿಸಿ, ಸ್ಫೋಟದಿಂದಾಗಿ ಕನಿಷ್ಠ 53 ಜನರು ಗಾಯಗೊಂಡಿದ್ದಾರೆ ಎಂದು ವರದಿ ಮಾಡಿದೆ. ಪೂರ್ವ ಲೋವರ್ ಶಾಬೆಲ್ಲೆ ಪ್ರದೇಶದ ಜನಾಲೆ ಪ್ರದೇಶದ ಮುರಾಲೆ ಗ್ರಾಮದ ಫುಟ್ಬಾಲ್ ಮೈದಾನದಲ್ಲಿ ಸ್ಫೋಟ ಸಂಭವಿಸಿದೆ.

ಹಳ್ಳಿಯೊಂದರಲ್ಲಿ ತೆರೆದ ಮೈದಾನದಲ್ಲಿ ಮಕ್ಕಳು ಆಟವಾಡುತ್ತಿದ್ದಾಗ ಬಾಂಬ್‌ ಸ್ಫೋಟಗೊಂಡಿದೆ ಎಂದು ಕ್ರೋಲಿ ಪಟ್ಟಣದ ಉಪ ಜಿಲ್ಲಾಧಿಕಾರಿ ಅಬ್ದಿ ಅಹ್ಮದ್ ಅಲಿ ಹೇಳಿದ್ದಾರೆ. 22 ಮಕ್ಕಳ ಮಕ್ಕಳ ಶವಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಗೊಂಡವರ ಪೈಕಿ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.  ರಾಜಧಾನಿ ಮೊಗಾದಿಶುವಿನಲ್ಲಿ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮತ್ತೊಬ್ಬ ಬಾಲಕ ಸಾವನ್ನಪ್ಪಿದ್ದಾನೆ. ಸಾವನ್ನಪ್ಪಿದ ಮಕ್ಕಳು 10 ರಿಂದ 15 ವರ್ಷದೊಳಗಿನ ಹುಡುಗರಾಗಿದ್ದಾರೆ ಎಂದರು.

ಸೊಮಾಲಿ ರಾಜಧಾನಿಯಲ್ಲಿ ದಾಳಿಕೋರರ ಅಟ್ಟಹಾಸಕ್ಕೆ 6 ಮಂದಿ ಸಾವು

ಸೊಮಾಲಿ ರಾಜಧಾನಿ ಮೊಗಾದಿಶುವಿನಲ್ಲಿ ಅಲ್-ಶಬಾಬ್ ದಾಳಿಕೋರರು ಬೀಚ್‌ಸೈಡ್ ಹೋಟೆಲ್​ ಮೇಲೆ ನಡೆಸಿದ ದಾಳಿಯಲ್ಲಿ ಆರು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಸುಮಾರು 6 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ಪರ್ಲ್ ಬೀಚ್ ಹೋಟೆಲ್‌ನಿಂದ 80 ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದರು. ರಕ್ಷಣಾ ಕಾರ್ಯಾಚರಣೆಯಲ್ಲಿ ಮೂವರು ಭದ್ರತಾ ಪಡೆಗಳು ಸಾವನ್ನಪ್ಪಿದ್ದು, ಅವರ ಸಾಹಸಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ದಾಳಿಕೋರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:51 pm, Sat, 10 June 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ